LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆ: ಬ್ಯಾಂಕ್ ನೋಡಲ್ ಅಧಿಕಾರಿಗಳೊಂದಿಗೆ ಸಭೆ

ಬೆಂಗಳೂರು:ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅನುಮಾನಾಸ್ಪದ ವಹಿವಾಟುಗಳು ನಡೆಯುತ್ತಿರುವುದು ಕಂಡುಬಂದಲ್ಲಿ ಕೂಡಲೆ ಚುನಾವಣಾ ವಿಭಾಗದ ಗಮನಕ್ಕೆ ತರಬೇಕೆಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ ರವರು ಬ್ಯಾಂಕ್ ನೋಡಲ್ ಅಧಿಕಾರಿಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಸಂಬಂಧ ಬ್ಯಾಂಕ್ ನೋಡಲ್ ಅಧಿಕಾರಿಗಳೊಂಡಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದೇ ಖಾತೆಯಿಂದ ಸುಮಾರು ಖಾತೆಗಳಿಗೆ ಹಣ ವರ್ಗಾವಣೆಯಾದರೆ ಅದರ ಮಾಹಿತಿಯನ್ನು ನಮಗೆ ಕೊಡಬೇಕು. ಮಾಹಿತಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ನೀವೇ ಜವಾಬ್ದಾರರಾಗುತ್ತೀರಾ. ಅಲ್ಲದೇ ಚುನಾವಣಾ ಆಗೋಗದಿಂದ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.

ಯಾವುದೇ ಪೂರ್ವನಿದರ್ಶನವಿಲ್ಲದೆ ಚುನಾವಣಾ ಪ್ರಕ್ರಿಯೆಯ ಸಮಯದಲ್ಲಿ ಹಲವಾರು ವ್ಯಕ್ತಿಗಳ ಖಾತೆಗಳಿಗೆ ಒಂದು ಬ್ಯಾಂಕ್ ಖಾತೆಯಿಂದ ಆರ್.ಟಿ.ಜಿ.ಎಸ್/ನೆಫ್ಟ್ ಮೂಲಕ ಹೆಚ್ಚು ಹಣ ವರ್ಗಾವಣೆ ಮಾಡುವದು, ಯಾವುದೇ ನಗದು ಠೇವಣಿ ಅಥವಾ 1 ಲಕ್ಷ ರೂ.ಗಿಂತ ಹೆಚ್ಚಿನ ನಗದು ಹಿಂಪಡೆಯುವಿಕೆ, ಮತದಾರರಿಗೆ ಹಣ ನೀಡಲು ಬಳಸಬಹುದಾದ ಯಾವುದೇ ಅನುಮಾನಾಸ್ಪದ ನಗದು ವಹಿವಾಟುಗಳ ಬಗ್ಗೆ ಚುನಾವಣಾ ವಿಭಾಗಕ್ಕೆ ಕೂಡಲೆ ಮಾಹಿತಿ ನೀಡಲು ತಿಳಿಸಿದರು.

ನಗದು ಠೇವಣಿ ಅಥವಾ ಹಿಂಪಡೆಯುವಿಕೆಯ ಮೊತ್ತವು 10 ಲಕ್ಷ ರೂ.ಗಳಿಗಿಂತ ಹೆಚ್ಚಿದ್ದರೆ, ಅಂತಹ ಮಾಹಿತಿಯನ್ನು ಆದಾಯ ತೆರಿಗೆ ಕಾನೂನುಗಳ ಅಡಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಆದಾಯ ತೆರಿಗೆ ಇಲಾಖೆಯ ನೋಡಲ್ ಅಧಿಕಾರಿಗೆ ರವಾನಿಸಲಾಗುವುದು ಎಂದರು.

ಜನಪ್ರತಿನಿಧಿಗಳ ಹೆಸರು/ಭಾವಚಿತ್ರಗಳನ್ನು ತೆಗೆಯಿರಿ

ಚುನಾವಣಾ ಆಯೋಗದ ನಿರ್ದೇಶನದಂತೆ ಖಾಸಗಿ ಆಸ್ತಿಗಳಲ್ಲಿ 72 ಗಂಟೆಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ಕಡ್ಡಾಯವಾಗಿ ತೆಗೆಯಬೇಕು. ಇಲ್ಲವಾದಲ್ಲಿ ಚುನಾವಣಾ ಆಯೋಗದಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಭದ್ರತಾ ಸಿಬ್ಬಂದಿಯೊಂದಿಗೆ ನಗದು ರವಾನಿಸಿ

ಯಾವುದೇ ಬ್ಯಾಂಕ್ ಗಳಿಂದ ನಗದು ಅಥವಾ ಎಟಿಎಂಗಳಿಂದ ತೆಗೆಯುವ ನಗದನ್ನು ಭದ್ರತಾ ಸಿಬ್ಬಂದಿಯೊಂದಿಗೆ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು‌ ಚುನಾವಣಾ ಆಯೋಗದ ನಿಯಮಾನುಸಾರ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ರವಾನೆ ಮಾಡಬೇಕು. ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳದೆ ನಗದು ರವಾನೆ ಮಾಡಿ ಸೀಜ್ ಮಾಡಿಕೊಳ್ಳುವ ಹಾಗೆ ಮಾಡಿಕೊಳ್ಳಬೇಡಿ ಎಂದು ಸೂಚನೆ ನೀಡಿದರು.

ಈ ವೇಳೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರಾಮ ಚಂದ್ರ ನಾಯ್ಕ್, ಮುಖ್ಯ ಲೆಕ್ಕಾಧಿಕಾರಿ ಭೀನಾ, ವಿವಿಧ ಬ್ಯಾಂಕ್ ಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ