LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೇಮಸಾಸಂಗೆ ಯುಪಿ ಸಾರಿಗೆ ನಿಗಮದ ಅಧಿಕಾರಿಗಳು ಭೇಟಿ

ಬೆಂಗಳೂರು: ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಬೆಂ.ಮ.ಸಾ.ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಉಪಕ್ರಮದ ಬಗ್ಗೆ ತಿಳಿದುಕೊಂಡರು.

ಅಧಿಕಾರಿಗಳು ಭೇಟಿಯ ಸಂದರ್ಭದಲ್ಲಿ ಬೆಂ.ಮ.ಸಾ.ಸಂಸ್ಥೆಯಲ್ಲಿ ಅಳವಡಿಸಿಕೊಂಡಿರುವ ಮಾದರಿ ಉಪಕ್ರಮಗಳು, ಸಂಸ್ಥೆಯ ಇತಿಹಾಸ, ಶಕ್ತಿ ಯೋಜನೆಯ ಅನುಷ್ಠಾನ, ಪ್ರಯಾಣಿಕರ ಪಾಸ್ ವ್ಯವಸ್ಥೆ, ಆರ್ಥಿಕ ಕಾರ್ಯಕ್ಷಮತೆ, ಸಂಚಾರ ಆದಾಯ, ಜಾಹೀರಾತು ಪ್ರೋಟೋಕಾಲ್, ಸಂಸ್ಥೆಯ ಬಸ್ ವೇಳಾಪಟ್ಟಿ, ಕಾರ್ಯಚರಣೆಗಳ ವೆಚ್ಚ, GCC ಮಾದರಿಯಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಹಸಿರು ತಂತ್ರಜ್ಞಾನದ ಕಾರ್ಯಚರಣೆ ಬಗ್ಗೆ  ನಿರ್ದೇಶಕರು (ಮಾ.ತಂ) ಶಿಲ್ಪಾ.ಎಂ, ಭಾಆಸೇ., ರವರು ಪ್ರಾತ್ಯಕ್ಷತೆ ನೀಡಿ ತರಬೇತಿ ಅಧಿಕಾರಿಗಳೊಂದಿಗೆ ಸವಿವರವಾಗಿ ಚರ್ಚಿಸಿದರು. ತದನಂತರ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನ ಶಾಖೆಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆಯ ಅಧಿಕಾರಿಗಳಾದ  ಪ್ರನ್ನಾತ ಐಶ್ವರ್ಯ, ಭಾ.ಆ.ಸೇ, ವ್ಯವಸ್ಥಾಪಕ ನಿರ್ದೇಶಕರು, ರಾಜೀವ್ ಆನಂದ್, ಮುಖ್ಯ ಜನರಲ್ ಮ್ಯಾನೇಜರ್ (ಟೆಕ್), ಕೇಸರಿ ನಂದನ್ ಚೌಧರಿ, ಪ್ರಾದೇಶಿಕ ವ್ಯವಸ್ಥಾಪಕರು, ಗಾಜಿಯಾಬಾದ್, ಅನುರಾಗ್ ಯಾದವ್, ಸೇವಾ ನಿರ್ವಾಹಕರು, ಆಗ್ರಾ ನಿಗಮದ ಬೆಂ.ಮ.ಸಾ.ಸಂಸ್ಥೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಜಿ.ಟಿ.ಪ್ರಭಾಕರ ರೆಡ್ಡಿ, ಮುಖ್ಯ ಸಂಚಾರ ವ್ಯವಸ್ಥಾಪಕರು (ಆಚರಣೆ), ಎ.ಎನ್.ಗಜೇಂದ್ರ ಕುಮಾರ್, ಮುಖ್ಯ ತಾಂತ್ರಿಕ ಅಭಿಯಂತರರು, ಎ.ಪ್ರಿಯಾಂಕ, ಗಣಕ ವ್ಯವಸ್ಥಾಪಕರು, ಪ್ರತಿಮಾ.ಎಸ್.ವಿ, ವಿಭಾಗೀಯ ಸಂಚಾರ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂ.ಮ.ಸಾ.ಸಂಸ್ಥೆಯು ಈವರೆವಿಗೂ ಹಲವು ಭಾ.ಆ.ಸೇ., ಕ.ಆ.ಸೇ. ತಂಡಗಳು ಮತ್ತು ಇತರೇ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ