LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ: ಸಿ.ಎಂ

ದೇವನಹಳ್ಳಿ : ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ ಎಂದರು.

ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಟೀಕಿಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ ಎಂದರು.‌
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ