LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಿ: ಮಹೇಶ್ವರ್ ರಾವ್

ಬೆಂಗಳೂರು: ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಪರಿಶೀಲನೆ ನಡೆಸಿ, ಹೊರ ವರ್ತುಲ ರಸ್ತೆಯ ಪಿ.ಇ.ಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್ ನಲ್ಲಿ ಕೈಗೆತ್ತಿಕೊಂಡಿರುವ ಮೇಲ್ಸೇತುವೆ ಕಾಮಗಾರಿಗೆ ವೇಗ ನೀಡಿ 3 ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಹೊಸರೆರೆಹಳ್ಳಿ ಜಂಕ್ಷನ್ ನಲ್ಲಿ 500 ಮೀ. ಉದ್ದದ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಈಗಾಗಲೇ ಶೇ. 75 ರಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಇನ್ನು ಒಂದು ಭಾಗದಲ್ಲಿ ಡೌನ್ ರ‍್ಯಾಂಪ್ ಕಾಮಗಾರಿ ಪ್ರಗತಿಯಲಿದ್ದು, ಸರ್ವೀಸ್ ರಸ್ತೆಯ ಅಗಲೀಕರಣ ಮಾಡುವ ವಿಚಾರವಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿಕೊಂಡು ಸಂಚಾರ ಪೊಲೀಸ್ ವಿಭಾಗದ ಜೊತೆ ಮಾತನಾಡಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

*ನಾಯಂಡಹಳ್ಳಿ ಜಂಕ್ಷನ್ ಪರಿಶೀಲನೆ:*

ನಾಯಂಡಹಳ್ಳಿ ಜಂಕ್ಷನ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಬರುವ ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಅನುಪಯುಕ್ತ ವಸ್ತುಗಳಿರುವುದನ್ನು ಕಂಡು ಅದನ್ನು ಕೂಡಲೆ ತೆರವು ಮಾಡಲು ಸೂಚಿಸಿದರು. ಆ ಬಳಿಕ ಮೇಲ್ಸೇತುವೆಯ ಕೆಳಭಾಗದಲ್ಲಿ ಅನಧಿಕೃತವಾಗಿ ಪಾರ್ಕಿಂಗ್ ಮಾಡಿರುವುದನ್ನು ಕಂಡು ಅದನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವುವಾಗುವಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ನಾಯಂಡಹಳ್ಳಿ ಜಂಕ್ಷನ್ ಬಳಿ ವೃಷಭಾವತಿ ವ್ಯಾಲಿ ಮೇಲ್ಬಾಗದಲ್ಲಿ ಗದಲ್ಲಿ ಹೆಚ್ಚುವರಿಯಾಗಿ ಬ್ರಿಡ್ಜ್ ವೆಂಟ್ ನಿರ್ಮಿಸುವ ವಿಚಾರವಾಗಿ, ವರ್ಲ್ಡ್ ಬ್ಯಾಂಕ್ ನಿಂದ ನೀಡುತ್ತಿರುವ ಅನುದಾನದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂಬಂಧ ಅನುದಾನ ಬಂದ ಕೂಡಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿಕೊಂಡು ಕಾಮಗಾರಿಯನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜಕಾಲುವೆ ಹಾಗೂ ಸೈಡ್ ಡ್ರೈನ್ ಗಳಲ್ಲಿ ಹೂಳು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿದು ಹೋಗುವ ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದರು. ನಾಯಂಡಹಳ್ಳಿ ಜಂಕ್ಷನ್ ಬಳಿ ರಾಜಕಾಲುವೆ ಪಕ್ಕದಲ್ಲಿರುವ ಖಾಲಿ ಜಾಗವು ಪಾಲಿಕೆಯದ್ದಾಗಿದ್ದರೆ ಅದನ್ನು ಸ್ವಚ್ಛಗೊಳಿಸಿ ಸುಂದರೀರಣ ಮಾಡಲು ಸೂಚಿಸಿದರು.

*ಸೀವೇಜ್ ಲೈನ್ ಸೋರಿಕೆಯನ್ನು ತಪ್ಪಿಸಿ:*

ವೃಷಭಾವತಿ ವ್ಯಾಲಿಯಲ್ಲಿ ದೊಡ್ಡದಾದ ಸೀವೇಜ್ ಪೈಪ್ ಲೈನ್ ಹಾದು ಹೋಗುತ್ತಿದ್ದು, ಪೈಪ್ ಲೈನ್ ನಿಂದ ಸೋರಿಕೆ ಆಗುತ್ತಿರುವುದನ್ನು ಗಮನಿಸಿ ಕೂಡಲೆ ಜಲಮಂಡಳಿ ಅಧಿಕಾರಿಗಳ ಜೊತೆ ಮಾತನಾಡಿ ಸೀವೇಜ್ ರಾಜಕಾಲುವೆಗೆ ಹೋಗದಂತೆ ಸೋರಿಕೆಯನ್ನು ತಡೆಯಲು ಅಧಿಕಾರಿಗಳಿಗೆ ಸೂಚಿಸಿದರು.

*ಗೋಪಾಲನ್ ಆರ್ಚ್ ಬಳಿಯ ಮೇಲ್ಸೇತುವೆ ಪರಿಶೀಲನೆ:*

ಮೈಸೂರು ರಸ್ತೆ ಗೋಪಾಲನ್ ಆರ್ಚ್ ಬಳಿ ಮೇಲ್ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಪ್ರಸ್ತುತ 33 ಆಸ್ತಿಗಳ ಭೂಸ್ವಾಧೀನ ಪ್ರಕ್ರಿಯಿಂದಾಗಿ ಕಾಮಗಾರಿ ಸ್ಥಗಿತವಾಗಿರುತ್ತದೆ. ಈ ಸಂಬಂಧ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಇತ್ಯರ್ಥ ಮಾಡಿಕೊಂಡು ಕಾಮಗಾರಿಯನ್ನು ಪುನರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸ್ಥಳದಲ್ಲಿ ರಾಜಕಾಲುವೆ ಒತ್ತುವರಿ ಆಗಿಯೇ ಇಲ್ಲವೇ ಎಂದು ಸರ್ವೇ ಮಾಡಿ, ಒತ್ತುವರಿಯಾಗಿದ್ದರೆ ಕೂಡಲೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ರಾಜಕಾಲುವೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.

*ಬಿ.ಹೆಚ್‌.ಇ.ಎಲ್ ಜಂಕ್ಷನ್ ಪರಿಶೀಲನೆ:*

ಮೈಸೂರು ರಸ್ತೆ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಇರುವ ಬಿ ಹೆಚ್‌ ಇ.ಎಲ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡು, ಸ್ಥಳ ಪರಿಶೀಲನೆ ನಡೆಸಿ ಶೀಘ್ರಗತಿಯಲ್ಲಿ ಬಾಕಿಯಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದರು.

ಈ ವೇಳೆ ವಲಯ ಆಯುಕ್ತರಾದ ಸತೀಶ್, ಮುಖ್ಯ ಅಭಿಯಂತರರಾದ ಲೋಕೇಶ್, ರಾಜೇಶ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ