LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ಆರ್ ಮಾರುಕಟ್ಟೆ ಸುತ್ತಲೂ ಸ್ವಚ್ಛತೆ ಕಾಪಾಡಿ: ಮಹೇಶ್ವರ್ ರಾವ್

ಬೆಂಗಳೂರು: ನಗರದ ಕೆ.ಆರ್. ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶ ಹಾಗೂ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆ.ಆರ್ ಮಾರುಕಟ್ಟೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕೆ.ಆರ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಮತ್ತು ರಸ್ತೆಗಳನ್ನು ಪ್ರೆಶರ್ ಜೆಟ್ಟಿಂಗ್ ಯಂತ್ರಗಳ ಮೂಲಕ ಸ್ವಚ್ಛಗೊಳಿಸಲು ಸೂಚಿಸಿದರು.

ಮಾರುಕಟ್ಟೆಯಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಸಮರ್ಕವಾಗಿ ವಿಲೇವಾರಿ ಮಾಡಬೇಕು. ಎಲ್ಲಿಯೂ ತ್ಯಾಜ್ಯ ಬಿಸಾಡದಂತೆ ನೋಡಿಕೊಂಡು ಸದಾ ಸ್ವಚ್ಛತೆಯಿರುವಂತೆ ನೋಡಿಕೊಳ್ಳಲು ಮಾರ್ಷಲ್ ಮೇಲ್ವಿಚಾರಕರಿಗೆ ಸೂಚನೆ ನೀಡಿದರು.

ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿರುವವರ ಸಮೀಕ್ಷೆ ಮಾಡಿ, ಹೆಚ್ಚುವರಿ ಜಾಗ ಆಕ್ರಮಿಸಿಕೊಂಡು ವ್ಯಾಪಾರ ಮಾಡದಂತೆ ಅಗತ್ಯ ಕ್ರಮವಹಿಸಬೇಕು. ಅಂಗಡಿಗಳ ನಡುವಿನ ಅಂತರಕ್ಕಾಗಿ ಮಾಸ್ಟರ್ ಪ್ಲಾನ್ ಮಾಡಲು ಸೂಚಿಸಿದರು.

*ಸೀಜ್ ವಾಹನಗಳನ್ನು ತೆರವುಗೊಳಿಸಿ:*

ಸಂಚಾರಿ ಪೊಲೀಸ್ ವಿಭಾಗದಿಂದ ಸೀಜ್/ವಶಪಡಿಸಿಕೊಂಡಿರುವ ವಾಹನಗಳನ್ನು ಕೆ.ಆರ್ ಮಾರುಕಟ್ಟೆಯ ಪಾರ್ಕಿಂಗ್ ಸ್ಥಳದಲ್ಲಿದ್ದು, ಅವುಗಳನ್ನು ಕೂಡಲೇ ತೆರವುಗೊಳಿಸಬೇಕು. ಜೊತೆಗೆ ತುಂಬಾ ದಿನಗಳಿಂದ ನಿಂತಿರುವ ವಾಹನಗಳನ್ನು ಗುರುತಿಸಿ ಸಂಚಾರಿ ಪೊಲೀಸ್ ಸಹಯೋಗದೊಂದಿಗೆ ತೆರವುಗೊಳಿಸಲು ಸೂಚನೆ ನೀಡಿದರು.

ಈ ವೇಳೆ ಪಶ್ಚಿಮ ವಲಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಮುಖ್ಯ ಅಭಿಯಂತರರಾದ ಲೋಕೇಶ್, ಬಸವರಾಜ್ ಕಬಾಡೆ, ರಾಜೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ