LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಶ್ನೆ ಪತ್ರಿಕೆ ಸೋರಿಕೆ; ಯೂಥ್ ಕಾಂಗ್ರೆಸ್ ನಿಂದ ಧರಣಿ

ಬೆಂಗಳೂರು : ದೇಶದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕೆಂದು ಅಗ್ರಹಿಸಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಹೆಚ್ ಎಸ್ ಅವರ ನೇತೃತ್ವದಲ್ಲಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಲಾಯಿತು.news_1784741597_0_318.webp

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ ಹೆಚ್ ಎಸ್ ಅವರು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಸಿತಗೊಳಿಸಿವೆ. ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಅನ್ಯಾಯವಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಮಾಡುತಿದ್ದಾರೆ, ಸುಮಾರು ಎಂಟು ಜನ ವಿದ್ಯಾರ್ಥಿಗಳಿಂದ ಹೆಚ್ಚಿನವರು ಈಗಾಗಲೇ ನೆಟ್ ಪರೀಕ್ಷೆಯಲ್ಲಿ ಅಕ್ರಮ ತಡಲಾರದೆ ಸಾವನ್ನಪ್ಪಿದ್ದಾರೆ ಇದಕ್ಕೆ ಒಡೆಯರು ಎಂಬುದನ್ನು ಕೇಂದ್ರ ಸರ್ಕಾರ ಅದರಲ್ಲಿಯೂ ನರೇಂದ್ರ ಮೋದಿ ಅವರು ತಿಳಿಸಬೇಕಾಗಿದೆ.

ಕೇಂದ್ರ ಶಿಕ್ಷಣ ಖಾತೆ ಸಚಿವ ಧರ್ಮೇಂದ್ರ ಪ್ರಧಾನವರು ಈ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಇದೇ ವೇಳೆ ಒತ್ತಾಯವನ್ನು ಸಹ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ಪ್ರಕೃತಿ ಧಹನ ಮಾಡಲಾಯಿತು. ಪ್ರತಿಭಟನೆಯಲ್ಲಿ ಯುತ್ ಕಾಂಗ್ರೆಸ್ನ ಪದಾಧಿಕಾರಿಗಳು ಕಾಂಗ್ರೆಸ್ನ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆಹಿಲ್ಟನ್ ಗಾರ್ಡನ್ ಇನ್ ಬೆಂಗಳೂರು ಎಂಬಸಿ ಟೆಕ್‌ವಿಲ್ಲಾದಿಂದ ದೇಸಿ ಕ್ವೋಶೆಂಟ್‌ಗೆ ಚಾಲನೆಏಸರ್‌ನಿಂದ CSR ನ ಅಡಿಯಲ್ಲಿ  ನೇತ್ರದೀಪ್ ಕಣ್ಣಿನ ಆರೈಕೆ ಕೇಂದ್ರ ಆರಂಭಕಲೀಲಾ ಚಿತ್ರದ ಮುಹೂರ್ತ ಪಂಚಮುಖಿ ಗಣೇಶ ದೇವಾಲಯದಲ್ಲಿ ಚಾಲನೆವಿದ್ಯಾರ್ಥಿಗಳು ವೃತ್ತಿ ಜೊತೆಗೆ ಪ್ರವೃತ್ತಿಯಲ್ಲೂ ಹೆಚ್ಚು ಗಮನ ಹರಿಸಬೇಕು: ಡಾ. ಚಂದ್ರ ಮೌಳಿ ಗಡ್ಡ ಮನಗೂನಗರದ ರಸ್ತೆ ಸಮಸ್ಯೆಗಳ ಪತ್ತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆ : ಆಯುಕ್ತ ಕೆ. ಎನ್. ರಮೇಶ್ಪ್ರತಿ 10 ಭಾರತೀಯ ಮಕ್ಕಳಲ್ಲಿ ಕೇವಲ ಮೂವರಿಗೆ ಮಾತ್ರ ಹೊಂದಾಣಿಕೆಯಾಗುವ ಮೂಳೆ ಮಜ್ಜೆ ದಾನಿ ಲಭ್ಯಕುಮಾರಣ್ಣ ಬಾಂಬು ಹಾಕುವ ಟೈಮು ಬಂದೇಬಿಡ್ತಾ?ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ ಕೈಕೊಂಡು,ಅಕಳಂಕಿತರಿಗೆ ನ್ಯಾಯ ನೀಡಿ: ಡಾ.ಹನುಮಂತಪ್ಪ