LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ವಾರಿಯರ್ಸ್ ಪ್ರತಿಭಾನ್ವೇಷಣೆ 213 ಯುವ ಕ್ರಿಕೆಟಿಗರ ಸತ್ವಪರೀಕ್ಷೆ

Pಬೆಂಗಳೂರು: ಜೂನ್ 20ರಿಂದ ಆರಂಭವಾಗಲಿರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಗಾಗಿ ಮಾಜಿ ಚಾಂಪಿಯನ್ `ಮೈಸೂರು ವಾರಿಯರ್ಸ್' ಫ್ರಾಂಚೈಸಿಯು ಬೆಂಗಳೂರಿನ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಶಿಬಿರಕ್ಕೆ ರಾಜ್ಯದ ಯುವ ಆಟಗಾರರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.news_1780418607_2_920.webp

ಕರ್ನಾಟಕದ ವಿವಿಧ ಭಾಗಗಳಿಂದ ಒಟ್ಟು 213 ಉದಯೋನ್ಮುಖ ಕ್ರಿಕೆಟಿಗರು ಈ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಕೌಶಲ್ಯ ಪ್ರದರ್ಶಿಸಿದರು. ಇದರಲ್ಲಿ 68 ಆಲ್ ರೌಂಡರ್ಸ್, 63 ಮಧ್ಯಮ ವೇಗದ ಬೌಲರ್‌ಗಳು, 45 ಬ್ಯಾಟರ್‌ಗಳು, 20 ವಿಕೆಟ್ ಕೀಪರ್‌ಗಳು ಹಾಗೂ 17 ಸ್ಪಿನ್ನರ್‌ಗಳು ಕಾಣಿಸಿಕೊಂಡಿದ್ದರು. 

ಮೈಸೂರು ವಾರಿಯರ್ಸ್ ತಂಡದ ಮುಖ್ಯ ಕೋಚ್ ಆರ್.ಎಕ್ಸ್. ಮುರಳಿಧರ್, ಸಹಾಯಕ ಕೋಚ್ ವಿಜಯ್ ಮದ್ಯಾಳ್ಕರ್ ಮತ್ತು ಮಾಲೀಕರಾದ ಅರ್ಜುನ್ ರಂಗ ಅವರ ನೇತೃತ್ವದಲ್ಲಿ ಆಟಗಾರರ ಫಿಟ್‌ನೆಸ್ ಹಾಗೂ ತಾಂತ್ರಿಕ ಸಾಮರ್ಥ್ಯವನ್ನು ಪ್ರಮುಖವಾಗಿ ಪರೀಕ್ಷಿಸಲಾಗಿದ್ದು, ಅತ್ಯುತ್ತಮ ಪ್ರದರ್ಶನ ನೀಡಿದ 15 ಪ್ರತಿಭಾವಂತ ಆಟಗಾರರನ್ನು ಶಾರ್ಟ್ಲಿಸ್ಟ್ ಮಾಡಲು ತೀರ್ಮಾನಿಸಲಾಗಿದೆ. ಇಲ್ಲಿ ಆಯ್ಕೆಯಾದವರು ಮುಂಬರುವ ಮಹಾರಾಜ ಟ್ರೋಫಿ ಹರಾಜು ಪ್ರಕ್ರಿಯೆಗೆ ಪರಿಗಣಿಸುವಂತೆ ಕೆಎಸ್‌ಸಿಎಗೆ ಶಿಫಾರಸು ಮಾಡಲಾಗುವುದು.news_1780418872_0_868.webp

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭ