LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಕುರಿತು ಸಭೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಕುರಿತು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ರವರು ಜಲಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ನಿಯಂತ್ರಿಸಲು ಜಲಮಂಡಳಿ ಇಲಾಖೆಯ ಸಹಕಾರ ಅತ್ಯಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಇಲಾಖೆಯ ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳಿಗೆ ಈ ಕೆಳಕಂಡಂತೆ ಸೂಚನೆ ನೀಡಲು ತಮ್ಮಲ್ಲಿ ಕೋರಲಾಗಿದೆ.

* ತಮ್ಮ ವ್ಯಾಪ್ತಿಗೆ ಬರುವ ನೀರಿನ ಶುದ್ದೀಕರಣ ಘಟಕಗಳು ಮತ್ತು ಕೊನೆಯ ಹಂತದ ವಿತರಣ ನೀರಿನ ಮಾದರಿಗಳಲ್ಲಿ ಕ್ಲೋರಿನೇಷನ್ ಮಟ್ಟ ನಿಯಮಾನುಸಾರ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.

* ಸಾಂಕ್ರಾಮಿಕ ರೋಗಗಳು ವರದಿಯಾದ ಪ್ರದೇಶಗಳಲ್ಲಿ Manhole ಗಳು ಮತ್ತು ಕೊಳಚೆ ನೀರಿನಿಂದ ಮಾದರಿಗಳನ್ನು ಸಂಗ್ರಹಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.

* ಯಾವುದಾದರೂ ನೀರಿನ ಕೊಳವೆಗಳು ಸೋರಿಕೆ ಇದ್ದಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.

* ಮೇಲ್ಕಂಡ ಎಲ್ಲಾ ವಿಷಯಗಳಿಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಕಾರ್ಯಕ್ರಮ ಅಧಿಕಾರಿಗಳು(ಐ.ಹೆಚ್.ಐ.ಪಿ) ಬಿಬಿಎಂಪಿ ಇ-ಮೇಲ್ [email protected] ಗೆ ಕಳುಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಈ ಪತ್ರದ ಮೂಲಕ ಕೋರಲಾಗಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭ