LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ಕೆರೆಗಳಲ್ಲಿ ಸ್ವಚ್ಛತಾ ಅಭಿಯಾನದ ಕಾರ್ಯ ಚುರುಕು: ಪ್ರೀತಿ ಗೆಹ್ಲೋಟ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 8 ಕೆರೆಗಳಲ್ಲಿ ಇಂದು ಸ್ವಚ್ಛತಾ ಕಾರ್ಯ ಕೈಗೊಂಡಿದ್ದು, ಹಂತ-ಹಂತವಾಗಿ ಎಲ್ಲಾ ಕೆರೆಗಳಲ್ಲೂ ಸ್ವಚ್ಛತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ವಿಶೇಷ ಆಯುಕ್ತರಾದ(ಅ.ಪ.ಹ.ವೈ) ಪ್ರೀತಿ ಗೆಹ್ಲೋಟ್ ರವರು ಅಧಿಕಾರಿಗಳಿಗೆ ಸೂಚಿಸಿರುತ್ತಾರೆ.

ಬಿಬಿಎಂಪಿಯ ವ್ಯಾಪ್ತಿಯ ಎಲ್ಲಾ ವಲಯಗಳ ವ್ಯಾಪ್ತಿಯಲ್ಲಿ ಬರುವ ಕೆರೆಗಳಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡು ಸ್ವಚ್ಛತಾ ಕಾರ್ಯವನ್ನು ನಡೆಸಲಾಗುತ್ತಿದ್ದು, ಅಮೃತಹಳ್ಳಿ, ಕೌದೇನಹಳ್ಳಿ ಹಾಗೂ ಕೆಳಗಿನ ಭೈರಸಂದ್ರ ಕೆರೆಗಳಿಗೆ ಖುದ್ದು ಭೇಟಿ ನೀಡಿ, ಸ್ವಚ್ಛತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಅಧಿಕಾರಿಗಳಿಗೆ ಸೂಚೆನೆ ನೀಡಿದ್ದಾರೆ.

ಎಲ್ಲಾ ಕರೆಗಳಲ್ಲಿ ಬರುವ ಕರೆಯ ಅಂಗಳದ ಪಾದಚಾರಿ ಮಾರ್ಗದಲ್ಲಿ ಸ್ವಚ್ಛತೆ, ಕೆರೆ ಏರಿಯಾದಲ್ಲಿ ಕಳೆ ತೆಗೆಯುವುದು, ಕೆರೆ ನೀರಿನಲ್ಲಿ ಜೊಂಡು ತೆಗೆಯುವುದು, ಒಳಹರಿವು ಸ್ವಚ್ಛತೆಗೊಳಿಸುವ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ.

ಸ್ವಚ್ಛತಾ ಅಭಿಯಾನವು ಈ ವಾರ ಪೂರ್ತಿ ನಡೆಯಲಿದ್ದು, ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಸರಿಯಾಗಿ ಸ್ವಚ್ಛತೆ ಮಾಡಲು ಸೂಚಿಸಿದರು.

ಬಿಬಿಎಂಪಿ ವ್ಯಾಪ್ತಿಯ  8 ಕರೆಗಳಲ್ಲಿ ಸ್ವಚ್ಛತೆ:

ಪಾಲಿಕೆ ವ್ಯಾಪ್ತಿಯಲ್ಲಿ ಬರುವ 8 ವಲಯಗಳಲ್ಲೂ ಒಂದೊಂದು ಕೆರೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಅದರಂತೆ ಇಂದು ಕೆಳಗಿನ ಬೈರಸಂದ್ರ, ನಾಯಂಡನಹಳ್ಳಿ, ಗೌಡನಪಾಳ್ಯ, ಕೌದೇನಹಳ್ಳಿ, ದೊರೆಕೆರೆ, ಅಗರ, ಅಮೃತಹಳ್ಳಿ, ಚೊಕ್ಕಸಂದ್ರ ಹಾಗೂ ಉಲ್ಲಾಳ ಕರೆ ಸೇರಿದಂತೆ 8 ಕೆರೆಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಗಿದೆ. ಅದಕ್ಕಾಗಿ 175 ಸಿಬ್ಬಂದಿ, 13 ಟ್ರ್ಯಾಕ್ಟರ್ ಹಾಗೂ 4 ಜೆ,ಸಿ.ಬಿಗಳನ್ನು ಬಳಸಿಕೊಳ್ಳಲಾಗಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ