LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಬೆಳ್ಳಿಹಬ್ಬದ ಸಭಾಂಗಣದ ಉದ್ಘಾಟನೆ

ಬೆಂಗಳೂರು: ಕಮ್ಮವಾರಿ ಸಂಘದ ಕೆ.ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಬೆಳ್ಳಿಹಬ್ಬದ ಸಭಾಂಗಣದ ಉದ್ಘಾಟನೆಯನ್ನು ಶುಕ್ರವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರಾದ ಡಾ ದಿಲೀಪ್‌ ಕುಮಾರ್ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಮ್ಮವಾರಿ ಸಂಘಂ (ಡಿ)- 1952 ರ ಅಡಿಯಲ್ಲಿರುವ ಪ್ರತಿಷ್ಠಿತ ತಾಂತ್ರಿಕ ಉನ್ನತ ಶಿಕ್ಷಣ ಸಂಸ್ಥೆಯಾದ ಕೆ.ಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕೆಎಸ್‌ಐಟಿ), AICTE ಅನುಮೋದನೆ, VTU ಸಂಯೋಜನೆ, NBA ಮಾನ್ಯತೆ ಮತ್ತು NAAC A+ ಶ್ರೇಣಿಯೊಂದಿಗೆ ತನ್ನ ನೂತನ ಬೆಳ್ಳಿ ಹಬ್ಬದ ಸಭಾಂಗಣವನ್ನು ಶುಕ್ರವಾರ, ಏಪ್ರಿಲ್ 4, 2025 ರಂದು ಬೆಳಿಗ್ಗೆ 9:30 ಕ್ಕೆ ಕೆಎಸ್‌ಐಟಿ ಕ್ಯಾಂಪಸ್‌ನಲ್ಲಿ ಹೆಮ್ಮೆಯಿಂದ ಉದ್ಘಾಟಿಸುತ್ತದೆ.

ಈ ಅತ್ಯಾಧುನಿಕ ಸೌಲಭ್ಯವು 800 ಆಸನ ಸಾಮರ್ಥ್ಯ ಮತ್ತು ವಿಶ್ವ ದರ್ಜೆಯ ಅಡಿಯೋ ವಿಸುವಲ್ ಉಪಕರಣಗಳನ್ನು ಹೊಂದಿದ್ದು ವಿದ್ಯಾರ್ಥಿಗಳ ಸಬಲೀಕರಣಕ್ಕಾಗಿ ಬಳಸಲಾಗುತ್ತದೆ ಎಂದರು.

ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಮುಖ್ಯ ಅತಿಥಿ ರಾಮಲಿಂಗಾ ರೆಡ್ಡಿ ಅವರು ಸಮಾರಂಭದಲ್ಲಿ ಉಪಸ್ಥಿತರಿರುವರು. ಮಾಜಿ ಸಚಿವರಾದ  ಕಟ್ಟಾಸುಬ್ರಮಣ್ಯ ನಾಯ್ಡು, ಮತ್ತು ಕಮ್ಮವಾರಿ ಸಂಘದ ಸಲಹಾ ಸಮಿತಿಯ ಅಧ್ಯಕ್ಷರಾದ ಕೆ ಕೃಷ್ಣ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು.

ಕಮ್ಮವಾರಿ ಸಂಘದ ಅಧ್ಯಕ್ಷರಾದ ಆರ್ ರಾಜಗೋಪಾಲ್ ನಾಯ್ಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಮ್ಮವಾರಿ ಸಂಘದ ಗೌರವ ಕಾರ್ಯದರ್ಶಿ ಆರ್ ಲೀಲಾಶಂಕರ್ ರಾವ್ ಮತ್ತು ಕಮ್ಮವಾರಿ ಸಂಘದ ಖಜಾಂಚಿ ಟಿ. ನೀರಜಾಕುಲು ನಾಯ್ಡು ಸೇರಿದಂತೆ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು ಕೆಎಸ್‌ಜಿಐ ಸಿಇಒ ಡಾ. ಕೆ. ವಿ.ಎ.ಬಾಲಾಜಿ ಮತ್ತು ಕೆಎಸ್‌ಐಟಿ ಪ್ರಾಂಶುಪಾಲರು/ನಿರ್ದೇಶಕರಾದ ಡಾ ದಿಲೀಪ್ ಕುಮಾರ್ ಕೆ. ಕೂಡ ಉಪಸ್ಥಿತರಿರುವರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ