LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಡಿ.ಸುಧಾಕರ್ ಅವರ ನಿಧನಕ್ಕೆ

ಕ್ಷೇತ್ರದ ಅಭಿಮಾನ ಗಳಿಸಿದ ಸುಧಾಕರ್ ಪ್ರತಿಕ್ಷಣವೂ ಕಾಯಕಯೋಗಿಯಾಗಿದ್ದರು, ಅಭಿವೃದ್ಧಿ ಚಿಂತನೆಯುಳ್ಳ ದೊಡ್ಡ ನಾಯಕರು ಆಗಿದ್ದರು ಸಚಿವ ಸುಧಾಕರ್ ಅವರ ಕಾಲಿಕ ಮರಣ ಪಕ್ಷಕ್ಕೆ ಹಾಗೂ ಕುಟುಂಬಕ್ಕೆ ತುಂಬಲಾರದ ನಷ್ಟ :ಡಿಕೆ ಶಿವಕುಮಾರ್

ಬೆಂಗಳೂರು :  ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
"ಪ್ರತಿ ಕ್ಷಣವೂ ಕ್ಷೇತ್ರದ ಅಭಿವೃದ್ಧಿ ಕುರಿತು ಆಲೋಚನೆ, ಜನಸೇವೆ ಸೇರಿದಂತೆ ಅತ್ಯಂತ ಕ್ರಿಯಾಶೀಲ‌ ಸಹೋದ್ಯೋಗಿಯಾಗಿದ್ದ ಸಚಿವ ಡಿ. ಸುಧಾಕರ್ ಅವರ ನಿಧನ ಅತ್ಯಂತ ನೋವಿನ ಸಂಗತಿ. ಅವರು ತಮ್ಮನ್ನು ಭೇಟಿ ಮಾಡಲು ಬಂದಾಗಲೆಲ್ಲ ಕ್ಷೇತ್ರದ ಒಂದಿಲ್ಲೊಂದು ಅಭಿವೃದ್ಧಿ ಕೆಲಸದ ಮನವಿ ಜತೆಗೆ ಬರುತ್ತಿದ್ದರು. ತಮಗೆ ಆಪ್ತರೂ ಆಗಿದ್ದ ಸುಧಾಕರ್ ಅಗಲಿಕೆ ಬಹಳ ನೋವು ತಂದಿದೆ ಎಂದು ಡಿಸಿಎಂ ಅವರು ಹೇಳಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವ ಮೂಲಕ ಸಹಕಾರಿ ಸಂಸ್ಥೆಯಿಂದ ರಾಜಕೀಯ ಆರಂಭಿಸಿದ ಸುಧಾಕರ್ ಅವರು ಸರ್ವ ಸಮುದಾಯಗಳೂ ಮೆಚ್ಚುವ ನಾಯಕರಾಗಿದ್ದರು. ಸಮುದಾಯದ ಸಂಖ್ಯಾಬಲ ಇಲ್ಲದಿದ್ದರೂ ನಾಲ್ಕು ಬಾರಿ ಶಾಸಕರಾಗಿದ್ದು ಕ್ಷೇತ್ರದ ಜನ ಇವರ ಮೇಲೆ ಇರಿಸಿದ್ದ ಪ್ರೀತಿ, ವಿಶ್ವಾಸ, ನಂಬಿಕೆಗೆ ಸಾಕ್ಷಿ. ಇದೇ ಸುಧಾಕರ್ ಅವರ ಹೆಗ್ಗಳಿಕೆ ಆಗಿತ್ತು.
ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ತಮ್ಮ ಕ್ಷೇತ್ರದ ನೀರಾವರಿ ಯೋಜನೆಗಳ ಕುರಿತು ನನ್ನ ಬಳಿ ಸದಾ‌ ಚರ್ಚೆ ನಡೆಸುತ್ತಿದ್ದರು. ಕೊಡುಗೈ ದಾನಿಯಾಗಿ "ಬಡವರ ಬಂಧು" ಎಂದೇ ಜನರ ನಡುವೆ ಪ್ರಸಿದ್ದಿ ಪಡೆದಿದ್ದರು. ಕಾಲನ ಕರೆಗೆ ಓಗೊಟ್ಟು ನಮ್ಮನ್ನು, ಅಪಾರ ಅಭಿಮಾನಿಗಳನ್ನು ಅಗಲಿ ಹೋಗಿರುವ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬವರ್ಗ ಹಾಗೂ ಲಕ್ಷಾಂತರ ಕಾರ್ಯಕರ್ತರಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭ