LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ರಾಮ್ ಪ್ರಸಾತ್ ಮನೋಹರ್ ಭರವಸೆ

ಬೆಂಗಳೂರು : ನಗರದ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಮತ್ತು ಸಮರ್ಪಕವಾಗಿ ನೀರು ಪೂರೈಸಲು ಮಂಡಳಿ ಬದ್ಧವಾಗಿದೆ ಎಂದು ಬೆಂಗಳೂರು ಜಲ ಮಂಡಳಿ‌ ಅಧ್ಯಕ್ಷರಾದ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

ಔಟರ್ ರಿಂಗ್ ರೋಡ್ ಕಂಪನೀಸ್ ಅಸೊಸಿಯೇಶನ್ (ಆರ್ಕಾ) ಪದಾಧಿಕಾರಿಗಳೊಂದಿಗೆ ಗುರುವಾರ ವೇಬಿನಾರ್ ಮೂಲಕ ಸಭೆ ನಡೆಸಿದ ಅವರು, ಬೆಂಗಳೂರು ನಗರದಲ್ಲಿ ನೀರಿನ ಕೊರತೆಯನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿದೆ. ಇದೆ ರೀತಿ ಐಟಿ, ಬಿಟಿ ಕಂಪನಿಗಳಿಗೂ ಸಮರ್ಪಕವಾಗಿ ನೀರು ಪೂರೈಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾವೇರಿ 5ನೇ ಹಂತ ಪೂರ್ಣಗೊಂಡರೆ ನಗರಕ್ಕೆ ಪ್ರತಿದಿನ ಹೆಚ್ಚುವರಿ 775 mld ನೀರು ಸಿಗಲಿದೆ. ಇದರಿಂದ ನೀರಿನ ಕೊರತೆ ಕಡಿಮೆಯಾಗಲಿದೆ ಎಂದು ಅಧ್ಯಕ್ಷರು ತಿಳಿಸಿದರು.

ಅಂತರ್ಜಲ ಕುಸಿತದಿಂದ ಕುಡಿಯುವ ನೀರಿನಲ್ಲಿ ಕೊರತೆಯಾಗದೆ. ಈ ಹಂತದಲ್ಲಿ ಅನಾವಶ್ಯಕವಾಗಿ ನೀರು ಪೋಲಾಗದಂತೆ ನೋಡಿಕೊಳ್ಳುವುದು ಪ್ರಮುಖವಾಗಿದೆ. ಅನಾವಶ್ಯಕವಾಗಿ ನೀರನ್ನು ಪೋಲು ಮಾಡುವವರಿಗೆ ದಂಡ ವಿಧಿಸುವುದರಿಂದ ನೀರಿನ ಮೌಲ್ಯ ದ ಬಗ್ಗೆ ಅರಿವಾಗುತ್ತದೆ ಎಂದು ಹೇಳಿದರು.

ಮಿತವಾಗಿ ನೀರನ್ನು ಬಳಸುವಂತೆ ಮೂಲಕ ಕಂಪನಿಯ ನೌಕರರಲ್ಲಿ ಜಾಗೃತಿ ಮೂಡಿಸಬೇಕು. ನೀರಿನ ಸದ್ಬಳಕೆ ಹಾಗೂ ಅದರ ಸೂಕ್ತ ಬಳಕೆಗಾಗಿ ಜಲಮಂಡಳಿ ವತಿಯಿಂದ ಮೂರು ಸೂತ್ರಗಳ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ. ನೀರು ಸಂರಕ್ಷಣೆ, ಸಂಸ್ಕರಿಸಿದ ನೀರು ಬಳಕೆ, ಮಳೆ ನೀರು ಸಂರಕ್ಷಣೆ ಮತ್ತು ಮರುಪುರಣದ ಬಗ್ಗೆ ಜಾಗೃತಿ ಮೂಡಿಸಿ ಎಂದು ಹೇಳಿದರು.

ಅಗತ್ಯವಿರುವ ಕಂಪನಿಗಳು ಹಾಗೂ ಸಂಸ್ಥೆಗಳಿಗೆ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲು ಜಲಮಂಡಳಿ ಸಿದ್ಧವಿದೆ ಎಂದು ಹೇಳಿದರು.

ಅಪಾರ್ಟ್‌ಮೆಂಟ್ ಗಳು, ವಾಣಿಜ್ಯ ಕಟ್ಟಡಗಳು, ಕೈಗಾರಿಕಾ ಪ್ರದೇಶಗಳು, ರೆಸ್ಟೋರೆಂಟ್ ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ನೀರು ಪೋಲಾಗುವುದನ್ನ ತಡೆಯಲು ಏರಿಯೇಟರ್‌ ಹಾಗೂ ಫ್ಲೋ ಕಂಟ್ರೋಲರ್‌ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಮಂಡಳಿ ಕ್ರಮವಹಿಸಲಾಗುತ್ತಿರುವುದನ್ನು ವಿವರಿಸಿದ ಅಧ್ಯಕ್ಷ ಡಾ.ರಾಮ್‌ ಪ್ರಸಾತ್ ಮನೋಹರ್ ಅವರು ತಾವು ಕೂಡ ಇದಕ್ಕೆ ಸಾಥ್ ನೀಡಬೇಕು ಎಂದು ಅವರು ಹೇಳಿದರು.

ನೀರಿನ ಸಮಸ್ಯೆಗೆ ಪಂಚ ಸೂತ್ರ ಸಿದ್ಧಗೊಳಿಸಿದ್ದು, ಕಂಪನಿಗಳು ಈ ಐದು ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಗ್ರೀನ್ ಸ್ಟಾರ್ ಚಾಲೆಂಜ್ ಗೆ ಮುಂದಾಗಬೇಕು ಎಂದು ಕರೆ ನೀಡಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ