LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾನಪ್ಪಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆರಿಂದ ಬ್ರಾವೊ ದಾಖಲೆ ಪತ್ರ ಪ್ರಧಾನ

ನವದೆಹಲಿ : ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆರವರು ಬ್ರಾವೊ ಇಂಟರ್ ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರವನ್ನು ಪ್ರಧಾನ ಮಾಡಿದರು!

ಮೋಹನ್ ಕುಮಾರ್ ದಾನಪ್ಪರವರು 77 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24 ನೇ ಕಾರ್ಗಿಲ್‌ ವಿಜಯ ದಿವಸ ಅಂಗವಾಗಿ ಆಗಸ್ಟ್ 15, 2023 ರಂದು ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಗರದಲ್ಲಿ "ಸಲಾಂ ಸೋಲ್ಮರ್ಸ್" ಶೀರ್ಷಿಕೆಯಡಿಯಲ್ಲಿ " ಯುವಕರೇ ದೇಶ ಸೇವೆಗೆ ಒಂದಾಗಿ ಎಂದು ಕರೆ ನೀಡಿ ಏಕಾಂಗಿಯಾಗಿ ಮ್ಯಾರಥಾನ್ ನಡೆಸಿದರು.

ಯುವಕರು ದೇಶದ ಸೇನೆ ಸೇರಲು ಮುಂದಾಗಿ" ಎನ್ನುವ ವಾಕ್ಯದಡಿಯಲ್ಲಿ ಯುವಕರು ದೇಶ ಸೇವೆಗೆ ಸೇರುವ ಬಗ್ಗೆ ಜಾಗೃತಿಗಾಗಿ ಕಾರ್ಗಿಲ್ ನಗರದಿಂದ ಕಾರ್ಗಿಲ್‌ ಯುದ್ಧ ಸ್ಮಾರಕದವರೆಗೆ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ನಿರಂತರ 5 ಗಂಟೆಗಳ ಕಾಲ 42 ಕಿಲೋ ಮೀಟರ್ ಉದ್ದದಷ್ಟು ಆಮ್ಲಜನಕ ಕಡಿಮೆಯಿರುವ ಮತ್ತು ಸಮುದ್ರ ಮಟ್ಟಕ್ಕಿಂತ 10.800 ಅಡಿ ಮೇಲಿರುವ ಪ್ರದೇಶದಲ್ಲಿ ಓಡುವ ಮೂಲಕ ಅಸಾಧಾರಣ ಸಾಧನೆ ಮಾಡಿದ್ದರು!
ಇವರ ಸಾಧನೆಯು ಬ್ರಾವೊ ಇಂಟರ್ ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆಯಾಗಿ ಸೇರಲಾಗಿದೆ!
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ