ಬೆಂಗಳೂರು: ನಗರದ ಜೆಪಿ ಭವನದಲ್ಲಿ ಗ್ರೇಟರ್ ಬೆಂಗಳೂರು ಜನತಾದಳ ಜಾತ್ಯಾತೀತ ಪಕ್ಷದ ಅಧ್ಯಕ್ಷರಾದ ಶ್ರೀ ಹೆಚ್ಎಂ ರಮೇಶ್ ಗೌಡರವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಜೆಡಿಎಸ್ ಜಿಬಿಎ ಮಹಿಳಾ ವಿಭಾಗದ ಸಭೆಯು ನಡೆಯಿತು. ಸಭೆಯಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ವ್ಯಾಪ್ತಿಯ ಮಹಿಳಾ ಪದಾಧಿಕಾರಿಗಳ ಹಾಗೂ ವಿಧಾನಸಭಾ ಕ್ಷೇತ್ರ ಅಧ್ಯಕ್ಷರುಗಳಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಹೆಚ್ ಎಂ ರಮೇಶ್ ಗೌಡ ಅವರು ಮುಂಬರುವ ರೈತ ಸ್ವಾಭಿಮಾನ ಯಾತ್ರೆ ಸೇರಿದಂತೆ ಪಕ್ಷದ ಹಲವು ಹೋರಾಟಗಳು ಮತ್ತು ಚುನಾವಣೆಗಳಿಗೆ ಸಜ್ಜಾಗಲು ಮಹಿಳಾ ಸಂಘಟನಾತ್ಮಕ ಚಟುವಟಿಕೆಗಳನ್ನ ವಿಸ್ತರಿಸಲು ಈ ಸಭೆಯನ್ನು ಕರೆಯಲಾಗಿದ್ದು ಸಭೆಯಲ್ಲಿ ಬೆಂಗಳೂರಿನ ನಗರ ಜಿಬಿಎ ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಕವಿತಾ ರೆಡ್ಡಿ ನೇತೃತ್ವದಲ್ಲಿ ಇಂದು ಹಲವು ಪದಾಧಿಕಾರಿಗಳಿಗೆ ಪಕ್ಷದ ಹಲವು ವಿವಿಧ ಭಾಗಗಳ ಹುದ್ದೆಗಳಿಗೆ ನೇಮಕಾತಿ ಆದೇಶ ಪತ್ರ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಗ್ರೇಟರ್ ಬೆಂಗಳೂರು ನಗರ ಅಧ್ಯಕ್ಷರಾದ ಶೈಲಜಾ ಸಂತೋಷ್ ರಾವ್ ಅವರ ನೇತೃತ್ವದಲ್ಲಿ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ನೆಟ್ಟಿನಲ್ಲಿ ಪಕ್ಷದ ವತಿಯಿಂದ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು.
ಪಕ್ಷದ ಅಣಿತಿಯಂತೆ ಎಲ್ಲರೂ ಸಂಘಟನೆ ಮಾಡಿ ಮುಂಬರುವ 2028 ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ನಾವೆಲ್ಲರೂ ಶ್ರಮಿಸೋಣ ಜೊತೆಗೆ ಮುಂಬರುವ ರೈತ ಸ್ವಾಭಿಮಾನ ಯಾತ್ರೆ ಯನ್ನು ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೈಗೊಳ್ಳಲಾಗುವುದು ಎಲ್ಲರೂ ಈ ಯಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಹೆಚ್ ಎಂ ರಮೇಶ್ ಗೌಡ ಕರೆ ನೀಡಿದರು.
ಮಾಜಿ ಶಾಸಕರಾದ ಈ ಕೃಷ್ಣಪ್ಪ, ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಗ್ರೇಟರ್ ಬೆಂಗಳೂರು ಅಧ್ಯಕ್ಷರಾದ ಶೈಲಜಾ ಸಂತೋಷಿ ರಾವ್ ಮತ್ತು ಗ್ರೇಟರ್ ಬೆಂಗಳೂರು ಉತ್ತರ ವಿಭಾಗದ ಅಧ್ಯಕ್ಷರಾದ ಕವಿತಾ ರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬೆಂಗಳೂರಿನ ಹಲವು ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರುಗಳಾದ ಎ ವಿ ವೇಣುಗೋಪಾಲ್ ಆರ್ ಚೆನ್ನಕೇಶವಮೂರ್ತಿ ಎಂ ಮುನಿಸ್ವಾಮಿ,ಧನಂಜಯ್ ಲಕ್ಷ್ಮಿಕಾಂತ
ಈ ಸಮಾರಂಭದಲ್ಲಿ ಮಾಜಿ ಶಾಸಕರು ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷರಾದ ಇ ಕೃಷ್ಣಪ್ಪ ರವರು, ಮಾಜಿ ಸಚಿವರಾದ ಲೀಲಾದೇವಿ ಆರ್ ಪ್ರಸಾದ್ ರವರು, ಮಾಜಿ ಶಾಸಕರಾದ ಆರ್. ಅಖಂಡ ಶ್ರೀನಿವಾಸ ಮೂರ್ತಿ ರವರು, ಗ್ರೇಟರ್ ಬೆಂಗಳೂರು ಮಹಿಳಾ ವಿಭಾಗದ ಅಧ್ಯಕ್ಷರಾದ ಶೈಲಾ ಸಂತೋಜಿ ರಾವ್ ರವರು, ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಎಂ ಕವಿತಾ ರೆಡ್ಡಿಯವರು, ರಾಜ್ಯ ಪ್ರಧಾನ ಕಾರ್ಯದರ್ಶಿ ಕನ್ಯಾಕುಮಾರಿ ಯವರು, ಗ್ರೇಟರ್ ಬೆಂಗಳೂರು ಮಹಾಪ್ರಧಾನ ಕಾರ್ಯದರ್ಶಿ ಎಸ್ ರಮೇಶ ಸೇರಿದಂತೆ ಪಕ್ಷದ ಉತ್ತರ ವಿಭಾಗದ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಿದ್ದರು.