LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದಿನ ಸವಾಲುಗಳೇ ಇದೀಗ ಸಾಧನೆಯ ಮೆಟ್ಟಿಲುಗಳಾಗಿವೆ – ಬಸವರಾಜ ಬೊಮ್ಮಾಯಿ

ಬೆಂಗಳೂರು; ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆ ಕಂಡಿದ್ದು, ಭಾರತದ ಹಿಂದಿನ ನಿರೀಕ್ಷೆ, ಸವಾಲುಗಳು ಈಗ ಸಾಧನೆಯ ಮೆಟ್ಟಿಲುಗಳಾಗಿವೆ. ಆದರೆ ಇದೀಗ ಯಾವುದೇ ಚಮತ್ಕಾರ ನಡೆಯುತ್ತಿಲ್ಲ. ಎಲ್ಲವೂ ಫಲಿತಾಂಶವಾಗಿ ಪರಿವರ್ತನೆ ಹೊಂದುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ [ಕಾರ್ಪೋರೆಟ್] ಆಡಳಿತ ವಲಯದಲ್ಲಿ ಐಸಿಎಸ್ಐ ಉತ್ಕೃಷ್ಟ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿ, ಕಂಪೆನಿ ಸೆಕ್ರೆಟರಿ ವಿಷಯ ಕುರಿತ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ದೇಶ ಒಂದೆರೆಡು ಉದ್ಯಮಿಗಳಿಂದ ನಡೆಯುತ್ತಿಲ್ಲ. ಉತ್ತಮ ಉದ್ಯಮಶೀಲತೆಯಿಂದ ಪ್ರಗತಿಯಾಗುತ್ತಿದೆ ಎಂದರು.

ಮನುಷ್ಯ ಸಮಯಕ್ಕೆ ಸರಿಯಾಗಿ ಹೊಂದಿಕೊಳ್ಳುತ್ತಾನೆ: ಮಾಜಿ ಸಿಎಂ

ಮನುಷ್ಯ ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವ ಗುಣ ಹೊಂದಿದ್ದು, ವ್ಯಾಪಾರ ವಹಿವಾಟು ಇದಕ್ಕಿಂತ ಭಿನ್ನವಾಗಿಲ್ಲ. ಇದೇ ರೀತಿಯಲ್ಲಿ ಕಂಪೆನಿ ಸೆಕ್ರೇಟರಿಗಳು ನಿಯಂತ್ರಣವಷ್ಟೇ ಅಲ್ಲದೇ ಪರಿಸರಕ್ಕೆ ತಕ್ಕಂತೆ ಹೊಂದಿಕೊಳ್ಳುವ ಮನಸ್ಥಿತಿಯನ್ನು ಬೆಳೆಸಿಕೊಂಡು ಲಾಭ ನಷ್ಟದ ಪ್ರತೀಕವಾಗಿ ಹೊರ ಹೊಮ್ಮಿದ್ದಾರೆ. ಸಂಪೂರ್ಣ ಪರಿಸರ ವ್ಯವಸ್ಥೆ ಇದೀಗ ಸಾಧ್ಯತೆಗಳಾಗಿದ್ದು, ಬರುವ 2047 ರ ವೇಳೆಗೆ ದೇಶ ಎಲ್ಲಾ ವಲಯಗಳಲ್ಲಿ ಮುಂಚೂಣಿಗೆ ಬರಲಿದೆ. ಭಾರತದ ಭವಿಷ್ಯ ಉಜ್ವಲವಾಗಿದೆ. ಜೀವನದಲ್ಲಿ ಮುಂದೆ ಬರಬೇಕು ಎನ್ನುವವರಿಗೆ ಇದು ಉತ್ತಮ ಅವಕಾಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಇದ್ದು, ಬದಲಾವಣೆ ತರುತ್ತಾರೆ ಎನ್ನುವ ನಂಬಿಕೆ ದೇಶದ ಜನರಲ್ಲಿದೆ. 25 ಕೋಟಿ ಜನ ಬಡತನ ರೇಖೆಯಿಂದ ಹೊರ ಬಂದಿರುವುದೇ ಇದಕ್ಕೆ ನಿದರ್ಶನ ಎಂದರು.

ಜಾಗತಿಕ ಮಾನವೀಯ ಅಭಿಯಾನದ ಸಂಸ್ಥಾಪಕರಾದ ಮಧುಸೂಧನ್ ಸಾಯಿ ಮಾತನಾಡಿ, 1 ರಿಂದ 10 ನೇ ತರಗತಿಯ 56 ಲಕ್ಷ ವಿದ್ಯಾರ್ಥಿಗಳಿಗೆ ಪೌಷ್ಟಿಕಯುಕ್ತ ರಾಗಿ, ತೃಣಧಾನ್ಯಗಳನ್ನೊಳಗೊಂಡ ಆಹಾರ ಒದಗಿಸಲಾಗುತ್ತಿದೆ. ತುಮಕೂರು ಜಿಲ್ಲೆಯ ರೈತರು ಸಿರಿಧಾನ್ಯಗಳನ್ನು ಒದಗಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಾಗಿದೆ. ಆರೋಗ್ಯ ಸುಧಾರಿಸಿದೆ. ಸಿಎಸ್ಆರ್ ಚಟುವಟಿಕೆಗಳಿಗೆ ಕಾರ್ಪೋರೇಟ್ ವಲಯ ಮತ್ತಷ್ಟು ಬೆಂಬಲ ನೀಡಬೇಕು ಎಂದರು.

ಕಾರ್ಪೊರೇಟ್ ವಲಯದಲ್ಲಿ ಮಹತ್ವದ ಬದಲಾವಣೆ ಆಗಬೇಕು:

ಐಸಿಎಸ್ಐ ಉಪಾಧ್ಯಕ್ಷ ಸಿ.ಎಸ್. ಧನಂಜಯ್ ಶುಕ್ಲಾ ಮಾತನಾಡಿ, ದೇಶಾದ್ಯಂತ ಕಂಪೆನಿ ಸೆಕ್ರೇಟರಿ ವಲಯದಲ್ಲಿ 75 ಸಾವಿರ ಸದಸ್ಯರಿದ್ದು, ಕಾರ್ಪೋರೆಟ್ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ನಿರ್ಣಾಯಕವಾಗಿ ಕಾರ್ಯನಿರ್ವಹಿಸುತ್ತಿದೆ. ಬೆಂಗಳೂರಿನಲ್ಲಿ ಶೀಘ್ರದಲ್ಲೇ ಕಂಪೆನಿಗಳ ನಡುವಿನ ವ್ಯಾಜ್ಯ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಕೇಂದ್ರ ಪ್ರಾರಂಭವಾಗಲಿದೆ ಎಂದರು.

ಐಸಿಎಸ್ಐ ಕಾರ್ಯದರ್ಶಿ ಆಶಿಶ್ ಮೋಹನ್ ಮಾತನಾಡಿ, ಸಾಂಸ್ಥಿಕ ಆಡಳಿತ ವ್ಯವಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಕಂಪೆನಿಗಳು ಮತ್ತು ವ್ಯಕ್ತಿಗಳನ್ನು ಗುರುತಿಸಲು ನಿವೃತ್ತ ನ್ಯಾಯಮೂರ್ತಿ ಸದಾಶಿವ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಆಡಳಿತ ವ್ಯವಸ್ಥೆಯಲ್ಲಿ ಹೊಸ ಪರಂಪರೆ, ಉನ್ನತ ಸಾಧನೆ ಮಾಡಿರುವವನ್ನು ಗುರುತಿಸಲಾಗಿದೆ. ಇಡೀ ವರ್ಷ ಈ ಪ್ರಕ್ರಿಯೆ ನಡೆಸಿದ್ದು, ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಇದು ಬುನಾದಿಯಾಗಲಿದೆ ಎಂದರು.

ಐಸಿಎಸ್ಐ ಅಧ್ಯಕ್ಷ ಬಿ. ನರಸಿಂಹನ್, ಐಸಿಎಸ್ಐ ಮಾಜಿ ಅಧ್ಯಕ್ಷ ಸಿ.ಎಸ್. ಮನೀಶ್ ಗುಪ್ತಾ, ಐಸಿಎಸ್ಐ ಕೇಂದ್ರೀಯ ಮಂಡಳಿ ಸದಸ್ಯ ಸಿ.ಎಸ್. ದ್ವಾರಕಾನಾಥ್ ಚೆನ್ನೂರ್ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ವರ್ಷ ಐಸಿಎಸ್ಐ ಸಂಸ್ಥೆ ಬೆಲ್ಲಿ ಮಹೋತ್ಸವ ಆಚರಣೆ ಮಾಡಲಿದ್ದು, ಅದನ್ನು ಕೌನ್ಸಿಲ್ ನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ, ಕಾರ್ಯಕ್ರಮವನ್ನು ಎಲ್ಲಿ ಮಾಡಬೇಕು ಎಂಬುದರ ಬಗ್ಗೆ ನಡೆಯಲಿದೆ. ಇದೆ ಮೊದಲ ಭಾರಿಗೆ ಕಾರ್ಪೊರೇಟ್ ವಲಯದಲ್ಲಿ ಗುರುತಿಸಿಕೊಂಡಿರುವ MNC ಕಂಪನಿಗಳು, ಸಣ್ಣ ಕಂಪನಿಗಳು, ಅತಿ ಸಣ್ಣ ಕಂಪನಿಗಳಿಗೆ ಮೊದಲ ಭಾರಿಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಮಾಡಿ ಕಾರ್ಪೊರೇಟ್ ವಲಯದಲ್ಲಿನ ಉದ್ದಿಮೆದಾರರಿಗೆ ಪ್ರಶಸ್ತಿ ನೀಡುವ ಮೂಲಕ ಅವರ ಜನವಾದರಿಯನ್ನು ಹೆಚ್ಸಿದಂತಿದೆ.

ನಾವು ಅತಿ ಹೆಚ್ಚು ಆಶೀರ್ವದಿಸಿದ ಜೀವಿಗಳು. ಅತಿ ಹೆಚ್ಚು ದೀರ್ಘಕಾಲ ಉಳಿಯುವ ಜೀವಿಗಳು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ