LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾನಗೇಡಿ ಸಚಿವರ ವರ್ತನೆಗೆ ರೈತ ಸಂಘದಿಂದ ಧರಣಿ

ಬೆಳಗಾವಿ: ಸಕ್ಕರೆ ಸಚಿವ ಶಿವಾನಂದ ಪಾಟೀಲ್ ರೈತರ ವಿಚಾರವಾಗಿ ನಾಲಿಗೆ ಹರಿಬಿಟ್ಟ ಸಂಬಂಧ  ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಳಗಾವಿಯಲ್ಲಿ ಉಗ್ರ ಪ್ರತಿಭಟನೆ ನಡೆಸಿದರು.

ಬೆಳಗಾವಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್  ಅವರ ನಿವಾಸದಲ್ಲಿನ ಕಛೇರಿ ಮುಂದೆ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಚಿವರು ಎಲುಬಿಲ್ಲದ ನಾಲಿಗೆ ಹರಿಬಿಟ್ಟು ದೇಶದ ಬೆನ್ನೆಲುಬಾದ ರೈತರನ್ನು ಅಪಹಾಸ್ಯ ಮಾಡಿದ್ದು ಅಲ್ಲದೆ ಅವಮಾನ ಮಾಡಿ, ಅವರನ್ನು ಪದೇ‌ ಪದೆ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ರೈತರ ತಾಳ್ಮೆಯ ಕಟ್ಟೆ ಒಡೆದು ಬೀದಿಗಿಳಿದು ಮಾನಗೇಡಿ ಸಕ್ಕರೆ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ರೈತರ ಮೇಲೆ ಕೊಂಚವಾದರೂ ಕಾಳಜಿ, ಗೌರವವಿದ್ದರೆ ಕೂಡಲೇ ಕಾಂಗ್ರೆಸ್ ಸರ್ಕಾರ ರಾಜೀನಾಮೆ ಪಡೆಯಲೇ ಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶಿವಾನಂದ ಪಾಟೀಲ್‌ ಅವರ ಹೇಳಿಕೆಯನ್ನು ಖಂಡಿಸದೆ ಇರುವುದು ಕೂಡ ರೈತರಿಗೆ ಮಾಡುತ್ತಿರುವ ಅಪಮಾನ. ರೈತರು ಸಚಿವರುಗಳ ಮನೆಗೆ ನುಗ್ಗುವುದಕ್ಕೂ ಮುನ್ನ ಎಚ್ಚೆತ್ತು ರಾಜೀನಾಮೆ ಪಡೆದು ರೈತರಿಗೆ ಗೌರವ ನೀಡಲಿ ಎಂದರು.

ಪ್ರತಿಭಟನೆಯ ಕಿತ್ತು ಜೋರಾಗುತ್ತಿದ್ದಂತೆ ಪೊಲೀಸರು ಎಚ್ಚತ್ತು ಪ್ರತಿಭಟನೆ ನಿರತ ರೈತ ಸಂಘದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ಪೊಲೀಸರು ಮತ್ತು ಧರಣಿ ನಿರತರ ನಡುವೆ ಕೆಲಕಾಲ ತಳ್ಳಾಟ ನೂಕಾಟದ ಘಟನೆಯೂ ಉಂಟಾಗಿತ್ತು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ