LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದಿಂದ ಕರ್ನಾಟಕಕ್ಕೆ ನಿರಂತರ ಅನ್ಯಾಯ – ಎಂ.ಎಸ್.‌ ರಕ್ಷಾ ರಾಮಯ್ಯ ಕಿಡಿ

ನವದೆಹಲಿ (ಜಂತರ್ ಮಂತರ್); ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ರಾಜ್ಯ ಸರ್ಕಾರ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಆರ್.‌ ಸೀತಾರಾಂ, ಯುವ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಭಾಗವಹಿಸಿದ್ದರು.

ಪ್ರತಿಭಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಎಸ್.‌ ರಕ್ಷಾ ರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ವ್ಯಾಪಕ ಅನ್ಯಾಯವಾಗುತ್ತಿದೆ. ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕವಾಗಿದ್ದು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೆರಿಗೆ ಪಾಲು ಗಣನೀಯವಾಗಿ ಕಡಿತವಾಗಿದೆ. ಕೇಂದ್ರದಿಂದ ನಮಗೇ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ಇಂತಹ ತಾರತಮ್ಯ ನೀತಿ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಾ ಗಾಂಧೀಜಿ ನೇತೃತ್ವದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಮಾದರಿಯಲ್ಲಿ ನಮ್ಮ ಹೋರಾಟ ತೀವ್ರಗೊಳಿಸುತ್ತೇವೆ. ನಮಗೆ ನ್ಯಾಯ ಸಿಗುವವರೆಗೆ ನಾವು ವಿರಮಿಸುವುದಿಲ್ಲ. ಕರ್ನಾಟಕದಿಂದ ಸಿಗುವ ಶೇ 100 ರಷ್ಟು ತೆರಿಗೆಯಲ್ಲಿ ನಮಗೆ ಕೇವಲ ಶೇ 12 ರಿಂದ 13 ರಷ್ಟು ಮಾತ್ರ ಪಾಲು ದೊರೆಯುತ್ತಿದೆ. ಇಂತಹ ಅನ್ಯಾಯ ಹಿಂದೆಂದೂ ಆಗಿರಲ್ಲ. ಮುಖ್ಯಮಂತ್ರಿಯೊಬ್ಬರು ದೆಹಲಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದರೂ ಸಹ ಅವರ ಅಹವಾಲು ಆಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿಲ್ಲ ಎಂದು ಎಂ.ಎಸ್.‌ ರಕ್ಷಾ ರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!