LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:“ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚುತ್ತಿದ್ದು, ಕಚೇರಿ ತೆರೆಯಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದರು.

“ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ.”

ಲೋಕಸಭಾ ಚುನಾವಣೆ ವಿಚಾರವಾಗಿ ಕೇಳಿದಾಗ “ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿಗಳು ಒಂದು ಸುತ್ತಿನ ಮಾತುಕಥೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ, ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರು ಚರ್ಚಿಸಿ ಹೈಕಮಾಂಡಿಗೆ ಪಟ್ಟಿ ಕಳಿಸುತ್ತೇವೆ.” ಎಂದರು.

ರಾಜ್ಯಸಭೆಗೆ ರಾಜ್ಯದಿಂದ ಹೆಸರು ಸೂಚಿಸಲಾಗುವುದೇ ಎಂದು ಕೇಳಿದಾಗ, “ರಾಜ್ಯಸಭೆಗೆ ನಾವು ಹೆಸರುಗಳನ್ನು ಸೂಚಿಸುತ್ತೇವೆ. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ” ಎಂದರು.

40 ಪರ್ಸೆಂಟ್ ಕಮಿಷನ್ ವಿಚಾರವಾಗಿ ತನಿಖೆ ನಿಧಾನಗತಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದಾಗ “ಹೈಕೋರ್ಟ್ ಅಭಿಪ್ರಾಯವನ್ನು ಗೌರವಿಸುತ್ತೇವೆ. ನಾವು ತನಿಖೆಯನ್ನು ಸಮಿತಿಗೆ ನೀಡಿದ್ದು, ಅವರ ಕರ್ತವ್ಯ ಅವರು ಮಾಡುತ್ತಾರೆ” ಎಂದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ