LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರರಕ್ಷಣೆಗೆ ಮೋಹನ್ ದಾನಪ್ಪರ ಕಾರ್ಯ ಶ್ಲಾಘನೀಯ- ಸಚಿವ ಸಂತೋಷ್ ಲಾಡ್

ಬೆಂಗಳೂರು: ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ರವರು ಪತ್ರದ ಮೂಲಕ ಅಭಿನಂದಿಸಿದ್ದಾರೆ.

ಪತ್ರದಲ್ಲಿ ಮೋಹನ್‌ಕುಮಾರ್ ದಾನಪ್ಪ, ವಕೀಲರು, ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು ಇವರು 'ಸಲಾಂ ಸೋಲ್ಜರ್ಸ್' ಶೀರ್ಷಿಕೆಯಡಿಯಲ್ಲಿ ಯುವ ಜನತೆ ಸೇನೆ ಸೇರಲು 'ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ' ಎನ್ನುವ ಬಗ್ಗೆ ಜಾಗೃತಿಗಾಗಿ ಕಾರ್ಗಿಲ್ ನಗರದಿಂದ ಕಾರ್ಗಿಲ್ ಯುದ್ಧ ಸ್ಮಾರಕದವರೆಗೂ ಬಲಗೈನಲ್ಲಿ ರಾಷ್ಟ್ರ ಧ್ವಜ ಹಿಡಿದು ಸತತ 5 ಗಂಟೆಗಳ ಕಾಲ 42 ಕಿ.ಮೀ. ಮ್ಯಾರಥಾನ್ ಓಟವನ್ನು ನಡೆಸಿ ಯಶಸ್ವಿಯಾಗಿ ಪೂರ್ಣಗೊಳಿಸಿರುವ ವಿಷಯ ತಿಳಿದು ಬಹಳ ಸಂತೋಷವಾಯಿತು.

ಈ ಪ್ರತ್ಯನವು ಹಲವಾರು ದಾಖಲೆಗಳಲ್ಲಿ ದಾಖಲಾಗಿರುವುದು ಮತ್ತಷ್ಟು ಸಂತಸದ ವಿಚಾರ. ರಾಷ್ಟ್ರದ ರಕ್ಷಣೆಗೆ ಯುವಕರನ್ನು ಸೇನೆಗೆ ಸೇರಲು ಪ್ರೇರೇಪಿಸುತ್ತಿರುವ ಮೋಹನ್‌ಕುಮಾರ್‌ ದಾನಪ್ಪರವರು ಕೈಗೊಂಡಿರುವ ಕಾರ್ಯವು ಶ್ಲಾಘನೀಯವಾಗಿದ್ದು, ಇದೇ ರೀತಿ ಇನ್ನೂ ಹಲವಾರು ಸಮಾಜ ಮುಖಿ ಚಟುವಟಿಕೆಗಳಲ್ಲಿ ಅವರು ತೊಡಗಿಸಿಕೊಂಡು, ಸಮಾಜಕ್ಕೆ ಅವರ ಸೇವೆ ಹೆಚ್ಚಿನ ಮಟ್ಟದಲ್ಲಿ ದೊರಕಲಿ ಎಂದು ಮನದಾಳದಿಂದ ಮೋಹನ್ ಕುಮಾರ್ ದಾನಪ್ಪನವರಿಗೆ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ರವರು ಅಭಿನಂದನಾ ಪತ್ರದ ಮೂಲಕ ಶುಭ ಹಾರೈಸಿದ್ದಾರೆ!
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ