LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ನೀಚ ಕೃತ್ಯವನ್ನು ಖಂಡಿಸಿ NSUI ಪಂಜಿನ ಮೆರವಣಿಗೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮಹಿಳೆಯರ ಮೇಲಿನ ಲೈಂಗಿಕ ಮಾಡಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಮುಂದೆ ಪಂಜಿನ ಮೆರವಣಿಗೆ ನಡೆಸಲಾಯಿತು.

ಪ್ರಜ್ವಲ್ ಅವರ ನೀಚ ಕೃತ್ಯವನ್ನು ಖಂಡಿಸಿ ಬೀದಿಗಿಳಿದು ಹೋರಾಟ ಮಾಡಲಾಯಿತು. ಪ್ರಜ್ವಲ್ ಅವರನ್ನು SIT ಅಧಿಕಾರಿಗಳು ಕೂಡಲೇ ಬಂಧಿಸ ಬೇಕೆಂದು ಆಗ್ರಹಿಸಿದರು. ರಾಜ್ಯದಲ್ಲಿನ ಮಹಿಳೆಯರ ಮಾನ ಹಾನಿಯಾಗಿದೆ, ಹೆಣ್ಣು ಮಕ್ಕಳಿಗೆ ಗೌರವ ಕೊಡದೆ ಲೈಂಗಿಕ ಕೃತ್ಯಕ್ಕೆ ಬಳಸಿಕೊಂಡಿದ್ದಾನೆ ಎಂದು ಆರೋಪಿಸಿದರು.

ಇಂತಹ ಕೃತ್ಯಗಳು ರಾಜ್ಯದಲ್ಲಿ ನಡೆದಿಲ್ಲ, ಪ್ರಜ್ವಲ್ ಮೇಲೆ ಎಷ್ಟೆಲ್ಲ ಆರೋಪಗಳು ಚುನಾವಣೆಗಿಂತಲು ಹಿಂದೆ ನಡೆದಿರುವ ಘಟನೆ, ಇಷ್ಟೆಲ್ಲಾ ಇದ್ದರೂ ಸಹಾ ಪ್ರಜ್ವಲ್ ಅವರಿಗೆ ಸಮ್ಮಿಶ್ರ ಪಕ್ಷದಲ್ಲಿ ಏಕೆ ಟಿಕೆಟ್ ನೀಡಿದರು ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇದೆಲ್ಲವೂ ಬಿಜೆಪಿಯವರಿಗೆ ಗೊತ್ತಿದ್ದರೂ ಗೊತ್ತಿಲದೇ ರೀತಿ ವರ್ತನೆ ಮಾಡಿ ಟಿಕೆಟ್ ನೀಡಿ ಪೀಚಿಗೆ ಸಿಲುಕಿಕೊಂಡಿದ್ದಾರೆ ಎಂದು ಬಿಜೆಪಿ ಪಾಲೆಯ ವಿರುದ್ಧ ಗರಂ ಆದರು.

ಪ್ರಜ್ವಲ್ ರೇವಣ್ಣ ಅವರ ನೀಚ ಕೃತ್ಯ ಖಂಡಿಸಿ ಸಂಜೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಹಾಗೂ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥಗೌಡ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ವತಿಯಿಂದ  ಕಾಂಗ್ರೆಸ್ ಭಾವನದಲ್ಲಿ ಪಂಜಿನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಪದಾಧಿಕಾರಿಗಳು,ಯುವ ನಾಯಕರು, ಯುವ ಮುಖಂಡರು ಭಾಗವಹಿಸಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!