LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಬೇಗಾನೆ ರಾಮಯ್ಯನವರ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ

ಶಿವಮೊಗ್ಗ: ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಶ್ರೀ ಬೇಗಾನೆ ರಾಮಯ್ಯನವರು ನಿಧನರಾದ ವಿಷಯ ತಿಳಿದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

ಬೇಗಾನೆ ರಾಮಯ್ಯನವರ ಹೊಸಹಳ್ಳಿಯ ಸೀತಾ ಫಾರಂಗೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, "ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಸ್ಮರಣೀಯ. 'ಬೋರ್ವೆಲ್ ರಾಮಯ್ಯ' ಎಂದೇ ಖ್ಯಾತಿ ಪಡೆದಿದ್ದ ಅವರು ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಅವರ ಸೇವೆ ಸದಾ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಹೇಳಿದರು.

ಬೇಗಾನೆ ರಾಮಯ್ಯನವರು 90 ವರ್ಷ ವಯಸ್ಸಿನವರಾಗಿದ್ದರು. ಅವರು ಶೃಂಗೇರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ ಶ್ರೀ ಆರ್. ಗುಂಡೂರಾವ್ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.ಈ ಸಂದರ್ಭದಲ್ಲಿ ಸಚಿವ ಶ್ರೀ ಮಧು ಬಂಗಾರಪ್ಪನವರು ತಮ್ಮ ಪೂಜ್ಯ ತಂದೆಯವರಾದ ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಬಂಗಾರಪ್ಪನವರು ಮಂತ್ರಿಗಳಾಗಿದ್ದಾಗ ಶ್ರೀ ಬೇಗಾನೆ ರಾಮಯ್ಯನವರು ಕುಮಾರ ಕೃಪಾ ನಿವಾಸದ ಬಳಿಯೇ ನೆಲೆಸಿದ್ದರು, ಅಂದಿನಿಂದ ನಮ್ಮ ಬಾಲ್ಯದ ದಿನಗಳಲ್ಲಿ ಅವರ ಒಡನಾಟವಿತ್ತು, ಎಂದು ಸ್ಮರಿಸಿದರು.

ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅವರು ಕೊಳವೆಬಾವಿಗಳನ್ನು ಕೊರೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಕಾರ್ಯದಿಂದಾಗಿ ಅವರನ್ನು 'ಬೋರ್‌ವೆಲ್ ರಾಮಯ್ಯ' ಎಂದು ಕರೆಯಲಾಗುತ್ತಿತ್ತು.

ಈ ಸಂದರ್ಭದಲ್ಲಿ ಸಚಿವರೊಂದಿಗೆ ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ