LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆನೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಬಹು ನಿರೀಕ್ಷಿತ 'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ ́ಗೆ ರಾಜ್ಯಪಾಲರ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದರು.

'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ವಿಧೇಯಕಗಳ ಸುಗ್ರೀವಾಜ್ಞೆ ́ಗೆ ರಾಜ್ಯಪಾಲರು ಇತ್ತೀಚೆಗೆ ಸಹಿ ಹಾಕಿದ್ದರು. ರಾಜ್ಯದಲ್ಲಿ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಸಂಬಂಧ ಪ್ರತ್ಯೇಕ ಮಂಡಳಿ ಸ್ಥಾಪನೆಗೆ ಸರ್ಕಾರದ ಹಾದಿ ಇದರಿಂದ ಸುಗಮವಾಗಿದೆ.

ಗಿಗ್‌ ಕಾರ್ಮಿಕರಿಗೆ ಅಪಘಾತ ವಿಮೆ-ಪರಿಹಾರ, ಶೈಕ್ಷಣಿಕ ಸಹಾಯಧನ, ವಸತಿ ಸೌಲಭ್ಯ ಸೇರಿದಂತೆ ಹಲವಾರು ಸಾಮಾಜಿಕ ಸೇವಾ ಸೌಲಭ್ಯಗಳನ್ನು ಈ ಮಂಡಳಿಯ ಮೂಲಕ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ.
ಅಗ್ರಿಗೇಟರ್‌ ಸಂಸ್ಥೆಗಳು ವಹಿವಾಟಿನಿಂದ ಪಡೆದ ಆದಾಯದಿಂದ ಮಂಡಳಿಯಲ್ಲಿ ನಿಧಿ ಸ್ಥಾಪಿಸಿ ಅದನ್ನು ಗಿಗ್‌ ಕಾರ್ಮಿಕರ ಕಲ್ಯಾಣಕ್ಕೆ ಬಳಸುವುದು ಸುಗ್ರೀವಾಜ್ಞೆಯ ಮುಖ್ಯ ಉದ್ದೇಶವಾಗಿದೆ.

ರಾಜ್ಯಪಾಲರ ಭೇಟಿ ವೇಳೆ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಸೇರಿದಂತೆ ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಮಂಡಳಿ ರಚನೆಗೆ ರಾಜ್ಯಪಾಲರ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಇಂದು ರಾಜಭವನಕ್ಕೆ ಗಿಗ್ ಕಾರ್ಮಿಕರೊಂದಿಗೆ ತೆರಳಿ, ಘನತೆ ವೆತ್ತ ರಾಜ್ಯಪಾಲರಾದ ಶ್ರೀ ತಾವರಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿಸದರು. ಈ ಸಂಧರ್ಭದಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು ಜೊತೆಗಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ