LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ರೇಪ್, ಹತ್ಯೆ, ವಿಸಿಎನ್ ವೈದ್ಯರ ಸಂಘದಿಂದ ಖಂಡನೆ

ಬೆಂಗಳೂರು: ಕೋಲ್ಕತಾ ದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಹತ್ಯೆ ಹಾಗೂ ಆಸ್ಪತ್ರೆ ಮೇಲೆ ಪ್ರತಿಭಟನಾಕಾರರ ದಾಳಿಗೆ ವಿ.ಸಿ.ಎನ್.ವೈದ್ಯರ ಕ್ಷೇಮಾಭಿವೃದ್ಧಿ ಸಂಘ ಖಂಡನೆ ವ್ಯಕ್ತವಾಗಿದೆ.

ಸಂಘದ ರಾಜ್ಯಾಧ್ಯಕ್ಷ ಡಾ.ರಾಜು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ  ಮಾತನಾಡಿ, ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದು, ಹತ್ಯೆ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಮತ್ತು ಆಸ್ಪತ್ರೆ ಮೇಲೆ ದಾಂಧಲೆ ಮಾಡಿದವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿ.ಸಿ.ಎನ್.ಡಾಕ್ಟರ್ಸ್ ವೇಲ್ ಫೇರ್ ಅಸೋಸಿಯೇಷನ್ ಆಗ್ರಹಿಸಿದೆ.

ಕೊಲ್ಕತ್ತಾ ಘಟನ ಅತ್ಯಂತ ಅಮಾನವೀಯವಾಗಿದ್ದು, ಈ ಷಡ್ಯಂತ್ರದ ಹಿಂದೆ ಇರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ಸಮೂಹದ ಮೇಲೆ ವಿಶ್ವಾಸ ಮೂಡುವ ರೀತಿಯಲ್ಲಿ ಸರ್ಕಾರ ಹೆಜ್ಜೆ ಇಡಬೇಕು ಎಂದು ಹೇಳಿದರು. ಎಲ್ಲಾ ರೀತಿಯ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸರ್ಕಾರಿ, ಖಾಸಗಿ ಚಿಕಿತ್ಸಾಲಯಗಳು ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ವೈದ್ಯರು, ಆರೋಗ್ಯ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಬೇಕು.

ವೈದ್ಯರನ್ನು ಗೌರವದಿಂದ ಕಾಣುವ ಬದಲು ಹತ್ಯೆ ಮಾಡುವ ಹಂತದಲ್ಲಿ ನೋಡಬೇಕಾಗಿದೆ!

ವೈದ್ಯರು ದೇವರ ಸಮಾನವಾಗಿದ್ದು, ರೋಗಿಗಳ ಜೀವ ರಕ್ಷಿಸುವ ವೈದ್ಯರನ್ನು ಗೌರವದಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದರು.ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ, ಹಿಂಸೆ, ದಾಂಧಲೆ ನಡೆಯುತ್ತಿರುವುದು ವಿಷಾದಕರ. ದಾಳಿ, ಗಲಭೆ, ಅಹಿತಕರ ಘಟನೆಗಳನ್ನು ತಡೆಯಲು ಕೇಂದ್ರ ಸರ್ಕಾರ ರಚನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪೊಲೀಸ್ ಮತ್ತು ಆರೋಗ್ಯ ಇಲಾಖೆಯಿಂದ ಆರೋಗ್ಯ ಸಂಸ್ಥೆಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಕರ್ತವ್ಯ ನಿರತ ವೈದ್ಯರನ್ನು ಗೌರವದಿಂದ ನೋಡಬೇಕು. ಆರೋಗ್ಯ ಕಾರ್ಯಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಮತ್ತು ಸೇವೆಯಲ್ಲಿ ನಿ ರತರಾಗಿರುವವರಿಗೆ ರಕ್ಷಣೆ ನೀಡಲು ಕಠಿಣ ಕಾನೂನು ಜಾರಿಗೆಯಾಗಬೇಕು ಎಂದು ಕೇಂದ್ರ ಮತ್ತು ' ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ವೈದ್ಯರು ಯಾವುದೇ ಭಯವಿಲ್ಲದೇ ಕರ್ತವ್ಯ ನಿರ್ವಹಿಸಬೇಕು.

ರೋಗಿಗಳ ಆರೈಕೆ ಮತ್ತು ಚಿಕಿತ್ಸೆ ನೀಡುವಾಗ ಯಾವುದೇ ಜಾತಿ, ಧರ್ಮಗಳ ಬೇಧಭಾವವಿಲ್ಲದೇ ಕಾರ್ಯನಿರ್ವಹಿಸುತ್ತಾರೆ. ಎಂತಹ ಸಂದರ್ಭಗಳಲ್ಲೂ ತುರ್ತು ಮತ್ತು ಅಗತ್ಯ ಆರೋಗ್ಯ ಸೇವೆಗಳು ಕರ್ತವ್ಯವಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಡಾ. ಬಿಟಿ ರಮೇಶ್,  ಡಾ.ಭೋಜಮ್ಮ, ಡಾ. ವೆಂಕಟರಾಮ್, ಡಾ.ಚಂದ್ರಶೇಖರ್, ಡಾ.ಚಂದ್ರಿಕಾ ಆನಂದ್, ಡಾ.ಪ್ರೀತ್ ಶೆಟ್ಟಿ, ಡಾ ಮಂಜುನಾಥ್ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ