LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನವರಿ 4 ಅಖಿಲ ಭಾರತ ಆರ್ಯ ಈಡಿಗ ಮಹಿಳಾ ಸಮ್ಮೇಳನ

ಬೆಂಗಳೂರು: ಆರ್ಯ ಈಡಿಗ ಸಮುದಾಯದ ಎಲ್ಲಾ ಪಂಗಡಗಳ ಮಹಿಳೆಯರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಹಾಗೂ ಮಹಿಳಾ ಶಕ್ತಿಯನ್ನು ಬಲಪಡಿಸುವ ಉದ್ದೇಶದಿಂದ ಅಖಿಲ ಭಾರತ ಆರ್ಯ ಈಡಿಗ ಮಹಿಳಾ ಸಮ್ಮೇಳನವನ್ನು ಮೊದಲನೇ ಬಾರಿಗೆ ಬೆಂಗಳೂರಿನಲ್ಲಿ ಮಾಡಲಾಗಿದೆ ಎಂದು ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ಅಧ್ಯಕ್ಷೆ ಅಮಿತಾ ಆನಂದ ಮಂಥ ಅವರು ತಿಳಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿ ಗೋಷ್ಟಿ ಯಲ್ಲಿ ಮಾತನಾಡಿದ ಅವರು, ಜನವರಿ 4ರಂದು ಅಂದರೆ ನಾಳೆ ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಹಾಲ್ನಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್ ಅವರು ಮಾಡಲಿದ್ದಾರೆ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ರೇಣುಕಾನಂದ ಸ್ವಾಮೀಜಿ, ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾಕ್ಟರ್ ರಾಮಪ್ಪ ವಹಿಸಲಿದ್ದಾರೆ.

ಇನ್ನು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಶಾಸಕರಾದಂತಹ ಬೇಲೂರು ಗೋಪಾಲಕೃಷ್ಣ ಕವಿಯಪ್ಪ ಶಾಸಕ ಕುಮಾರ ಚೌದರಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷರಾದ ಡಾಕ್ಟರ್ ಎಂ ತಿಮ್ಮೇಗೌಡ ವಸಲಿದ್ದಾರೆ ಇನ್ನು ವಿಶೇಷ ಆಮಂತ್ರಿಕರಾದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಉಪಸ್ಥಿತರಿದ್ದಾರೆ.

ಶಿಕ್ಷಣವೇ ಸಮುದಾಯದ ಅಭಿವೃದ್ಧಿಗೆ ಮೂಲ ಮಂತ್ರ ಎಂಬ ದೃಷ್ಟಿಕೋನದಿಂದ 1944ರಲ್ಲಿ ಸಮುದಾಯದ ಯುವಕರ ಶಿಕ್ಷಣಕ್ಕಾಗಿ ಈಡಿಗ ಸಂಘ ಸ್ಥಾಪನೆ ಮಾಡಲಾಯಿತು 1958 ಮತ್ತು 1962 ರಲ್ಲಿ ನಡೆದ ರಾಜ್ಯಮಟ್ಟದ ಸಮಾವೇಶಗಳ ಮೂಲಕ ವೃತ್ತಿ ಸಮಾನತೆಯ ಆಧಾರದ ಮೇಲೆ ವಿವಿಧ ಪಂಗಡಗಳನ್ನು ಒಳಗೊಂಡ ಸಮುದಾಯದ ಒಗ್ಗಟ್ಟಿಗೆ ಉತ್ತಮ ಭೂನಾದಿ ಹಾಕಲಾಯಿತು.

ಇಲ್ಲಿಯ ತನಕ ಶಿಕ್ಷಣ ಸಂಘಟನೆ ಮತ್ತು ಸಾಮಾಜಿಕ ಅಭಿವೃದ್ಧಿಯ ಮೂಲಕ ಸಮಗ್ರ ಪ್ರಗತಿಯ ಕನಸನ್ನು  ಸಮುದಾಯ ಮುಂದುವರಿಸಿಕೊಂಡು ಬರುತ್ತಿದೆ. ಸಮುದಾಯದ ವಿದ್ಯಾರ್ಥಿನಿಯರ ಶಿಕ್ಷಣಕ್ಕಾಗಿ ಅಗತ್ಯತೆಯನ್ನು ಮನಗಂಡು ಸಾಮಾಜಿಕ ಕಾರ್ಯಕರ್ತರು ನಳಿನಾಕ್ಷಿ ಸಣ್ಣಪ್ಪ ಅವರ ನೇತೃತ್ವದಲ್ಲಿ 1988ರಲ್ಲಿ ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘ ಸ್ಥಾಪನೆ ಮಾಡಲಾಗಿದೆ.

ಸಮುದಾಯದ ಪರವಾಗಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಮಂಡಳಿಗಳಲ್ಲಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಮರ್ಪಕ ಸಮುದಾಯಕ್ಕೆ ಪ್ರಾತಿನಿಧ್ಯವನ್ನು ಪಡೆಯಲು ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದೆ ಒಗ್ಗಟ್ಟಿನ ಧ್ವನಿಯಲ್ಲಿ ಹೇಳಿಕೊಳ್ಳುವುದು ಒಂದು ವೇದಿಕೆಯಾಗಿದೆ. ಈ ಮೂಲಕ ಸಕಾರಾತ್ಮಕ ಬದಲಾವಣೆಗೆ ದಾರಿ ಮಾಡಿಕೊಡುವುದು ಈ ಸಮಾವೇಶದ ಮುಖ್ಯ ಆಶಯವಾಗಿದೆ ಎಂದರು.

ಸಂಘದ ಪ್ರಮುಖ ಗುರಿಗಳು:

ಹೆಣ್ಣು ಮಕ್ಕಳಿಗೆ ಶಿಕ್ಷಣ ವಿದ್ಯಾರ್ಥಿ ವೇತನ ಮತ್ತು ವಿದ್ಯಾರ್ಥಿ ನಿಲಯ ಸೌಲಭ್ಯ ಒದಗಿಸುವುದು. ಬಡ ನಿರಾಶ್ರಿತ ಮಹಿಳೆಯರ ಪುನರ್ ವಸತಿಗೆ ಸಹಕಾರ ನೀಡುವುದು ವೃತ್ತಿಪರ ಶಿಕ್ಷಣ ಹಾಗೂ ಉದ್ಯೋಗ ಅವಕಾಶಗಳಿಗೆ ಉತ್ತೇಜನವನ್ನು ನೀಡುವುದು ವರದಕ್ಷಿಣೆ ವಿರೋಧ ಸರಳ ವಿವಾಹ ವಿಧವೆಯರ ಪುನರ್ ವಿವಾಹಕ್ಕೆ ಹೆಚ್ಚು ಬೆಂಬಲ ನೀಡುವುದು ಕೌಟುಂಬಿಕ ಸಲಹೆ ಕಾನೂನು ನೆರವು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸುವ ಕೆಲಸವನ್ನು ಸಂಘಟನೆಯಿಂದ ಮಾಡಲಾಗುತ್ತದೆ.

ಇನ್ನು ಆರ್ಯ ಈಡಿಗ ಮಹಿಳಾ ಸಂಘವು ರಾಜ್ಯದಾದ್ಯಂತ ವಿಸ್ತರಿಸಿಕೊಂಡು ಶಿವಮೊಗ್ಗ ಸಾಗರ ನಾಗಮಂಗಲ ಹುಣಸೂರು ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಶಾಖೆಗಳನ್ನು ಸಹ ಸ್ಥಾಪಿಸಲಾಗಿದೆ ಅಲ್ಲಿ ವಿದ್ಯಾರ್ಥಿ ನಿಲಯಗಳು ಸ್ವಂತ ಕಟ್ಟಡಗಳು ಹಾಗೂ ವಿವಿಧ ಸಾಮಾಜಿಕ ಸೇವ ಕಾರ್ಯಕ್ರಮಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ನಿರಂತರವಾಗಿ ಶ್ರಮಿಸಲಾಗುತ್ತದೆ ಎಂದರು.

ಇನ್ನು ರಾಜ್ಯಮಟ್ಟದ ಸಮ್ಮೇಳನದಲ್ಲಿ ಸಮಾಜದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪುರಸ್ಕಾರ ಹಾಗೂ ಸನ್ಮಾನವನ್ನು ಮಾಡಲಾಗುತ್ತದೆ ಹಾಗೆ ಉಪ ಪಂಗಡಗಳ ನಡುವಿನ ಏಕತೆಯ ಕುರಿತು ಚರ್ಚೆಯನ್ನು ಸಹ ನಡೆಸಲಾಗುತ್ತದೆ ಅಲ್ಲದೆ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಂಗವಾಗಿ ನಡೆಯಲಿವೆ ಎಂದರು.

ಇನ್ನು ಪತ್ರಿಕಾಗೋಷ್ಠಿಯಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷರು ಹಾಗೂ ಗೌರವ ಅಧ್ಯಕ್ಷರಾದ ಡಾ. ನಳಿನಾಕ್ಷಿ ಸಣ್ಣಪ್ಪ ಪ್ರಧಾನ ಕಾರ್ಯದರ್ಶಿ ಉಮಾ ಶ್ರೀನಿವಾಸನ್ ಜಂಟಿ ಕಾರ್ಯದರ್ಶಿ ವಿಜಯಲಕ್ಷ್ಮಿ ಸರಳ ಮಂಜುನಾಥ ಕಾರ್ಯಕ್ರಮ ಅಧ್ಯಕ್ಷತೆ ಅಶಿತ ಶರಣ್, ಖಜಾಂಚಿ ವಿಜಯಲಕ್ಷ್ಮಿ ಮುರುಳಿಧರ್ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ