LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಣ್ಣೂರು–ಬಾಗಲೂರು ವೈಟ್‌ ಟಾಪಿಂಗ್ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಿ: ಮಹೇಶ್ವರ್ ರಾವ್

ಬೆಂಗಳೂರು: ಹೆಣ್ಣೂರು–ಬಾಗಲೂರು ವೈಟ್‌ ಟಾಪಿಂಗ್ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸುವಂತೆ *ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಪೂರ್ವ ನಗರಪಾಲಿಕೆ ವ್ಯಾಪ್ತಿಯ ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಸುಮಾರು 5 ಕಿ.ಮೀ ಉದ್ದದ ರಸ್ತೆಗೆ ವೈಟ್‌ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ನಿನ್ನೆ ಮಧ್ಯರಾತ್ರಿ 1.00 ಗಂಟೆಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿಯ ಪರಿಶೀಲನೆ ನಡೆಸಿದರು.

ಈ ರಸ್ತೆಯ ಒಂದು ಭಾಗದಲ್ಲಿ 1 ಕಿ.ಮೀ ಮತ್ತು ಮತ್ತೊಂದು ಭಾಗದಲ್ಲಿ 400 ಮೀ. ಉದ್ದದ ರಸ್ತೆಗೆ ವೈಟ್‌ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಭಾಗದಲ್ಲಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವುದನ್ನು ಗಮನಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ 3 ತಿಂಗಳ ಒಳಗಾಗಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ, ಕಾಮಗಾರಿಯ ಕಾರ್ಯಯೋಜನೆ (Flow Chart) ಅನ್ನು ಮೂರು ದಿನಗಳೊಳಗಾಗಿ ಸಲ್ಲಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

*ಹೆಚ್ಚು ಯಂತ್ರೋಪಕರಣಗಳನ್ನು ಬಳಸಿ ಕಾರ್ಯಗತಗೊಳಿಸಿ:*

ಹೆಣ್ಣೂರು–ಬಾಗಲೂರು ರಸ್ತೆ ಸದಾ ವಾಹನ ಸಂಚಾರದ ದಟ್ಟಣೆ ಇರುವ ಪ್ರಮುಖ ಮಾರ್ಗವಾಗಿದ್ದು, ಹೆಚ್ಚಿನ ಯಂತ್ರೋಪಕರಣಗಳು ಹಾಗೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಕಾಮಗಾರಿಯನ್ನು ನಿರ್ದಿಷ್ಟ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

*ಗುಂಡಿಗಳಿಲ್ಲದಂತೆ ಕ್ರಮವಹಿಸಿ:*

ವೈಟ್‌ ಟಾಪಿಂಗ್ ಕೈಗೆತ್ತಿಕೊಂಡಿರುವ 5 ಕಿ.ಮೀ ರಸ್ತೆಯಲ್ಲಿ ಯಾವುದೇ ರಸ್ತೆ ಗುಂಡಿಗಳು ಇರಬಾರದು. ಒಂದು ವೇಳೆ ಗುಂಡಿಗಳು ಕಂಡುಬಂದಲ್ಲಿ ಅವನ್ನು ಆದ್ಯತೆ ಮೇರೆಗೆ ಮುಚ್ಚಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ತಿಳಿಸಿದರು.

*ಸುಧಾರಣೆ ಕಾಣದಿದ್ದರೆ ಟೆಂಡರ್ ರದ್ದು:*

ವೈಟ್‌ ಟಾಪಿಂಗ್ ಕಾಮಗಾರಿಯ ಪ್ರಗತಿ ಕುರಿತು 15 ದಿನಗಳ ಬಳಿಕ ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ಈ ವೇಳೆ ಯಾವುದೇ ಸುಧಾರಣೆ ಕಂಡುಬರದಿದ್ದಲ್ಲಿ ಟೆಂಡರ್ ರದ್ದುಪಡಿಸಲಾಗುವುದು ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಡಾ. ರಾಘವೇಂದ್ರ ಪ್ರಸಾದ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!