LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿ.ಸರೋಜಾ ದೇವಿ ನಿಧನಕ್ಕೆ ಹೆಚ್.ಡಿ. ಕೆ ಕುಟುಂಬದಿಂದ ಕಂಬನಿ

ಬೆಂಗಳೂರು /ನವದೆಹಲಿ: ಕನ್ನಡ ಚಿತ್ರರಂಗದ ಹಿರಿಯ ನಟಿ ಶ್ರೀಮತಿ ಬಿ. ಸರೋಜಾ ದೇವಿ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.



ಈ ಬಗ್ಗೆ ಶೋಕ ಸಂದೇಶ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಮೇರುನಟರಾದ ಡಾ. ರಾಜ್ ಕುಮಾರ್ ಅವರು ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ದಿಗ್ಗಜ ನಾಯಕ ನಟರೆಲ್ಲರ ಜತೆ ನಟಿಸಿದ್ದ ಸರೋಜಾದೇವಿ ಅವರು, ಅಭಿಮಾನಿಗಳ ಪಾಲಿಗೆ ಅಭಿನಯ ಸರಸ್ವತಿ ಆಗಿದ್ದರು. ಅವರ ಅನನ್ಯ ಅಭಿನಯ ನಮ್ಮೆಲ್ಲರನ್ನೂ ಮಂತ್ರಮುಗ್ಧರನ್ನಾಗಿ ಮಾಡುತ್ತಿತ್ತು ಎಂದು ಹೇಳಿದ್ದಾರೆ.

ಕನ್ನಡ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸುವಲ್ಲಿ ಅಪಾರ ಕಾಣಿಕೆ ನೀಡಿರುವ ಅವರು; ಕಿತ್ತೂರು ಚೆನ್ನಮ್ಮ, ಬಬ್ರುವಾಹನ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಗಲಿಕೆ ಚಿತ್ರರಂಗಕ್ಕೆ, ನಾಡಿಗೆ ಬಹುದೊಡ್ಡ ನಷ್ಟ ಎಂದಿರುವ ಕುಮಾರಸ್ವಾಮಿ ಅವರು; ಅಗಲಿದ ಸರೋಜಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ನಟನೆಯ ಜತೆಗೆ ಸಮಾಜದ ಬಗ್ಗೆಯೂ ಕಳಕಳಿ ಹೊಂದಿದ್ದ ಸರೋಜಾ ದೇವಿ

ಬೆಂಗಳೂರು: ಹಿರಿಯ ನಟಿ ಬಿ. ಸರೋಜಾ ದೇವಿ ಅವರ ಅಗಲಿಕೆಗೆ ಕಂಬನಿ ಮಿಡಿದಿರುವ ಮಾಜಿ ಶಾಸಕಿ ಹಾಗೂ ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಅವರು; ಭಾರತೀಯ ಚಿತ್ರರಂಗದ ಪ್ರತಿಭಾನ್ವಿತ ನಟಿ, ಬಹುಭಾಷಾ ಕಲಾವಿದೆ, ಕನ್ನಡ ಚಿತ್ರರಂಗದ ಶ್ರೇಷ್ಠತಾರೆಯಾದ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಶೋಕ ಸಂದೇಶದಲ್ಲಿ ಸರೋಜಾ ದೇವಿ ಅವರ ಬಗ್ಗೆ ಭಾವುಕರಾಗಿ ಪ್ರತಿಕ್ರಿಯಿಸಿರುವ ಅವರು; ವೈಯಕ್ತಿಕವಾಗಿ ನನಗೆ ಬಹಳ ಹತ್ತಿರದವರಾದ ಸರೋಜಾ ದೇವಿ ಅವರು, ನಟನೆಯ ಜತೆಗೆ ಸಮಾಜದ ಬಗ್ಗೆಯೂ ಅಪಾರ ಕಳಕಳಿ ಹೊಂದಿದ್ದರು ಎಂದು ತಿಳಿಸಿದ್ದಾರೆ.

ಕಿತ್ತೂರು ಚನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಸೇರಿ ಅನೇಕ ಚಿರಸ್ಮರಣೀಯ ಚಿತ್ರಗಳಲ್ಲಿ ಮನೋಜ್ಞವಾಗಿ ನಟಿಸಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿರುವ ಅವರನ್ನು ಮರೆಯುವಂತಿಲ್ಲ.
ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ