LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್‌ಶಿಪ್ ವಿರೋಧಿಸಿ ಆಗಸ್ಟ್ 9 ರಿಂದ 11ರ ವರೆಗೆ ಜೆಡಿಎಸ್ ನಿಂದ ಬೃಹತ್ ಪಾದಯಾತ್ರೆ

ಈ ಸರ್ಕಾರಕ್ಕೆ ಕಣ್ಣು ಕಾಣುತ್ತಿಲ್ಲ, ಕಿವಿಯೂ ಕೇಳುತ್ತಿಲ್ಲ ರೈತರ ಪರವಾಗಿ ನಿಲ್ಲುತ್ತೇವೆ - ನಿಖಿಲ್ ಕುಮಾರಸ್ವಾಮಿ, ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ 38 ಕಿ.ಮೀ ಬೃಹತ್ ಪಾದಯಾತ್ರೆ.

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜನತಾದಳ (ಜೆಡಿಎಸ್) ವತಿಯಿಂದ ಆಗಸ್ಟ್ 9, 10 ಮತ್ತು 11 ರಂದು ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ 38 ಕಿ.ಮೀ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.news_1785694908_3_472.webp

ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೈರಮಂಗಲದಿಂದ ಫ್ರೀಡಂ ಪಾರ್ಕ್‌ವರೆಗೆ ರೈತರ ಜೊತೆ ಪಾದಯಾತ್ರೆ ಮಾಡುತ್ತೇವೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

*ಸರ್ಕಾರಕ್ಕೆ ಕಣ್ಣು ಕಾಣುತ್ತಿಲ್ಲ, ಕಿವಿಯೂ ಕೇಳುತ್ತಿಲ್ಲ*

ರೈತರು ಸಂಪೂರ್ಣವಾಗಿ ಈ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಈ ಸರ್ಕಾರಕ್ಕೆ ಕಣ್ಣು ಕಾಣುತ್ತಿಲ್ಲ, ಕಿವಿಯೂ ಕೇಳುತ್ತಿಲ್ಲ. ರೈತರ ವಿರುದ್ಧ ಸರ್ಕಾರದ ನಡೆ ಇದೆ. ಹಾಗಾಗಿ ನಾವು ರೈತರ ಪರ ನಿಲ್ಲುವ ಕೆಲಸ ಮಾಡುತ್ತಿದ್ದೇವೆ ಎಂದು ನಿಖಿಲ್ ತಿಳಿಸಿದರು.

ಕಳೆದ ಜುಲೈ 30, 31 ಮತ್ತು ಆಗಸ್ಟ್ 1 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ಅಜ್ಜಿ ಚೆನ್ನಮ್ಮ ಅವರ ಅಗಲಿಕೆ ದುಃಖದ ಹಿನ್ನೆಲೆಯಲ್ಲಿ  ಪಾದಯಾತ್ರೆಯನ್ನು ಮುಂದೂಡಲಾಗಿತ್ತು, ಆದರೆ ಈಗ ಆಗಸ್ಟ್ 9 ರಿಂದ 11 ರವರೆಗೆ 3 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಹೇಳಿದರು.news_1785694906_1_198.webp

*ಪಾದಯಾತ್ರೆಯಲ್ಲಿ HDD ಮತ್ತು  HDK ಭಾಗಿ* 
 
ಪಾದಯಾತ್ರೆಯಲ್ಲಿ ರಾಮನಗರ ಜಿಲ್ಲೆಯ ಐದು ತಾಲೂಕಿನ ಕಾರ್ಯಕರ್ತರು, ಮುಖಂಡರು ಹಾಗೂ ರೈತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಪ್ರಧಾನಿ ಹೆಚ್ .ಡಿ. ದೇವೇಗೌಡರು , ಕೇಂದ್ರ ಸಚಿವ ಹೆಚ್ .ಡಿ. ಕುಮಾರಸ್ವಾಮಿ ಅವರು,  ಜೆಡಿಎಸ್ ಹಾಲಿ ಮತ್ತು ಮಾಜಿ ಶಾಸಕರು ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

*ರೈತರ ಪರವಾಗಿ ಕಾನೂನು ಹೋರಾಟ*

ಜೊತೆಗೆ ರೈತರ ಪರವಾಗಿ ಕಾನೂನು ಹೋರಾಟವನ್ನೂ ಮಾಡುತ್ತಿದ್ದೇವೆ. ಸೋಮವಾರದಿಂದ ಎಲ್ಲಾ ಫೈಲಿಂಗ್ ಪ್ರಾರಂಭವಾಗುತ್ತಿದೆ. ಯಾವೆಲ್ಲಾ ದಾಖಲಾತಿಗಳನ್ನು ಕೊಡಬೇಕು ಎಂಬುದರ ಕುರಿತು ವಕೀಲರಿಂದ ಮಾಹಿತಿ ಪಡೆಯುತ್ತಿದ್ದೇವೆ. ಕೋರ್ಟ್ ಕೂಡ ರೈತರ ಪರವಾಗಿ ನಿಲ್ಲುವ ಭರವಸೆ ಇದೆ ಎಂದು ಹೇಳಿದರು.

*ಮೈತ್ರಿ ಹೋರಾಟದ ಬಗ್ಗೆ ಸ್ಪಷ್ಟನೆ*

ಬಿಡದಿ ಟೌನ್‌ಶಿಪ್ ಹಾಗೂ ಕಾವೇರಿ ಹೋರಾಟದ ವಿಚಾರದಲ್ಲಿ ಮೈತ್ರಿಯಲ್ಲಿ ಒಮ್ಮತ ಮೂಡದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಬಿಜೆಪಿ ಕಾವೇರಿ ಹೋರಾಟ ಮಾಡುವಾಗ ನಮ್ಮ ಅಜ್ಜಿಯ 11ನೇ ದಿನದ ಕಾರ್ಯ ಇತ್ತು. ಇಂತಹ ಸಂದರ್ಭದಲ್ಲಿ ನಾವು ಇವೆಲ್ಲವನ್ನೂ ಮಾತಾಡುವುದಕ್ಕೆ ಆಗುತ್ತಿರಲಿಲ್ಲ. ಹೋರಾಟ, ಪ್ರತಿಭಟನೆ, ಪಾದಯಾತ್ರೆಗಳನ್ನು ಕೆಲವೊಮ್ಮೆ ಪ್ರತ್ಯೇಕವಾಗಿ ಮಾಡಬೇಕಾಗುತ್ತದೆ. ಇಲ್ಲಿ ವ್ಯತ್ಯಾಸ ಎನ್ನುವುದು ಏನೂ ಇಲ್ಲ. ಸಂದರ್ಭಕ್ಕೆ ತಕ್ಕಹಾಗೆ ಕೆಲವೊಂದು ಪ್ರತ್ಯೇಕ, ಕೆಲವೊಂದು ಒಟ್ಟಾಗಿ ಹೋರಾಟ ಆಗುತ್ತದೆ. ಬಿಡದಿ ಪಾದಯಾತ್ರೆ ವಿಚಾರದಲ್ಲಿ ಬಿಜೆಪಿಯ ಯಾರೂ ನಮ್ಮ ಜೊತೆ ಚರ್ಚೆ ಮಾಡಿಲ್ಲ. ಈ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಅವರ ಜೊತೆಯಾಗಲಿ, ನನ್ನ ಜೊತೆಯಾಗಲಿ ಚರ್ಚೆ ಮಾಡಿಲ್ಲ" ಎಂದು ಸ್ಪಷ್ಟಪಡಿಸಿದರು.news_1785694905_0_431.webp

*ಕಾವೇರಿ ಸರ್ವಪಕ್ಷ ಸಭೆ*

"ಇಂದು ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಕುಮಾರಣ್ಣ ಅವರು ಕೂಡ ಸಭೆಗೆ ಹೋಗಿದ್ದಾರೆ. ಎಲ್ಲಾ ಪಕ್ಷದ ಹಿರಿಯ ನಾಯಕರು ಭಾಗಿಯಾಗಿ ಕಾವೇರಿ ವಿಚಾರದಲ್ಲಿ ಚರ್ಚೆ ಮಾಡುತ್ತಿದ್ದಾರೆ. ನಮ್ಮ ನೀರಿನ ಶೇಖರಣೆ, ವಾಡಿಕೆ ಮಳೆ ಹಾಗೂ ರೈತರ ಸಮಸ್ಯೆಗಳು ಚರ್ಚೆ ಆಗಲಿದೆ. ಎಲ್ಲಾ ಆಣೆಕಟ್ಟುಗಳ ಸ್ಥಿತಿಗತಿಗಳ ಬಗ್ಗೆ ಅವಲೋಕನ ಮಾಡಲಾಗುತ್ತದೆ. ಅಂತಿಮವಾಗಿ ರೈತರ ಪರವಾದ ಚರ್ಚೆ, ತೀರ್ಮಾನ ಆಗಲಿ ಎಂದು ಮನವಿ ಮಾಡುತ್ತೇನೆ" ಎಂದರು.

*ಆ.13 ಕರ್ನಾಟಕ ಬಂದ್‌ಗೆ ಬೆಂಬಲ*

"ಆಗಸ್ಟ್ 13 ರಂದು ಕರ್ನಾಟಕ ಬಂದ್‌ಗೆ ಹಲವಾರು ಸಂಘಟನೆಗಳು, ರೈತಪರ ಹೋರಾಟಗಾರರು ಕರೆ ಕೊಟ್ಟಿದ್ದಾರೆ. ಯಾವಾಗ ಸರ್ಕಾರಗಳು ಸರಿಯಾಗಿ ಸ್ಪಂದಿಸುವುದಿಲ್ಲ ಆಗ ಬಂದ್‌ಗಳು ಆಗುತ್ತವೆ. ಹಾಗಾಗಿ ಅವರ ಜೊತೆಯಲ್ಲಿ ಜೆಡಿಎಸ್ ಕೂಡ ನಿಲ್ಲುತ್ತದೆ. ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸುತ್ತೇವೆ" ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಡದಿ ಟೌನ್‌ಶಿಪ್ ವಿರೋಧಿಸಿ ಆಗಸ್ಟ್ 9 ರಿಂದ 11ರ ವರೆಗೆ ಜೆಡಿಎಸ್ ನಿಂದ ಬೃಹತ್ ಪಾದಯಾತ್ರೆಸ್ವಚ್ಛ ಸರ್ವೇಕ್ಷಣ 2025-26 ರ  3ನೇ ಹಂತದ ವಿಶೇಷ ಸ್ವಚ್ಛತಾ ಅಭಿಯಾನದ 1ನೇ ದಿನ 36 ಬಸ್ ಶೆಲ್ಟರ್ ಗಳ ಸ್ವಚ್ಛತೆ: ಜಗದೀಶ್ ಜಿಪಾಲಿಕೆ ವ್ಯಾಪ್ತಿಯಲ್ಲಿ ಇದುವರೆಗೂ 115.56 ಕಿ.ಮೀ. ಪಾದಚಾರಿ ಮಾರ್ಗ ಒತ್ತುವರಿ ತೆರವುಶ್ರೀ ಪ್ರಸನ್ನ ವೀರಾಂಜನೇಯ ಯೋಗ ಕೇಂದ್ರದಲ್ಲಿ ಅದ್ದೂರಿಯಾಗಿ ನೆರವೇರಿದ ಉಭಯ ಕಾರ್ಯಕ್ರಮಫೋರ್ಟಿಸ್ ಆಸ್ಪತ್ರೆಯಿಂದ ಭಾರತದ ಅತ್ಯಂತ ವೇಗದ 3,000 ಡಾ ವಿನ್ಸಿ ಎಕ್ಸ್ಐ ರೊಬೊಟಿಕ್ ಶಸ್ತ್ರಚಿಕಿತ್ಸೆಗಳ ನಿರ್ವಹಣೆಯ ಸಾಧನೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾ