LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಎಚ್ಚರಿಸಿದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು.ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು.ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

ಮುಖ್ಯಮಂತ್ರಿಗಳ ಭಾಷಣದ ಇತರೆ ಹೈಲೈಟ್ಸ್...




*ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ ಎಂದರು.

*ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ.

*ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು.

*ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ.*ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು*

*ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ.



*ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ ಎಂದು ಪ್ರಶ್ನಿಸಿದರು.

*ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ*

*ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

*ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು ಎಂದರು.*ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಗೇಕು ಎಂದರು.



*ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗಧಿಯಾಗಿತ್ತು. ಆದರೆ ಈಗ ಶಿಕ್ಷಣ ಸಿಕ್ಕಿದೆ. ನಿಮ್ಮ ನಿಮ್ಮ‌ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದರು.

ಕಾರ್ಯಕ್ರಮದಲ್ಲಿ ಗೃಹ ಮಂತ್ರಿ ಜಿ ಪರಮೇಶ್ವರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ರೇವಣ್ಣ  ಸೇರಿದಂತೆ ಕಾಂಗ್ರೆಸ್ ಮುಖಂಡರು, ಕುರುಬ ಸಮುದಾಯದ ಮುಖಂಡರು, ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ