LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್

ಬೆಂಗಳೂರು : ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೇ ಕಾಮಗಾರಿಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಿ ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ ಎಸ್ ರಮೇಶ್ ತಿಳಿಸಿದರು.

ಬೆಂಗಳೂರು ಪೂರ್ವ ನಗರ ಪಾಲಿಕೆ ಇಂಜಿನಿಯರಿಂಗ್ ಇಲಾಖೆಗೆ ಸಂಬಂಧಿಸಿದಂತೆ ಸರ್ಕಾರದ ವಿವಿಧ ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ ಎಸ್ ರಮೇಶ್* ರವರು ನಡೆಸಿದರು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಷಯಗಳು:-


* ಕರ್ನಾಟಕ ಸರ್ಕಾರದ ಅನುದಾನದಡಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ದಿ ಕಾರ್ಯಕ್ರಮದಡಿ ಅನುಮೋದನೆಗೊಂಡಿರುವ ಎಲ್ಲಾ ಪ್ಯಾಕೇಜ್ ಕಾಮಗಾರಿಗಳನ್ನು ಕೂಡಲೇ ಆರಂಭಿಸಲು ಎಲ್ಲಾ ವಿಭಾಗಗಳ ಕಾರ್ಯ ಪಾಲಕ ಅಭಿಯಂತರರಿಗೆ ಸೂಚಿಸಿದರು.

* ಸಿವಿಲ್ ಕಾಮಗಾರಿ ಪೂರ್ಣಗೊಳಿಸಿದ ನಂತರವೇ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

* ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೇ ಕಾಮಗಾರಿಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

* ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆ ಅಗಲೀಕರಣಕ್ಕಾಗಿ ಮೀಸಲಿರಿಸಿರುವ ಎಲ್ಲಾ ಪರಿತ್ಯಾಜಿತ ಸ್ವತ್ತುಗಳನ್ನು ಈ ಕೂಡಲೇ ನಗರ ಪಾಲಿಕೆ ವಶಕ್ಕೆ ಪಡೆಯಲು ಆದೇಶಿಸಿದರು.

* ಹೂಡಿ ಜಂಕ್ಷನ್ ಬಳಿ ಪಾದಚಾರಿ ಒತ್ತುವರಿಯಾಗಿರುವುದನ್ನು ತೆರವುಗೊಳಿಸಲು ಸೂಚಿಸಿದರು.

* ಸಾದರಮಂಗಲ ಗ್ರಾಮದ ಬಳಿ ಒಣ ಕಸ ಸಂಗ್ರಹಣ ಕೇಂದ್ರಕ್ಕೆ ಜಾಗ ಅಂತಿಮಗೊಳಿಸಲು ಸೂಚಿಸಿದರು.

* ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕೆರೆಗಳ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿರು.

* ಹೊರ ವರ್ತುಲ ರಸ್ತೆಗಳಲ್ಲಿನ ಪ್ರವೇಶ ಮತ್ತು ನಿರ್ಗಮ ದ್ವಾರಗಳ ಸ್ಥಳಾಂತರವನ್ನು ಸಂಚಾರಿ ಪೊಲೀಸ್ ರವರೊಂದಿಗೆ ಸಮನ್ವಯ ಸಾಧಿಸಿ ಪೂರ್ಣಗೊಳಿಸಲು ತಿಳಿಸಿದರು.

* ಸಂಚಾರ ದಟ್ಟಣೆ ತಗ್ಗಿಸಲು ಬಸ್ ಶಲ್ಟರ್ ಗಳ ಸ್ಥಳಾಂತರಕ್ಕೆ ಕೂಡಲೇ ಕ್ರಮ ವಹಿಸುವಂತೆ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ತಿಳಿಸಿದರು.

* ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ ರಸ್ತೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಸ್ಕೈವಾಕ್ ಗಳನ್ನು ಅಳವಡಿಸಲು ಕ್ರಮವಹಿಸಲು ಅಗತ್ಯ ಕ್ರಮ ವಹಿಸಿ

* ಸ್ವಚ್ಚ ಸರ್ವೇಕ್ಷಣ ಅಭಿಯಾನದಡಿ ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿ ಸೌಂದರ್ಯೀಕರಣ ಗೊಳಿಸಲು ಸ್ವಯಂ ಸೇವಕರುಗಳು, ಎನ್ ಜಿ ಓ, ವಿದ್ಯಾರ್ಥಿಗಳು, ಸ್ವಚ್ಚತಾ ಕಾರ್ಮಿಕರನ್ನೊಳಗೊಂಡ ತಂಡ ರಚಿಸಿ, ಅನುಷ್ಟಾನಗೊಳಿಸುವುದು.

ಇಂದು ನಡೆದ ಸಭೆಯಲ್ಲಿ ಅಪರ ಆಯುಕ್ತರು ಲೋಖಂಡೆ ಸ್ನೇಹಲ್ ಸುಧಾಕರ್, ಮುಖ್ಯ ಅಭಿಯಂತರರಾದ ಲೋಕೇಶ್ ಮತ್ತು ಕೃಷ್ಣ ಮೂರ್ತಿ, ಉಪ ಆಯುಕ್ತರು, ಎಲ್ಲಾ ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ