LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ತಿಂಗಳಿಂದ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಕ್ರಮ; ಮಧು ಬಂಗಾರಪ್ಪ 

ಮಡಿಕೇರಿ : ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಪೊನ್ನಂಪೇಟೆಯಲ್ಲಿ ರಾಷ್ಟ್ರಮಟ್ಟದ 17 ವರ್ಷದೊಳಗಿನ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಮುಂದಾಗಲಾಗಿದೆ ಎಂದು ಸಚಿವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆ ಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ ಎಂದರು. ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹೊರಯಾಗದಂತೆ ತಪ್ಪಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೊಡಗು ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳು ಇದ್ದು, ಈ ಶಾಲೆಗಲನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಹಳೆಯ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನೆಲದಲ್ಲಿ ಕೂರಬಾರದು. ಶಾಲೆಗಳಿಗೆ ಡೆಸ್ಕ್, ಬೆಂಚ್ ಇತರೆ ಸಾಮಾಗ್ರಿಗಳನ್ನು ವಿತರಿಸಲಾಗುವುದು ಎಂದರು.

ಹೊಸ ತಾಲ್ಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇಮಕಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ ಕೊರತೆ ಇರುವುದರಿಂದ ನೇಮಕ ಮಾಡಿಲ್ಲ. ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ತಹಶೀಲ್ದಾರ್ ಎಚ್.ಎನ್.ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ಡಾ.ಬಿ.ಸಿ.ದೊಡ್ಡೇಗೌಡ, ಎಸ್.ಭಾಗ್ಯಮ್ಮ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಹದೇವಸ್ವಾಮಿ, ಕ್ರೀಡಾ ಸಂಚಾಲಕರಾದ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಶಿಕ್ಷಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇತರರು ಇದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ