LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪ್ರಭಾಕರ್

ಬಿಳಿಗಿರಿರಂಗನಬೆಟ್ಟ / ಬೆಂಗಳೂರು: ಇಂದು ಮನೆಗಳಲ್ಲಿ ಕೊಠಡಿಗಳು ಹೆಚ್ಚಾಗುತ್ತಾ, ಮನಸ್ಸುಗಳು ದೂರವಾಗುತ್ತಿದೆ. ಮೊಬೈಲ್ ಮತ್ತು ರಿಮೋಟ್‍ಗೆ ಕೈ ಒಡ್ಡಿ ಜೀವನೋತ್ಸಾಹ ಬಲಿ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಸುತ್ತೂರು ಶ್ರೀಕ್ಷೇತ್ರ, ಜಗದ್ಗರು ವೀರಸಿಂಹಾಸನ ಮಹಾಸಂಸ್ಥಾನ ಮಠ ಆಯೋಜಿಸಿದ್ದ "ಜೀವನೋತ್ಸಾಹ" ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೃದ್ದಾಶ್ರಮಗಳು, ಆಸ್ಪತ್ರೆಗಳು ಹೆಚ್ಚಾಗುತ್ತಿರುವುದು ಆರೋಗ್ಯಕರ ಸಮಾಜದ ಲಕ್ಷಣ ಅಲ್ಲ. ದುಡಿಮೆ, ಹಣ ಪರಿಹಾರವಾಗುವ ಬದಲಿಗೆ, ಸಮಸ್ಯೆ ಮಾಡಿಕೊಂಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಕೃತಿಯ ಮಡಿಲಿನಲ್ಲಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ "ಜೀವನೋತ್ಸಾಹ ಶಿಬಿರ"ವನ್ನು ಶ್ರೀಮಠ ಆಯೋಜಿಸಿರುವುದು ಹೆಚ್ಚು ಅರ್ಥಪೂರ್ಣವಾಗಿದೆ. ನಾನು ಕಾಂಕ್ರೀಟ್ ಕಾಡಿನಿಂದ ಹೊರಟು, ಪ್ರಕೃತಿಕ ಸಾಲಿನಲ್ಲಿ ಈ ಬೆಟ್ಟಕ್ಕೆ ಬರುವಾಗ ನನಗೆ ಅನ್ನಿಸಿದ್ದು, ಪ್ರಕೃತಿಯೆ ಜೀವನೋತ್ಸಾಹದ ಚಿಲುಮೆ ಆಗಿದೆ ಎಂದು ಬಣ್ಣಿಸಿದರು.

ಹುಚ್ಚು ಹಿಡಿಯೋದು ಮನುಷ್ಯನಿಗೆ ಮತ್ತು ಮನುಷ್ಯನ ಸಹವಾಸದಲ್ಲಿರುವ ಪ್ರಾಣಿಗಳಿಗೆ ಮಾತ್ರ. ಮನುಷ್ಯನಿಗೆ ಹುಚ್ಚಾಸ್ಪತ್ರೆಗಳಿವೆ. ಕಾಡು ಪ್ರಾಣಿಗಳಿಗೆ ಅಂತ ಹುಚ್ಚಾಸ್ಪತ್ರೆ ಇರುವುದು ನನಗಂತೂ ಗೊತ್ತಿಲ್ಲ.

ಹಾಗೆಯೇ ಜೀವನದ ಸವಾಲುಗಳನ್ನು ಎದುರಿಸಲಾಗದೆ ಆತ್ಮಹತ್ಯೆಗೆ ಶರಣಾಗುವ ಪ್ರವೃತ್ತಿ ಇರುವುದೂ ಕೂಡ ಮನುಷ್ಯನಲ್ಲೇ. ಎಂಥಾದ್ದೇ ಕಠಿಣ ಸಂದರ್ಭವನ್ನೂ ಜೀರ್ಣಿಸಿಕೊಂಡು ಬದುಕುವುದನ್ನು ಪ್ರಕೃತಿ ನಮಗೆ ಕಲಿಸುತ್ತದೆ. ಎಂಥಾದ್ದೇ ಭೀಕರ ಬರಗಾಲ, ಪ್ರವಾಹ, ಮಳೆ, ಗಾಳಿ, ಬೆಂಕಿ, ಕಾಡ್ಗಿಚ್ಚು ಬಂದರೂ ಪ್ರಕೃತಿ ಮತ್ತೆ ತಲೆ ಎತ್ತಿ ನಿಲ್ಲುತ್ತದೆ.

ಕತ್ತಲಾದ ಮೇಲೆ ಮತ್ತೆ ಬೆಳಕು ಆಗಲೇ ಬೇಕು ಎನ್ನುವುದು ಪ್ರಕೃತಿಯ ನಿಯಮ. ಹಾಗೆಯೇ ಮನುಷ್ಯ ಜೀವನದಲ್ಲೂ ಕಷ್ಟದ ಸಂದರ್ಭಗಳು ಬರಬಹುದು, ಆ ಸಂದರ್ಭಗಳೂ ಅಳಿಸಿ ಹೋಗುತ್ತವೆ ಎನ್ನುವುದರ ಸಂಕೇತ ಇದು. ಎಲ್ಲಕ್ಕಿಂತ ಪರಸ್ಪರತೆ ಇದ್ದರೆ ಮಾತ್ರ ಹೆಚ್ಚು ಗಟ್ಟಿಯಾಗಿ ಬೇರು ಬಿಡಬಹುದು, ಕೂಡಿ ಬಾಳಬಹುದು ಎನ್ನುವ ಪಾಠ ಪ್ರಕೃತಿಯಲ್ಲಿದೆ.

ಜೀವನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವುದು, ನಮ್ಮ ಸಂತೋಷ, ದುಃಖ ಮತ್ತು ಭಯ, ಅಭದ್ರತೆಗಳ ನಡುವೆಯೂ ನಾವು ಸಮಾಧಾನದಿಂದ ಜೀವನ ರೂಪಿಸಿಕೊಳ್ಳಬಹುದು ಎನ್ನುವ ಭರವಸೆ ನಮಗೆ ಪ್ರಕೃತಿಯಿಂದ ಸಿಗುತ್ತದೆ.

ಪಕ್ಷಿಗಳು ಎಲ್ಲೋ ಹಣ್ಣು ತಿಂದು ಇನ್ನೆಲ್ಲೋ ಬೀಜಗಳನ್ನು ವಿಸರ್ಜಿಸುತ್ತವೆ. ಆ ಬೀಜಗಳು ಬಿದ್ದ ಜಾಗದಲ್ಲೇ ಮೊಳಕೆಯೊಡೆಯುತ್ತವೆ. ಸಣ್ಣ ರಾಗಿ ಕಾಳು, ಇದರೊಳಗೆ ಮೊಳಕೆಯೊಡೆಯುವ ಶಕ್ತಿ ಇದ್ದರೆ ಅದು ಭೂಮಿಯನ್ನೇ ಸೀಳಿಕೊಂಡು ಮೇಲೆ ಬರುತ್ತದೆಯೇ ಹೊರತು, ಭೂಮಿ ಗಟ್ಟಿಯಾಗಿದೆ ಎಂದು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ.

ಜಿಂಕೆ, ನವಿಲುಗಳು ಹುಲಿ, ಚಿರತೆಗಳಿಗೆ ಹೆದರಿ ಊಟ ಬಿಡುವುದಿಲ್ಲ, ಡಿಪ್ರೆಷನ್ ಗೆ ಹೋಗುವುದಿಲ್ಲ. ಎಲ್ಲಾ ಅಪಾಯಗಳ ನಡುವೆಯೂ ಬದುಕುಳಿಯುತ್ತವೆ, ಜೀವನೋತ್ಸಾಹ ಕಳೆದುಕೊಳ್ಳುವುದಿಲ್ಲ.

ಯಾವುದೇ ಒಂದು ಬೆಳವಣಿಗೆ ಮತ್ತು ಬದಲಾವಣೆ ಆತುರದಿಂದ ಆಗಲು ಸಾಧ್ಯವಿಲ್ಲ. ಅವುಗಳಿಗೆ ಸಮಯ, ಪೆÇೀಷಣೆ ಮತ್ತು ಪರಿಶ್ರಮ ಬೇಕಾಗುತ್ತದೆ. ವೇಗದ ಜಗತ್ತಿನಲ್ಲಿ, ಪ್ರಕೃತಿಯು ನಮ್ಮೊಂದಿಗೆ ಮತ್ತು ಇತರರೊಂದಿಗೆ ತಾಳ್ಮೆಯಿಂದಿರಲು ನೆನಪಿಸುತ್ತದೆ ಎಂದರು.

ನಮ್ಮ ಹಾಡು, ಸಂಗೀತ, ನೃತ್ಯ, ಚಿತ್ರಕಲೆ ಎಲ್ಲಕ್ಕೂ ಪ್ರಕೃತಿಯೇ ಮೂಲ ಧಾತುವಾಗಿದೆ.ನವಿಲಿನ ಕುಣಿತ ನೃತ್ಯಕ್ಕೆ ಮೂಲವಾದರೆ, ಬೀಸುವ ಗಾಳಿಯ ನಾದ ಸಂಗೀತದ ಮೂಲ, ಮಳೆ ನೀರಿನ ಸದ್ದು- ಹಕ್ಕಿಗಳ ಚಿಲಿಪಿಲಿ ಹಾನಡಿ ಮೂಲ, ಜಲಪಾತ, ನೀರಿನ ತೊರೆಗಳು, ಜಿಂಕೆಯ ಓಟ ಚಿತ್ರಕಲೆಗೆ ಮೂಲ ಸ್ಫೂರ್ತಿ... ಹೀಗಾಗಿ ಪ್ರಕೃತಿಯಿಂದ ಬೇರ್ಪಟ್ಟವನು ಹುಚ್ಚನಾಗುತ್ತಾನೆ, ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ.

ಪರಿಸರದಲ್ಲಿ ಸಮತೋಲನ ತಪ್ಪಿದ್ದರಿಂದ ನೂರಾರು ರೀತಿಯ ವೈರಸ್ ಗಳು, ಬ್ಯಾಕ್ಟೀರಿಯಾಗಳು ಸೃಷ್ಟಿ ಆಗುತ್ತಿವೆ. ಕೋವಿಡ್, ಆಂಥ್ರಾಕ್ಸ್ ರೋಗಗಳು ಬರಲು ಪ್ರಕೃತಿಕ ಸಮತೋಲನ ತಪ್ಪಿದ್ದೇ ಕಾರಣ ಎಂದು ಜೀವ ವಿಜ್ಞಾನಿಗಳು ಎಚ್ಚರಿಸಿದ್ದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ಚಾಮರಾಜನಗರ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕವಿತಾ, ಕೆಪಿಎಸ್ಸಿ ಸದಸ್ಯರಾದ ಪ್ರಭುದೇವ, ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ