LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಾಗತಿಕ ತಯಾರಿಕಾ ಕೇಂದ್ರವನ್ನಾಗಿ ಕರ್ನಾಟಕ ಅಭಿವೃದ್ಧಿಗೆ ಪಾಟೀಲ ದಿಕ್ಸೂಚಿ

ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ( ಮೇ 30 ಹಾಗೂ 31ಕ್ಕೆ) ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ʼಉತ್ಪಾದನಾ ಮಂಥನ್‌ʼ ಕುರಿತ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಇಂದು ಇಲ್ಲಿ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ʼಕರ್ನಾಟಕವನ್ನು ʼಜಾಗತಿಕ ತಯಾರಿಕಾ ಕೇಂದ್ರʼವನ್ನಾಗಿ ಅಭಿವೃದ್ಧಿಪಡಿಸುವ ಮುನ್ನೋಟ ಕುರಿತ ಈ ಎರಡು ದಿನಗಳ ಚಿಂತನ – ಮಂಥನ ಸಮಾವೇಶದಲ್ಲಿ ಆಯ್ದ ಪ್ರಮುಖ ತಯಾರಿಕಾ ವಲಯಗಳು ಮತ್ತು ನವೋದ್ಯಮಗಳ ಸಿಇಒ ಹಾಗೂ ಇತರ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಉದ್ಯಮ ದಿಗ್ಗಜರ ಜೊತೆಗಿನ ವಿಚಾರ ಮಂಥನಕ್ಕೆ ಸಮಾವೇಶವು ವೇದಿಕೆ ಒದಗಿಸಲಿದೆ. ರಾಜ್ಯದ ಹೂಡಿಕೆ ಆಕರ್ಷಣೆ ಹಾಗೂ ಆರು ಪ್ರಮುಖ ತಯಾರಿಕಾ ವಲಯಗಳಲ್ಲಿ ರಾಜ್ಯವು ಕ್ರಮಿಸಬೇಕಾದ ಅಭಿವೃದ್ಧಿ ಪಥದ ದಿಕ್ಸೂಚಿ ಆಗಿರಲಿದೆʼ ಎಂದು ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

ಮೇ 30, 31ಕ್ಕೆ ಉತ್ಪಾದನಾ ಮಂಥನ್‌: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ


ವಾಹನ ತಯಾರಿಕೆ, ವೈಮಾಂತರಿಕ್ಷ ಹಾಗೂ ರಕ್ಷಣೆ, ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ ಡಿಸೈನ್‌ ಆ್ಯಂಡ್‌ ಮ್ಯಾನುಫ್ಯಾಕ್ಚರಿಂಗ್‌, ಭಾರಿ ಯಂತ್ರೋಪಕರಣ, ಜೈವಿಕ ತಂತ್ರಜ್ಞಾನ, ಕೃಷಿ ಹಾಗೂ ಆಹಾರ ಸಂಸ್ಕರಣೆ ಕ್ಷೇತ್ರಗಳಲ್ಲಿನ ರಾಜ್ಯದ ಸಾಧನೆಯನ್ನು ಇನ್ನಷ್ಟು ಹೊಸ ಎತ್ತರಕ್ಕೆ ಕೊಂಡೊಯ್ಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಉದ್ಯಮ ದಿಗ್ಗಜರು ಈ ಸಮಾವೇಶದಲ್ಲಿ ರಾಜ್ಯ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ.

ರಾಜ್ಯದ ಬಂಡವಾಳ ಹೂಡಿಕೆಯ ಆಕರ್ಷಣೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ವಲಯವಾರು ನೀಲನಕ್ಷೆ ರೂಪಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ. ಪ್ರಮುಖ 6 ತಯಾರಿಕಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸುವುದು ಮತ್ತು ತಯಾರಿಕಾ ಚಟುವಟಿಕೆ ಹೆಚ್ಚಳಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉದ್ಯಮ ದಿಗ್ಗಜರು ಸರ್ಕಾರಕ್ಕೆ ನೀಲನಕ್ಷೆ ಸಿದ್ಧಪಡಿಸಿ ಕೊಡಲಿದ್ದಾರೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ