LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ನಡುವೆ, ಒಡನಾಡಿಯಾಗಿ ನನ್ನ ನಿರಂತರ ಸೇವೆ-ನೆ.ಲ.ನರೇಂದ್ರಬಾಬು

ಬೆಂಗಳೂರು:ಮಾಜಿ ಶಾಸಕ ನೆ.ಲ.ನರೇಂದ್ರಬಾಬುರವರು ಹುಟ್ಟುಹಬ್ಬದ ಅಚರಣೆಯನ್ನು ಅಭಿಮಾನಿಗಳು, ಸ್ನೇಹಿತರು ಮತ್ತು ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಅಚರಿಸಿದರು.

ಕೇಕ್ ಕತ್ತರಿಸಿ ಸಿಹಿ ವಿತರಿಸಿಲಾಯಿತು ನಂತರ ಇದೇ ಸಂದರ್ಭದಲ್ಲಿ ನೆ.ಲ.ನರೇಂದ್ರಬಾಬುರವರಿಗೆ ಸನ್ಮಾನಿಸಲಾಯಿತು. ಜನರ ಪ್ರೀತಿ ವಿಶ್ವಾಸದಿಂದ ಮಹಾನಗರ ಪಾಲಿಕೆ ಸದಸ್ಯನಾಗಿ ಮತ್ತು ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕನಾಗಿ ಸೇವೆ ಮಾಡುವ ಸೌಭಾಗ್ಯ ನನ್ನದಾಗಿತ್ತು. ಬಿಜೆಪಿ ಪಕ್ಷದಲ್ಲಿ ಹಿಂದುಳಿದ ವರ್ಗದ ರಾಜ್ಯ ಘಟಕದ ಅಧ್ಯಕ್ಷನಾಗಿ ಸೇವೆ ಮಾಡುತ್ತಿದ್ದೇನೆ.

ಜನರ ಸಂಕಷ್ಟ ನಿವಾರಣೆ, ಜನರ ನಡುವೆ ಒಡನಾಡಿಯಾಗಿ ಸ್ನೇಹಿತನಾಗಿ ನನ್ನ ಸೇವೆ ನಿರಂತರ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದೇನೆ,ರಾಜಕೀಯ ನಿಂತ ನೀರಲ್ಲ, ಜನರು ಮತದಾರರ ಆಶೀರ್ವಾದ, ಸಹಕಾರ ಸದಾ ನೀಡಿ ಹಾರೈಸುತ್ತಿದ್ದಾರೆ ಎಂದರು.

ಪ್ರಧಾನಿ ನರೇಂದ್ರಮೋದಿರವರ 10ವರ್ಷದ ಆಡಳಿತದ ಪರಿಣಾಮವಾಗಿ ದೇಶ ಬಲಿಷ್ಠ ರಾಷ್ಟವಾಗಿ ಹೊರಹೊಮ್ಮಿದೆ.ಹಿಂದುಳಿದ ವರ್ಗಗಳು, ಧ್ವನಿ ಇಲ್ಲದ ಸಮಾಜದವರಿಗೆ ಧ್ವನಿಯಾಗಿ  ಕೇಂದ್ರ ಸರ್ಕಾರದ ವಿಶ್ವಕರ್ಮ , ಉಜ್ವಲ, ಮುದ್ರ ಯೋಜನೆಗಳು ಆರ್ಥಿಕವಾಗಿ ಹಿಂದುಳಿದ ವರ್ಗದ ಕುಟುಂಬಗಳು ಆರ್ಥಿಕವಾಗಿ ಸಬಲರಾಗಲು ಕಾರಣವಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ್ಯಂತ ಹಿಂದುಳಿದ ವರ್ಗ ಸಮುದಾಯದ ಸಂಘಟನೆ ಮಾಡಿ ರಾಜ್ಯದಲ್ಲಿ ಅತ್ಯಧಿಕ ಲೋಕಸಭಾ ಸ್ಥಾನ ಗೆಲಿಸುವಲ್ಲಿ ಶ್ರಮಿಸುವುದಾಗಿ ನೆ.ಲ.ನರೇಂದ್ರಬಾಬುರವರು ಹೇಳಿದರು.

ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ರಾಜೇಂದ್ರಕುಮಾರ್, ಶ್ರೀನಿವಾಸ್,ಮಹದೇವ್, ಮತ್ತು ಆನಿತಾ ನೆ.ಲ.ನರೇಂದ್ರಬಾಬು, ನೆ.ಲ.ಮಹೇಶ್, ಬಿ.ಎಂ.ಶ್ರೀನಿವಾಸ್, ಚನ್ನಕೇಶವ, ಜಯಸಿಂಹ,ಸುಧಾಕರ್, ರಾಘವೇಂದ್ರ ನಿಸರ್ಗ ಜಗದೀಶ್, ಸೋಸಲೆ ಸಿದ್ದರಾಜು, ಪರಿಸರ ರಾಮಕೃಷ್ಣ ರವರು ಪಾಲ್ಗೊಂಡಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ