ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಕಳೆದ 15ದಿನದಲ್ಲಿ ಸತತ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಮಾಧ್ಯಮ ವಿಭಾಗದಿಂದ ವಿನೂತನವಾಗಿ ಎತ್ತಿನ ಗಾಡಿಯಲ್ಲಿ ದ್ವಿಚಕ್ರ ವಾಹನ ಇಟ್ಟು ಏಳೆಯುವ ಮೂಲಕ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿನೂತನವಾದಂತ ಪ್ರತಿಭಟನೆ ಮಾಡಲಾಯಿತು, ಇದೇ ಸಂದರ್ಭದಲ್ಲಿ *ದೀಪಕ್ ಗೌಡರವರು* ಮಾತನಾಡಿ ಕಳೆದ 15ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನಾಲ್ಕು ಬಾರಿ ಏರಿಕೆ ಮಾಡಿದ್ದಾರೆ ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೆಚ್ಚಳವಾಗಿದೆ. ಹೀಗಾಗಿ ಸಾರ್ವಜನಿಕರ ಮೇಲೆ ಸಾಕಷ್ಟು ಒರೆಯಾಗುತ್ತಿದ್ದು ಮಧ್ಯಮ ವರ್ಗದವರು ಜೀವನ ನಡೆಸಲು ಕಷ್ಟ ಸಾಧ್ಯವಾಗುತ್ತದೆ.
ಬಡವರು, ಮಧ್ಯಮವರ್ಗದವರು ಜೀವನ ಸಾಗಿಸುವುದು ಸಂಕಷ್ಟವಾಗಿದೆ. ರಾಜ್ಯದಲ್ಲಿ ಬಿಜೆಪಿ ಲೋಕಸಭಾ ಸದಸ್ಯರುಗಳು ಮೌನವಾಗಿದ್ದಾರೆ.
ಕೊಡಲೇ ಬಿಜೆಪಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಬೇಕು. ಇಲ್ಲದೇ ಹೋದರೆ ಉಗ್ರ ಹೋರಾಟ ಮಾಡಲಾಗುವುದು.
ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷರಾದ ದೀಪಕ್ ಗೌಡ, ಯುವ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷರಾದ ಶ್ರೀಧರ್ ರಾವ್, ಉತ್ತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಾಹುಲ್ ಗೌಡ, ಗಾಂಧಿನಗರ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹರೀಶ್ ರವರು ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.