LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೊರಬ ಕ್ಷೇತ್ರದಲ್ಲಿ ₹2.30 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಭೂಮಿಪೂಜೆ

ಸೊರಬ :  ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ₹2.30 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.news_1790680085_2_210.webp

ಸೊರಬ ಲೋಕೋಪಯೋಗಿ ಇಲಾಖೆ ಉಪವಿಭಾಗದ ವತಿಯಿಂದ ಹರೀಶಿ ಭಾಗದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸುಮಾರು ₹1.80 ಕೋಟಿ ವೆಚ್ಚದ ಎರಡು ಪ್ರಮುಖ ಕಾಮಗಾರಿಗಳಿಗೆ ಹಿರೇಕಲಗೋಡು ಗ್ರಾಮದಲ್ಲಿ ಸಚಿವರು ಗುದ್ದಲಿಪೂಜೆ ನೆರವೇರಿಸಿದರು.

ಹರೀಶಿ–ದ್ಯಾವಸ–ಈಡೂರು ರಸ್ತೆ ಡಾಂಬರೀಕರಣ ಹಾಗೂ ಇದೇ ಮಾರ್ಗದ ಹಿರೇಕಲಗೋಡು ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗಳು ಇದರಲ್ಲಿ ಸೇರಿವೆ. ಈ ಕಾಮಗಾರಿಗಳಿಂದ ಈ ಭಾಗದ ಗ್ರಾಮಗಳ ಸಂಪರ್ಕ ಹಾಗೂ ಸಂಚಾರ ಮತ್ತಷ್ಟು ಸುಗಮವಾಗಲಿದೆ.

ಇದೇ ಭಾಗದಲ್ಲಿ ಮುಂದಿನ ದಿನಗಳಲ್ಲಿ ಸುಮಾರು ₹6 ಕೋಟಿ ವೆಚ್ಚದಲ್ಲಿ ಇನ್ನೂ ನಾಲ್ಕು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಸೇತುವೆ ಪುನರ್‌ನಿರ್ಮಾಣ, ಕಾಲುಸಂಕ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳು ಇದರಲ್ಲಿ ಒಳಗೊಂಡಿವೆ ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಚ್ಚೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕರವಳ್ಳಿ ಗ್ರಾಮದ ಎಸ್‌ಸಿ ಕೇರಿಯಿಂದ ಚಂದ್ರಗುತ್ತಿ ಲೋಕೋಪಯೋಗಿ ರಸ್ತೆವರೆಗೆ ಸುಮಾರು ₹80 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡುವ ಕಾಮಗಾರಿಗೂ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.news_1790680085_0_601.webp

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿ, ಜನರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಕ್ಷೇತ್ರದ ವಿವಿಧ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ ಆದ್ಯತೆ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PHCO,HIOಗಳ ವಿವಿಧ ಬೇಡಿಕೆ ಈಡೇರಿಕೆಗೆ ಸಮುದಾಯ ಆರೋಗ್ಯ ಎನ್ಎಚ್ಎಂ ಸಂಘದಿಂದ ಒತ್ತಾಯ ಅಪೋಲೊ ಆಸ್ಪತ್ರೆಯಿಂದ ಆಟೊ ಚಾಲಕರ ಹೃದಯದ ಆರೋಗ್ಯದ ಕಾಳಜಿವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ KSPKSKWU ಒತ್ತಾಯಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡಯೋಜಿತ ಬೆಂಗಳೂರು ನಿರ್ಮಾಣಕ್ಕಾಗಿ ವ್ಯವಸ್ಥಿತ ರಸ್ತೆ ಜಾಲ – ಸಚಿವ ಕೃಷ್ಣ ಬೈರೇಗೌಡಸೊರಬ ಕ್ಷೇತ್ರದಲ್ಲಿ ₹2.30 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಭೂಮಿಪೂಜೆಹೃದಯ ಆರೋಗ್ಯ ಜಾಗೃತಿ ಮೂಡಿಸಿದ ರಾಮಯ್ಯ ಮೆಮೋರಿಯಲ್ ಹಾಸ್ಪಿಟಲ್‌ಚುನಾವಣಾ ಆಯೋಗದ ಸ್ವಾಯತ್ತತೆ ರಕ್ಷಿಸಲು ಸಿಇಸಿಯನ್ನು ವಜಾಗೊಳಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿ: ಸಿದ್ದರಾಮಯ್ಯಚುನಾವಣಾ ಆಯೋಗ ಮತಗಳ್ಳತನದ ಪಾಲುದಾರ: ಸಿಎಂ ಡಿ ಕೆ ಶಿವಕುಮಾರ್‌ರಾಜ್ಯ ಸರ್ಕಾರಕ್ಕೆ ಹೃದಯ ಇಲ್ಲ, ಸಿಎಂ ರಿಯಲ್ ಎಸ್ಟೇಟ್ ಏಜೆಂಟ್ ರೀತಿ ಮಾತನಾಡ್ತಿದ್ದಾರೆ: ನಿಖಿಲ್ ವಾಗ್ದಾಳಿ