LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಜಲಮಂಡಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ

ಬೆಂಗಳೂರು: ಬೆಂಗಳೂರು ಜಲಮಂಡಳಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.

ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ಪ್ರಸಾತ್ ಮನೋಹರ್ ಅವರು ಧ್ವಜಾರೋಹಣ ‌ನೆರವೇರಿಸಿದರು. ನಂತರ ನೆರೆದಿದ್ದ ಜಲಮಂಡಳಿಯ ಅಧಿಕಾರಿಗಳು ಮತ್ತು ನೌಕರರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಬೆಂಗಳೂರು ಮಹಾನಗರಕ್ಕೆ 100ಕಿ.ಮೀ ದೂರದ ಕಾವೇರಿ ನದಿಯಿಂದ ನೀರು ಒದಗಿಸುವಲ್ಲಿ ಜಲಮಂಡಳಿಯ ಸಿಬ್ಬಂದಿಯ ಪಾತ್ರ ಅಪಾರವಾಗಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಸೂಚನೆ ಅನುಸಾರ ಈ ಜಲಮಂಡಳಿಯ ನೌಕರರ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮಮಗಳನ್ನು ಹಮ್ಮಿಕೊಳ್ಳಲು ಪ್ರಸಕ್ತ ಸಾಲಿನಲ್ಲಿ ನಿರ್ಧರಿಸಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಈ ತಿಂಗಳಾಂತ್ಯಕ್ಕೆ ಅನುಷ್ಠಾನವಾಗುವ ಸಾಧ್ಯತೆ ಇದೆ ಎಂದರು.

ಇದೇ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರ ಜೀವನ ಚರಿತ್ರೆ ಒಳಗೊಂಡ ನನ್ನ ಸತ್ಯಾನ್ವೇಷಣೆ ಪುಸ್ತಕವನ್ನು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಲಮಂಡಳಿಯ ಪ್ರಧಾನ ಮುಖ್ಯ ಎಂಜನಿಯರ್ ಸುರೇಶ್, ಮುಖ್ಯ ಎಂಜನಿಯರ್ ಗಳು ಮತ್ತು ಅಪರ ಮುಖ್ಯ ಎಂಜನಿಯರ್ ಗಳು, ಜಲಮಂಡಳಿ ನೌಕರರ ವಿವಿಧ ಸಂಘಗಳ ಅಧ್ಯಕ್ಷರುಗಳು ಸೇರಿದಂತೆ ಅನೇಕರು ಇದ್ದರು.

ಜನನಿ ಜನ್ಮಭೂಮಿ" ಎಂಬ ನೂತನ ದೇಶಭಕ್ತಿಗೀತೆ ಬಿಡುಗಡೆ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಾ. ಬಿ.ಆರ್ .ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಮಂಡಳಿ ನೌಕರರಿಗಾಗಿ ಇತ್ತೀಚೆಗೆ ಏರ್ಪಡಿಸಿದ್ದ ಕ್ರಾಂತಿಗೀತೆಗಳ ಸ್ಪರ್ಧೆಯಲ್ಲಿ ವಿಜೇತರಾದ ಉದಯೋನ್ಮುಖ ಗಾಯಕ ಕುಮಾರ್ .ಎಚ್.ಟಿ ರವರು ಹಾಡಿರುವ ನೂತನ ದೇಶಭಕ್ತಿಗೀತೆಯನ್ನು ಇಂದು ಮಂಡಳಿಯ ಅಧ್ಯಕ್ಷರಾದ ಡಾ.ರಾಮಪ್ರಸಾತ್ ಮನೋಹರ್ ರವರು ಕಾವೇರಿ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು.

ನಾಡಿನ ಹಿರಿಯ ಸಾಹಿತಿಗಳಾದ ಪ್ರೊ.ಬಿ ಆರ್ ಪೊಲೀಸ್ ಪಾಟೀಲ್ ಅವರು ರಚಿಸಿದ 'ಜನನಿ ಜನ್ಮಭೂಮಿ' ಎಂಬ ದೇಶಭಕ್ತಿ ಗೀತೆಗೆ ಅಂತರಾಷ್ಟ್ರೀಯ ಹಿಂದುಸ್ತಾನಿ ಗಾಯಕರಾದ ಪಂಡಿತ್ ಶರಣ್ ಚೌದರಿ ಅವರು ಸಂಗೀತ ನಿರ್ದೇಶನ ಮಾಡಿರುತ್ತಾರೆ.ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಈ ಧ್ವನಿಮುದ್ರಿಕೆಯನ್ನು ಲೋಕಾರ್ಪಣೆಗೊಳಿಸಲಾಗಿದ್ದು, ಶರಣ್ ಮ್ಯೂಸಿಕ್ ಅಕಾಡೆಮಿ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ.

ಈ ಸಂದರ್ಭದಲ್ಲಿ ಬೆಂಗಳೂರು ಜಲಮಂಡಳಿಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸದಾಶಿವ ಕಾಂಬಳೆ, ನೌಕರರ ಸಂಘದ ಅಧ್ಯಕ್ಷರಾದ ಮರಿಯಪ್ಪ , ಸ್ಯಾನಿಟರಿ ಯುನಿಯನ್ ಅಧ್ಯಕ್ಷರಾದ ಸಿದ್ದಪ್ಪ, ಹಿರಿಯ ಅಧಿಕಾರಿ,ನೌಕರರು ಭಾಗವಹಿಸಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ