LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪದ್ಮಶ್ರೀ, ನಾಡೋಜ ಸುಕ್ರಿ ಬೊಮ್ಮಗೌಡ ವಿಧಿವಶ, ಜಾನಪದ ಕೊಂಡಿ ಕಳಚಿದಂತಾಗಿದೆ

ಬೆಂಗಳೂರು: ಪದ್ಮಶ್ರೀ, ನಾಡೋಜ ಸುಕ್ರಿ ಬೊಮ್ಮಗೌಡ ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಐದು ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಕಂಠಪಾಠ ಮಾಡಿಕೊಂಡಿದ್ದ ಸುಕ್ರಜ್ಜಿಯ ಅಗಲಿಕೆಯೊಂದಿಗೆ ಜಾನಪದ ಸಿರಿಸಂಪತ್ತಿನ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷ ಪಿಎ ನಾರಾಯಣಗೌಡ ತಿಳಿಸಿದರು.

ಪತ್ರಿಕಾ ಪ್ರಕಟಣೆ ಎಲ್ಲಿ ತಿಳಿಸಿದವರು2015ರ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶದಲ್ಲಿ ಸುಕ್ರಿ ಬೊಮ್ಮಗೌಡ ಅವರಿಗೆ ಜಾನಪದ ಜಂಗಮ ಡಾ.ಎಸ್.ಕೆ.ಕರೀಂಖಾನ್ ಪ್ರಶಸ್ತಿ ನೀಡಿ ಗೌರವಿಸಿದ್ದೆವು. ಸುಕ್ರಿ ಬೊಮ್ಮಗೌಡರು ಅವರು ಅಂದು ತೋರಿದ ತಾಯ್ತನದ ಪ್ರೀತಿ, ವಾತ್ಸಲ್ಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

ತಾವೇ ಒಂದು ನಡೆದಾಡುವ ಜಾನಪದ ಕೋಶದಂತಿದ್ದ ಸುಕ್ರಿ ಬೊಮ್ಮಗೌಡ ಅವರು ಕಾಡಿನಂಚಿನ ಹಾಲಕ್ಕಿ ಸಮುದಾಯಕ್ಕೆ ಅನನ್ಯವಾದ ಕೀರ್ತಿಯನ್ನು ತಂದುಕೊಟ್ಟಿದ್ದರು. ಮದ್ಯ ನಿಷೇಧ ಚಳವಳಿಯನ್ನು ಮುನ್ನಡೆಸಿ, ತಮ್ಮ ಹಳ್ಳಿಯನ್ನು ವ್ಯಸನಮುಕ್ತಗೊಳಿಸಿದ ಶ್ರೇಯಸ್ಸು ಅವರದು.

ಸುಕ್ರಜ್ಜಿ ಹಾಡಿದ ಹಾಡುಗಳನ್ನು ಉಳಿಸಿಕೊಂಡು ಅದನ್ನು ನಮ್ಮ‌ ಮುಂದಿನ ಪೀಳಿಗೆಗೆ ಉಳಿಸುವುದೇ ನಾವು ಅವರಿಗೆ ಸಲ್ಲಿಸಿರುವ ಸರಿಯಾದ ಶ್ರದ್ಧಾಂಜಲಿ. ಸುಕ್ರಜ್ಜಿ ಅವರಿಗೆ ಕನ್ನಡ ನಾಡು ಸದಾ ಚಿರ ಋಣಿಯಾಗಿರುತ್ತದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ