LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿ ಮಂಕಾಳು ವೈದ್ಯ ಅವಿರೋಧ ಆಯ್ಕೆ

ಬೆಂಗಳೂರು:  ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿ  ಅವಿರೋಧವಾಗಿ ಆಯ್ಕೆಯಾದ ಭಟ್ಕಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ  ಮಾಜಿ ಸಚಿವ ಮಂಕಾಳು ವೈದ್ಯ ಅವರನ್ನು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಇಲಾಖೆ ಸಚಿವ ವಿಜಯಾನಂದ ಕಾಶಪ್ಪನವರ್ ಅಭಿನಂದಿಸಿದ್ದಾರೆ. 

ಮಂಕಾಳು ವೈದ್ಯರು ಸದನದ ಘನತೆ, ಗೌರವ ಮತ್ತು ಸಂಸದೀಯ ಸಂಪ್ರದಾಯಗಳನ್ನು ಕಾಪಾಡಿಕೊಂಡು ಉಪ ಸಭಾಪತಿ ಸ್ಥಾನದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಳಮಟ್ಟದಿಂದ ಬಂದ ಹಿಂದುಳಿದ ಸಮುದಾಯದ ಮುಖಂಡರೊಬ್ಬರು ವಿಧಾನಸಭೆಯಂತಹ ಅತ್ಯುನ್ನತ ಪ್ರಜಾಸತ್ತಾತ್ಮಕ ವೇದಿಕೆಯ ಪ್ರಮುಖ ಸ್ಥಾನಕ್ಕೇರಿರುವುದು ಸಮುದಾಯದ ದೃಷ್ಟಿಯಿಂದ ಗೌರವದ ಸಂಗತಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿಂದುಳಿದ ವರ್ಗಗಳು, ಶೋಷಿತರು ಮತ್ತು ಅಂಚಿನ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರವನ್ನು ಈ ಬೆಳವಣಿಗೆ ಮತ್ತೊಮ್ಮೆ ತೋರಿಸುತ್ತದೆ  ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಿಯಲ್ ಎಸ್ಟೇಟ್ ಮಾಫಿಯಾಗೆ ಸರ್ಕಾರ ರೈತರ ಭೂಮಿಯನ್ನು ಕಸಿಯುತ್ತಿದೆಬಿಡದಿ ಟೌನ್ಶಿಪ್ ಮತ್ತು ನೈಸ್ ಯೋಜನೆಗಳ ಅಕ್ರಮಗಳ ಬಗ್ಗೆ ಗೌಡರ ಕಿಡಿವಿಧಾನಸಭೆ ಅಧಿವೇಶನದ ಕಲಾಪ ವೀಕ್ಷಿಸಿ, ಶಿಕ್ಷಣ ಸಚಿವರ ಮೂಲಕ ಪ್ರಜಾಪ್ರಭುತ್ವದ ಕಾರ್ಯವೈಖರಿ ಅರಿತ ವಿದ್ಯಾರ್ಥಿಗಳುಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ; CM ಜೊತೆ ಚರ್ಚಿಸಿ ಶೀಘ್ರ ತೀರ್ಮಾನ: ಸಚಿವ ಮಧು ಬಂಗಾರಪ್ಪವಿಧಾನ ಪರಿಷತ್‌ನ ನೂತನ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ : ವಿಜಯಾನಂದ ಕಾಶಪ್ಪನವರ್ ಅಭಿನಂದನೆಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿ ಮಂಕಾಳು ವೈದ್ಯ ಅವಿರೋಧ ಆಯ್ಕೆಆಕಾಶ್ ನಿಂದ ಆಂಥೆ 2026ರ ಪರೀಕ್ಷೆ ಸಿದ್ದತೆ ಪ್ರಾರಂಭಕೆನರಾ ಬ್ಯಾಂಕ್‌ನಿಂದ 80ನೇ ಸ್ವಾತಂತ್ರ್ಯ ದಿನಾಚರಣೆ: ರಾಷ್ಟ್ರ ನಿರ್ಮಾಣದ ಬದ್ಧತೆಯ ಪುನರುಚ್ಚಾರಭ್ರಷ್ಟಾಚಾರ ಮುಕ್ತ, ಸ್ವಚ್ಛ ಮತ್ತು ಸಮೃದ್ಧ ಭಾರತ ನಿರ್ಮಾಣಕ್ಕೆ ಹೆಚ್.ಎಂ. ರಮೇಶ್ ಗೌಡ ಕರೆಯಾರನ್ನೂ ಗುರಿಯಾಗಿಸಿ ಹೇಳಿಲ್ಲ; ನೋವಾಗಿದ್ದರೆ ವಿಷಾದ – ವಿಜಯಾನಂದ ಕಾಶಪ್ಪನವರ್