LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ವಾಪಸ್‌ ಪಡೆಯುವಂತೆ ಜೆಡಿಎಸ್‌ ಒತ್ತಾಯ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುವ ಸಂವಿಧಾನಕ್ಕೆ ವಿರೋಧಿಯಾಗಿದೆ. ಈ ಕೂಡಲೇ ವಿಧೇಯಕವನ್ನು ವಾಪಸ್ ಪಡೆಯಬೇಕು ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶಗೌಡ ಅವರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಂಗ್ರೆಸ್‌ ಪಕ್ಷಕ್ಕೆ ರಾಜಕೀಯ ಲಾಭ ಆಗುವ ರೀತಿಯಲ್ಲಿ ವಾರ್ಡ್‌ ವಿಂಗಡಣೆ ಮಾಡಿದೆ. ಈ ವಿಂಗಡಣೆಯು ಸಾಕಷ್ಟು ನ್ಯೂನತೆಗಳಿಂದ ಕೂಡಿದೆ. ಬೆಂಗಳೂರು ಅಭಿವೃದ್ಧಿಗೆ ಮಾರಕವಾಗಿರುತ್ತದೆ. ಈ ವಿಧೇಯಕವನ್ನು ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದರು.

ರಾಜ್ಯ ಸರಕಾರವು ಸಂವಿಧಾನಕ್ಕೆ ವಿರೋಧವಾಗಿ ಜಿಬಿಎ ಕಾಯ್ದೆ ತಿದ್ದುಪಡಿ ಮಾಡಲು ವಿಧೇಯಕ ಮಂಡನೆ ಮಾಡಿರುವುದು ಖಂಡನೀಯ. ಕೊನೇ ಹಂತದಲ್ಲಿ ಬಿಲ್ ಮಂಡನೆ ಮಾಡಿ ಅಂಗೀಕಾರ ಪಡೆಯುವ ಹುನ್ನಾರವನ್ನು ಸರಕಾರ ನಡೆಸಿದೆ ಎಂದು ಅವರು ಆರೋಪಿಸಿದರು.

ಚುನಾವಣೆ ನಡೆಸಲು ಹೊಸ ವಾರ್ಡ್ ಗಳಿಗೆ ಕಾರ್ಪೋರೇಟರ್ ಗಳನ್ನ ನಾಮನಿರ್ದೇಶನ ಮಾಡಲು ಸಂವಿಧಾನವು ಸರಕಾರಕ್ಕೆ ಅವಕಾಶ ನಿಡುವುದಿಲ್ಲ. 74ನೇ ತಿದ್ದುಪಡಿ ಕಾಯ್ದೆ 1992ರಿಂದ ಸ್ಥಾಪಿಸಲ್ಪಟ್ಟ ಪುರಸಭೆಯನ್ನು ನಿಯಂತ್ರಿಸುವ ಮೂಲಭೂತ ತತ್ವವೆಂದರೆ ಎಲ್ಲಾ ವಾರ್ಡ್ ಪ್ರತಿನಿಧಿಗಳಿಗೆ ನೇರ ಚುನಾವಣೆಗೆ ಸ್ಪರ್ಧಿಸುವ ಅವಕಾಶವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

*ಮೂಲ ಸಾಂವಿಧಾನಿಕ ಆದೇಶ (243R) ಕಾಯ್ದೆ*

ಪುರಸಭೆಯ ಎಲ್ಲಾ ಸ್ಥಾನವನ್ನು ಪ್ರದೇಶದ ಪ್ರಾದೇಶಿಕ ಕ್ಷೇತ್ರಗಳಿಂದ ನೇರ ಚುನಾವಣೆಯ ಮೂಲಕ ಆಯ್ಕೆ ಮಾಡಿದ ವ್ಯಕ್ತಿಗಳಿಂದ ತುಂಬಿಸಲಾಗುತ್ತದೆ. ಈ ಉದ್ದೇಶಕ್ಕಾಗಿ ವಾರ್ಡ್ ಎಂದು ಕರೆಯಲಾಗುವುದು. ಇದು ಪ್ರತಿ ವಾರ್ಡ್ʼಗೆ ನೇರ ಚುನಾವಣೆಗೆ ಸಂವಿಧಾನದ ಆಧಾರದ ಮೇಲೆ ವಿಂಗಡಣೆ ಇದೆ ಎಂದು ಹೇಳಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು 243R(2) ಕಾಯ್ದೆ ಪ್ರಕಾರ ರಾಜ್ಯ ಶಾಸಕಾಂಗವು ಕಾನೂನಿನ ಮೂಲಕ ಪ್ರಾತಿನಿಧ್ಯವನ್ನು ಒದಗಿಸಲು ಅನುಮತಿಸುತ್ತದೆ. ಹಾಗೆಯೇ ನಾಮನಿರ್ದೇಶಿತ ಸದಸ್ಯರು ಪುರಸಭೆಯ ಸಭೆಯಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿರುವುದಿಲ್ಲ ಎಂದು 243R ಕಾಯ್ದೆಯ ನಿಬಂಧನೆಯು ಸ್ಪಷ್ಟವಾಗಿ ಹೇಳುತ್ತದೆ ಎಂದರು.

ಒಟ್ಟಾರೆ ಸಂವಿಧಾನದ ವಿರುದ್ಧವಾಗಿ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದ್ದಾರೆ. 20 ಸಾವಿರ ಜನಸಂಖ್ಯೆಗೆ ಒಬ್ಬರಂತೆ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ವಿಧಾನ ಮಂಡಲದಲ್ಲಿ ಮಂಡನೆಯಾಗಿರುವ ಬಿಲ್ ಪ್ರಜಾಪ್ರಭುತ್ವದ ಕಗ್ಗೊಲೆ. ಈ ಕೂಡಲೇ ಬಿಲ್ಲನ್ನು ವಾಪಸ್ ಪಡೆಯಬೇಕು ಎಂದು ರಮೇಶಗೌಡ ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ