LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯು ನೀರಿನ ಸಂಬಂಧ ಸಭೆ

ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸಭೆ ನಡೆಸಿದರು.

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕುರಿತು ಸಭೆ:


ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಬೋರ್‌ವೆಲ್ ಕೊರೆಯುವ(ರಿಗ್ಸ್) ವಾಹನಗಳನ್ನು ಬಳಿಸಿಕೊಂಡು ನೀರಿನ ಸಮಸ್ಯೆ ಬಗೆಹರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಲಯ ಕಛೇರಿಯಲ್ಲಿ ನಡೆಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದುರಸ್ತಿಯಲ್ಲಿರುವ ಬೋರ್ ವೆಲ್ ಗಳನ್ನು ಕೂಡಲೆ ಸರಿಪಡಿಸಿ ನೀರು ಪೂರೈಕೆ ಮಾಡಲು ಸೂಚಿಸಲಾಯಿತು.

ರಾಜರಾಜೇಶ್ವರಿ ನಗರ ವಲಯದಲ್ಲಿ 110 ಹಳ್ಳಿಗಳ ಪೈಕಿ 20 ಹಳ್ಳಿಗಳು ಬರಲಿದ್ದು, ಎಲ್ಲಿಯೂ ನೀರಿನ ಅಭಾವವಾಗದಂತೆ ನೋಡಿಕೊಳ್ಳಬೇಕು. ಈ ವಲಯದಲ್ಲಿ 146 ಶುದ್ಧ ಕುಡಿಯುವ ನೀರಿನ ಘಕಟಗಳು ಬರಲಿದ್ದು, 93 ಘಟಕಗಳಿಗೆ ಬೋರ್ ವೆಲ್ ಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ. 36 ಘಟಕಗಳಿಗೆ ಜಲಮಂಡಳಿ ವತಿಯಿಂದ ನೀರು ಪೂರೈಕೆ ಮಾಡಲಾಗುತ್ತಿದ್ದು, 17 ಘಟಕಗಳು ಸ್ಥಗಿತಗೊಂಡಿರುತ್ತವೆ. ಅವುಗಳನ್ನು ಕೂಡಾ ಕಾರ್ಯನಿರ್ವಹಿಸುವಂತೆ ಮಾಡಲು ಸೂಚಿಸಿದರು.

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ನೀರು ಸಮಸ್ಯೆಯಿರುವ ವಿವಿಧ 91 ಸ್ಥಳಗಳಲ್ಲಿ ಸಿಂಟೆಕ್ಸ್ ಟ್ಯಾಂಕ್ ಗಳನ್ನು ಅಳವಡಿಸಿದ್ದು, ಜಲಮಂಡಳಿಯಿಂದ ನೀರಿನ ವ್ಯವಸ್ಥೆ ಮಾಡಿಕೊಂಡು ನೀರಿನ ಸಮಸ್ಯೆ ಆಗದಂಗೆ ನೋಡಿಕೊಳ್ಳಲು ಸೂಚಿಸಿದರು.

 ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕುರಿತು ಸಭೆ:


ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸಲು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೆ ಬೋರ್ ವೆಲ್ ಕೊರೆದು ನೀರಿನ ಸಂಪರ್ಕ ಕಲ್ಪಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಪಾಲಿಕೆಯ 38 ಹಾಗೂ ಜಲಮಂಡಳಿಯ 18 ನೀರಿನ ಟ್ಯಾಂಕರ್ ಗಳ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. 113 ಸ್ಥಳಗಳಲ್ಲಿ ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಇರಿಸಲಾಗಿದ್ದು, ಜಲಮಂಡಳಿಯಿಂದ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 80 ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ, 24 ಘಟಕಗಳು ಸ್ಥಗಿತಗೊಂಡಿದ್ದು, ಜಲಮಮಡಳಿಯಿಂದ ನೀರಿನ ವ್ಯವಸ್ಥೆ ಮಾಡಲು ಸೂಚಿಸಿದರು.

ಈ ವೇಳೆ ವಲಯ ಆಯುಕ್ತರಾದ ಶಿವಾನಂದ ಕಪಾಶಿ, ರಮ್ಯಾ, ವಿಪತ್ತು ನಿರ್ವಹಣೆಯ ನೋಡಲ್ ಅಧಿಕಾರಿಯಾದ ಸುರೋಳ್ಕರ್ ವಿಕಾಸ್ ಕಿಶೋರ್, ಮುಖ್ಯ ಅಭಿಯಂತರರಾದ ರಾಘವೇಂದ್ರ ಪ್ರಸಾದ್, ಶಶಿ ಕುಮಾರ್, ಕಾರ್ಯಪಾಲಕ ಅಭಿಯಂತರರು, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ