LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರ ಪಾಲಿಕೆ ಪ್ರಥಮ ದರ್ಜೆ ಕಾಲೇಜು ಕಟ್ಟಡ ಉದ್ಘಾಟನೆ

ಬೆಂಗಳೂರು, :ಮಕ್ಕಳು ಜಿಬಿಎ ನಗರ ಪಾಲಿಕೆಯ ಶಾಲೆ-ಕಾಲೇಜುಗಳ ಸದುಪಯೋಗಪಡಿಸಿಕೊಳ್ಳಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ವ್ಯಾಪ್ತಿಯ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮಾಗಡಿ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ನಗರ ಪಾಲಿಕೆ ಪ್ರಥಮ ದರ್ಜೆ ಕಾಲೇಜು ಕಟ್ಟಡವನ್ನು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರು ಇಂದು ಉದ್ಘಾಟಿಸಿ ಮಾತನಾಡಿದ ಅವರು ಜಿಬಿಎ ವ್ಯಾಪ್ತಿಯ ಕೇಂದ್ರ ನಗರ ಪಾಲಿಕೆ ವತಿಯಿಂದ ನಿರ್ಮಿಸಿರುವ ಈ ಕಟ್ಟಡದಲ್ಲಿ ಎಲ್.ಕೆ.ಜಿ. ಯಿಂದ ಪಿ.ಜಿ. ವರೆಗೆ ಶಿಕ್ಷಣ ಲಭ್ಯವಿದ್ದು* ಮಕ್ಕಳು ಈ ಶಾಲೆ-ಕಾಲೇಜಿನಲ್ಲಿ ವ್ಯಾಸಂಗ ಪಡೆದು ಉನ್ನತ ಮಟ್ಟದ ಸಾಧನೆ ಮಾಡಲು ಕರೆ ನೀಡಿದರು.

ಅಮೃತ್ ನಗರೋತ್ಥಾನ ಯೋಜನೆ ಅಡಿಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಈ ನೂತನ ಕಟ್ಟಡಗಳು ನಿರ್ಮಾಣಗೊಂಡಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಉದ್ದೇಶದಿಂದ ಎರಡು ಪ್ರತ್ಯೇಕ ಕಟ್ಟಡಗಳನ್ನು ನಿರ್ಮಿಸಲಾಗಿದೆ.

*ಕಟ್ಟಡಗಳ ವಿವರಗಳು:*


* ಕಟ್ಟಡ–1ರಲ್ಲಿ 6 ತರಗತಿ ಕೊಠಡಿಗಳು ಹಾಗೂ ಶೌಚಾಲಯ ಸೌಲಭ್ಯಗಳು ಲಭ್ಯವಿವೆ.

* ಕಟ್ಟಡ–2 ರಲ್ಲಿ 6 ತರಗತಿ ಕೊಠಡಿಗಳು, ಶೌಚಾಲಯಗಳು ಹಾಗೂ ಸೆಲ್ಲರ್ (ಊಟದ ಕೊಠಡಿ) ವ್ಯವಸ್ಥೆ ಕಲ್ಪಿಸಲಾಗಿದೆ.

* ಈ ನೂತನ ಕಟ್ಟಡಗಳ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಉನ್ನತ ಶಿಕ್ಷಣದ ವಿಸ್ತರಣೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ.

*ಬಿ.ಸಿ.ಎ. ಮತ್ತು ಎಂ.ಸಿ.ಎ. ಕೋರ್ಸ್ ಗೆ ಬೇಡಿಕೆ:*
ಈ ಕಾಲೇಜಿನಲ್ಲಿ ಬಿ.ಸಿ.ಎ ಮತ್ತು ಎಂ.ಸಿ.ಎ ಕೋರ್ಸ್ ಗೆ ಬೇಡಿಕೆ ಸಲ್ಲಿಸಿದ್ದು, ಅಧಿಕಾರಿಗಳು ಅದಕ್ಕೆ ಅನುಮೋದನೆ ನೀಡಿ ಬಡ ವಿದ್ಯಾರ್ಥಿಗಳು ಇಂತಹ ಕೋರ್ಸ್ ಗಳ ಕಲಿಯಲು ಅನುಕೂಲ ಕಲ್ಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

*ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಹೇಮಂತ್ ಶರಣ್*
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್ ರವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ನಗರ ಪಾಲಿಕೆ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿ ಪಡೆದುಕೊಳ್ಳಲು ಹಾಗೂ ನಗರ ಪಾಲಿಕೆಯು ವಿದ್ಯಾರ್ಥಿಗಳಿಗೆ ನೀಡುವ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳಲು ತಿಳಿಸಿದರು.

ಈ ವೇಳೆ ಕೇಂದ್ರ ನಗರ ಪಾಲಿಕೆ ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರಾದ ಚಂದ್ರಶೇಕರ್, ಕಾರ್ಯಪಾಲಕ ಅಭಿಯಂತರರಾದ ಮಧುಸೂಧನ್, ಶಿಕ್ಷಣ ವಿಭಾಗದ ಅಧಿಕಾರಿಗಳು, ಮಾಜಿ ನಗರ ಪಾಲಿಕೆ ಸದಸ್ಯರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ