LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾನುವಾರ ಬ್ರಾಹ್ಮಣ ಮಂಡಳಿಯಿಂದ 132 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 

ಬೆಂಗಳೂರು:  ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ 132 ವಿದ್ಯಾರ್ಥಿಗಳಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ “ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ-2026” ನೀಡಿ ಗೌರವಿಸಲಾಗುವುದು ಎಂದು ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ಹೇಳಿದ್ದಾರೆ. 

ಬೆಂಗಳೂರಿನಲ್ಲಿಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 132 ವಿದ್ಯಾರ್ಥಿಗಳಿಗೆ 13 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಪ್ರಥಮ ಸ್ಥಾನ ಪಡೆದ 41 ವಿದ್ಯಾರ್ಥಿಗಳಿಗೆ ತಲಾ 15ಸಾವಿರ ರೂಪಾಯಿ, ದ್ವಿತೀಯ ಸ್ಥಾನ ಪಡೆದ 45 ವಿದ್ಯಾರ್ಥಿಗಳಿಗೆ ತಲಾ 10ಸಾವಿರ ಹಾಗೂ ತೃತೀಯ ಸ್ಥಾನ ಪಡೆದ 46 ವಿದ್ಯಾರ್ಥಿಗಳಿಗೆ ತಲಾ 5ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ಹೇಳಿದರು.

ಕಳೆದ 3 ವರ್ಷಗಳ ಅವಧಿಯಲ್ಲಿ ಮಂಡಳಿಯ ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರ 46 ಕೋಟಿ ರೂಗಳ ಅನುದಾನ ನೀಡಿದೆ. ಈ ವರ್ಷ ಹೆಚ್ಚುವರಿಯಾಗಿ 28 ಕೋಟಿಗಳ ಅನುದಾನದ ಬೇಡಿಕೆ ಸಲ್ಲಿಸಿದ್ದು, ಸರ್ಕಾರದಿಂದ ಹೆಚ್ಚಿನ ಆರ್ಥಿಕ ನೆರವು ದೊರೆಯುವ ವಿಶ್ವಾಸವಿದೆ ಎಂದರು.   

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೇ ಭಾನುವಾರ ಬೆಳಿಗ್ಗೆ 10:30ಕ್ಕೆ ಬಬ್ಬೂರು ಕಮ್ಮೆ ಸೇವಾ ಸಭಾಂಗಣದಲ್ಲಿ ನಡೆಯಲಿದೆ.  ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಶಾಸಕರಾದ ಆರ್. ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್, ವಿಶ್ವಾಸ್ ವಸಂತ ವೈದ್ಯ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನಿಕಟಪೂರ್ವ ಅಧ್ಯಕ್ಷ ಅಶೋಕ ಹಾರನಹಳ್ಳಿ, ಸಸ್ರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ರವಿ.ಎಂ.ತಿರ್ಲಾಪುರ ಮೊದಲಾದವರು ಭಾಗಿಯಾಗಲಿದ್ದಾರೆ.  

ಸುದ್ಧಿಗೋಷ್ಠಿಯಲ್ಲಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಕೆ, ನಿರ್ದೇಶಕರಾದ ಗುರುರಾಜ ವಾದಿರಾಜ ಬಳಗನೂರು, ಬಿ.ಎನ್ ಮಹೇಶ್ ಕುಮಾರ್ ಹಾಜರಿದ್ದರು.  

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾಷಣ ಮಾಡೋಲ್ಲ, ಜನರ ಅಹವಾಲು ಆಲಿಸೋಣ ಎಂದ ಸಚಿವ ಮಧು ಬಂಗಾರಪ್ಪಸೊರಬ ಕ್ಷೇತ್ರದಲ್ಲಿ 2 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಚಾಲನೆರಸ್ತೆ ಕಾಮಗಾರಿಗಳ ಸುರಕ್ಷತಾ ಕ್ರಮಗಳೊಂದಿಗೆ, ಸಂಚಾರಕ್ಕೆ ತೊಂದರೆಯಾಗದಂತೆ ಕೈಗೊಳ್ಳಿ – ಜಗದೀಶ್.ಜಿವಿಧಾನಸೌಧ ಮುಂಭಾಗ ಜೆಟ್ ಸ್ಪ್ರೇ ವಾಹನದ ಪ್ರಾತ್ಯಕ್ಷಿಕೆ ಪರಿಶೀಲನೆ ಕಿದ್ವಾಯಿ ಆಸ್ಪತ್ರೆ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆಯೊಂದಿಗೆ ಹಂಸಜ್ಯೋತಿ ಟ್ರಸ್ಟ್‌ನಿಂದ 71ನೇ ಕನ್ನಡ ನಾಡ ಹಬ್ಬದ ಆಚರಣೆಬಸವ ಮಂಟಪ ಕೃತಿ ವಿವಾದ: ಲೇಖಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ವಿಭೂತಿ ಮಠದ ಶ್ರೀಗಳಿಂದ ಸ್ಪಷ್ಟನೆಕೋಣನಕುಂಟೆ ಕ್ರಾಸ್‌ನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಮೇಲ್ಸೇತುವೆ ನಿರ್ಮಾಣ : ಕೃಷ್ಣ ಬೈರೇಗೌಡKSCA ಅಧ್ಯಕ್ಷರಿಂದ ಅಧಿಕಾರ ದುರ್ಬಳಕೆ ಆರೋಪ ಮಾಜಿ ಅಧ್ಯಕ್ಷ ಜಗನ್ನಾಥ್ ದಾಖಲೆ ಬಿಡುಗಡೆMES ನಲ್ಲಿ 71ನೇ ಕನ್ನಡ ರಾಜ್ಯೋತ್ಸವ, ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆಭಾನುವಾರ ಬ್ರಾಹ್ಮಣ ಮಂಡಳಿಯಿಂದ 132 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ