LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

RCB ಸಂಭ್ರಮದಲ್ಲಿ ದುರಂತ, ಜೂನ್ 13 ರಂದು ವಿಚಾರಣೆ - ಸಾಕ್ಷ್ಯ ನೀಡಲು ಆಹ್ವಾನ

ಬೆಂಗಳೂರು, : ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2025 ರ ಜೂನ್ 4 ರಂದು ಆರ್.ಸಿ.ಬಿ ಕ್ರಿಕೆಟ್ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿದ್ದು, 47 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಅಭಿನಂದನಾ ಸಮಾರಂಭದ ದಿನದಂದು ನಡೆದ ಅಹಿತಕರ ಘಟನೆಗಳು ಹಾಗೂ ಸಾವು - ನೋವುಗಳ ಬಗ್ಗೆ ಉಂಟಾಗಿರುವ ಲೋಪಗಳ ಕುರಿತು ಸಮಗ್ರವಾಗಿ ವಿಚಾರಣೆ ನಡೆಸಲು ಬೆಂಗಳೂರು ನಗರ ಜಿಲ್ಲೆಯ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ ಜಿ. ಅವರನ್ನು ಸರ್ಕಾರವು ನೇಮಿಸಿದೆ.

ಈ ಸಂಬಂಧ 2025 ರ ಜೂನ್ 13 ರಂದು ಪೂರ್ವಾಹ್ನ 11.00 ಗಂಟೆಯಿಂದ ಅಪರಾಹ್ನ 1.30 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ, ಜಿಲ್ಲಾಧಿಕಾರಿಗಳ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಕೆ.ಜಿ ರಸ್ತೆ, ಬೆಂಗಳೂರು -560009 ಇಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಅಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾರೇ ಆಗಲಿ ನನ್ನ ಸಮಕ್ಷಮ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ