LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿರಿಗಾಳಿ ಸಹಿತ ಮಳೆಗೆ ದುರಂತ: ದಕ್ಷಿಣದಲ್ಲಿ ಸಮರೋಪಾದಿಯಲ್ಲಿ ರಮೇಶ್ ನೇತ್ರದಲ್ಲಿ ಕಾರ್ಯ

ಬೆಂಗಳೂರು : ಸಾಹೇಬ್ರು ನಗರದಲ್ಲಿ ನಿನ್ನೆ ಸುರಿತ ಬಾರಿ ಮಳೆ ಬಿರುಗಾಳಿ ಇಂದ ಸಮಸ್ಯೆಗಳು ಹಾಗೂ ಆನೆಗಳ ಬಗ್ಗೆ ನಗರ ಪ್ರದರ್ಶಣೆ ಹಾಕಿ ಸಂಚಾರ ದಟ್ಟಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಪಾಲಿಕೆ ಆಯುಕ್ತರಾದ ಕೆ.ಎನ್. ರಮೇಶ್ .


ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರಾದ ಕೆ.ಎನ್. ರಮೇಶ್ ಅವರು ಇಂದು ನಗರದ ಪ್ರಮುಖ ಸಂಚಾರ ದಟ್ಟಣೆಯ ಪ್ರದೇಶಗಳಿಗೆ ಹಾಗೂ ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.



*ರಾಗಿಗುಡ್ಡ - ರಾಘವೇಂದ್ರ ಸ್ವಾಮಿ ಮಠ ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಚಿಂತನೆ* 


ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್‌ನ ಡೌನ್-ರ್ಯಾಂಪ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ಆಯುಕ್ತರು ಸೂಕ್ಷ್ಮವಾಗಿ ಗಮನಿಸಿದರು. ಈ ಭಾಗದಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ರಾಘವೇಂದ್ರ ಸ್ವಾಮಿ ಮಠದ ಜಂಕ್ಷನ್ ಬಳಿ ಉದ್ದೇಶಿತ ಕೆಳಸೇತುವೆ ನಿರ್ಮಾಣದ ಕುರಿತು ಟ್ರಾಫಿಕ್ ಪೊಲೀಸ್ ಹಾಗೂ ತಾಂತ್ರಿಕ ತಂಡದೊಂದಿಗೆ ಚರ್ಚಿಸಿ, ಪ್ರಾಥಮಿಕ ವರದಿಯನ್ನು ಪರಿಶೀಲಿಸಿದರು.


*ಸಿಲ್ಕ್ ಬೋರ್ಡ್ ಜಂಕ್ಷನ್ - ನೀರು ನಿಲ್ಲುವ ಸಮಸ್ಯೆಗೆ ಕಡಿವಾಣ ಹಾಕಿ*


ನಗರದ ಪ್ರಮುಖ ಜಂಕ್ಷನ್ ಆದ ಸಿಲ್ಕ್ ಬೋರ್ಡ್‌ನಲ್ಲಿ ಮಳೆಗಾಲದಲ್ಲಿ ಜೋರು ಮಳೆ ಬಂದಾಗ ಉಂಟಾಗುವ ನೀರು ನಿಲ್ಲುವ ಸ್ಥಳಗಳಿಗೆ ಭೇಟಿ ನೀಡಿದ ಆಯುಕ್ತರು, ಅದಕ್ಕೆ ಕಾರಣವಾದ ತಾಂತ್ರಿಕ ಲೋಪಗಳನ್ನು ಶೀಘ್ರ ಪತ್ತೆ ಹಚ್ಚಿ ಮಳೆನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಗೆ ತಕ್ಷಣದ ಕ್ರಮ ಕೈಗೊಳ್ಳಲು ಸೂಚಿಸಿದರು.


*ಬನಶಂಕರಿ ದೇವಸ್ಥಾನ ಜಂಕ್ಷನ್ - ವೃತ್ತಾಕಾರದ ಸ್ಕೈವಾಕ್ ನಿರ್ಮಾಣಕ್ಕೆ ಸಿದ್ಧತೆ*


ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸುರಕ್ಷತೆಗಾಗಿ ನಿರ್ಮಿಸಲು ಉದ್ದೇಶಿಸಿರುವ ವೃತ್ತಾಕಾರದ ಸ್ಕೈ ವಾಕ್ ನಿರ್ಮಾಣದ ಕಾಮಗಾರಿ ಪ್ರಾರಂಭದ ಹಂತದಲ್ಲಿ ಇದ್ದು, ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.


ಬೆಂಗಳೂರು ದಕ್ಷಿಣ ಭಾಗವನ್ನು ಟ್ರಾಫಿಕ್ ದಟ್ಟಣೆಯಿಂದ ಮುಕ್ತಗೊಳಿಸಲು ಹಾಗೂ ಸುಸಜ್ಜಿತ ಮೂಲಸೌಕರ್ಯದ ಪ್ರದೇಶವನ್ನಾಗಿ ಮಾಡಲು ಪಾಲಿಕೆಯು ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ಆಯುಕ್ತರು ತಿಳಿಸಿದರು.


ಈ ವೇಳೆ ಪಾಲಿಕೆಯ ಮುಖ್ಯ ಅಭಿಯಂತರರಾದ ಶ್ರೀ ಬಸವರಾಜ ಕಬಾಡೆ, ಶ್ರೀ ಕೆ ವಿ ರವಿ ಹಾಗೂ ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಇನ್ನಿತರರು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ