LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೋಟೆಲ್ ನಲ್ಲಿ ಸುಚಿತ್ವ ಲೋಪ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ದಂಡ

ಬೆಂಗಳೂರು: ಶುಚಿತ್ವ ಲೋಪ ಮತ್ತು ನಿಷೇಧಿತ ಪ್ಲಾಸ್ಟಿಕ್ ಬಳಕೆ  ಮಾಡುತ್ತಿರುವ ಹೋಟೆಲ್ಗಳಲ್ಲಿ ತಪಾಸಣೆ ನಡೆಸಿ  ‘ಅಲ್-ಫಾಜ್’ ಹೋಟೆಲ್‌ಗೆ 75,000 ರೂ. ದಂಡ ಹಾಕುವ ಮೂಲಕ ಇತರ ಹೋಟೆಲ್ಗಳಿಗೆ ಎಚ್ಚರಿಕೆಯನ್ನು ನೀಡಿದೆ.

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಹೊಸ ಗುರಪ್ಪನ ಪಾಳ್ಯದಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಇಂದು ನಡೆಸಿದ್ದು, ಅಧಿಕಾರಿಗಳಿಂದ ನಿಯಮ ಉಲ್ಲಂಘಿಸುವ ವಾಣಿಜ್ಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಇಂದು ಹೊಸ ಗುರುಪ್ಪನಪಾಳ್ಯದಲ್ಲಿರುವ *'ಅಲ್-ಫಾಜ್' (All-Faaz) ಹೋಟೆಲ್* ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಹೋಟೆಲ್ ಆವರಣದಲ್ಲಿ ಕಂಡುಬಂದ ತೀವ್ರ ಅಶುಚಿತ್ವ ಮತ್ತು ನಿಯಮಗಳ ಉಲ್ಲಂಘನೆಗಾಗಿ ಒಟ್ಟು 75,000 ರೂ. ದಂಡ ವಿಧಿಸಿದ್ದಾರೆ.

*ಉಲ್ಲಂಘನೆಗಳ ವಿವರ*
ಅಶುಚಿತ್ವ: ಹೋಟೆಲ್ ಆವರಣದಲ್ಲಿ ಸರಿಯಾದ ನೈರ್ಮಲ್ಯ ಕಾಪಾಡದಿರುವುದು.

*ತ್ಯಾಜ್ಯ ವಿಂಗಡಣೆ ಲೋಪ:* ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸದೆ ನಿಯಮ ಉಲ್ಲಂಘಿಸಿರುವುದು.

ನಿಷೇಧಿತ ಪ್ಲಾಸ್ಟಿಕ್ ಬಳಕೆ: ಸರ್ಕಾರದಿಂದ ನಿಷೇಧಿಸಲ್ಪಟ್ಟ ಏಕಬಳಕೆಯ ಪ್ಲಾಸ್ಟಿಕ್ (Single-use plastic) ವಸ್ತುಗಳನ್ನು ಬಳಸಿರುವುದು.

ನಗರದ ಎಲ್ಲಾ ಹೋಟೆಲ್ ಮತ್ತು ವಾಣಿಜ್ಯ ಸಂಸ್ಥೆಗಳು ಕಡ್ಡಾಯವಾಗಿ ತ್ಯಾಜ್ಯ ವಿಂಗಡಣೆ ಮಾಡಬೇಕು ಮತ್ತು ಪರಿಸರ ಸ್ನೇಹಿ ಕ್ರಮಗಳನ್ನು ಅನುಸರಿಸಬೇಕು. ನಿಯಮಗಳನ್ನು ಗಾಳಿಗೆ ತೂರುವವರ ವಿರುದ್ಧ ಮುಂಬರುವ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ