LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ 50 ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ

ಬೆಂಗಳೂರು: ರಾಜ್ಯದ 50  ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಜೆಡಿಎಸ್ ಪಕ್ಷದ ವತಿಯಿಂದ ಜೆಪಿ ಭವನದಲ್ಲಿ ನಡೆಸಿ ಮೊದಲನೇ ಹಂತದ ಕಾರ್ಯಗಾರಕ್ಕೆ ಚಾಲನೆಯನ್ನು ಸಹ ನೀಡಲಾಯಿತು.

ಬೆಂಗಳೂರಿನ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ  ನಿಖಿಲ್ ಕುಮಾರಸ್ವಾಮಿ ಅವರು ನೇತೃತ್ವದಲ್ಲಿ ನಡೆದ 50 ವಿಧಾನಸಭೆ ಕ್ಷೇತ್ರಗಳ BLA-1 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಯ ಮೊದಲ ಹಂತದ ಕಾರ್ಯಾಗಾರಕ್ಕೆ ಚಾಲನೆ ನೀಡಿ. BLA ( ಬೂತ್ ಮಟ್ಟದ ಏಜೆಂಟ್)ಗಳು ನಿರ್ವಹಿಸಬೇಕಾದ ಕಾರ್ಯಗಳ ಕುರಿತು ತಿಳಿಸಲಾಯಿತು.

ಇದೇ ವೇಳೆ ‎ಚುನಾವಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು, ನಕಲು ಹಾಗೂ ದೋಷಪೂರಿತ ಮತದಾರರನ್ನು ತೆಗೆದು ಹಾಕಿ ಪಟ್ಟಿಯನ್ನು ಶುದ್ಧೀಕರಿಸುವುದು SIR ನ ಪ್ರಮುಖ ಗುರಿ. ಈ ಮೂಲಕ 'ಒಬ್ಬ ವ್ಯಕ್ತಿ; ಒಂದು ಮತ' ಎಂಬ ಪ್ರಜಾಪ್ರಭುತ್ವದ ತತ್ವವನ್ನು ಬಲಪಡಿಸುತ್ತದೆ ಎಂದು ತಿಳಿಸಿ, ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಬಗ್ಗೆ ಚುನಾವಣಾ ಆಯೋಗವು ಕೈಗೊಳ್ಳಲಿರುವ ಕಾರ್ಯಗಳು, ರಾಜಕೀಯ ಪಕ್ಷವಾಗಿ ನಮ್ಮ ಜವಾಬ್ದಾರಿ , ಬೂತ್ ಮಟ್ಟದ ಏಜೆಂಟ್ ಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಕೋರ್ ಕಮಿಟಿ ಅಧ್ಯಕ್ಷರಾದ ಎಂ. ಕೃಷ್ಣಾರೆಡ್ಡಿ ಅವರು, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಅವರು, ತಿಪ್ಪೇಸ್ವಾಮಿ ಅವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು ಹಾಗೂ ಪಕ್ಷದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಭಾಗಿಯಾಗಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ