
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಯ್ದೆ 1964ರ ಸೆಕ್ಷನ್ 84 ಮತ್ತು 88ರ ಅಡಿಯಲ್ಲಿ ಈ ಹಿಂದೆ ನೀಡಲಾಗಿದ್ದ ಅಧಿಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಲಮಂಡಳಿ ಅಧ್ಯಕ್ಷರು ಎಲ್ಲಾ ಕಾರ್ಯಪಾಲಕ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
*ಪ್ರಮುಖ ಸೂಚನೆಗಳು:*
*ಮಾರ್ಚ್ 7 ರ ಒಳಗೆ ಕಡ್ಡಾಯ ನೋಂದಣಿ*: ಖಾಸಗಿ ಒಳಚರಂಡಿ ವ್ಯವಸ್ಥೆಯ ಮ್ಯಾನ್‌ಹೋಲ್ ಮತ್ತು ಎಸ್‌ಟಿಪಿ ಘಟಕಗಳನ್ನು ಸ್ವಚ್ಛಗೊಳಿಸುವ ವಾಹನಗಳ ಮಾಲೀಕರು ಮತ್ತು ಏಜೆನ್ಸಿಗಳನ್ನು ಗುರುತಿಸಿ, 07.03.2026 ರೊಳಗೆ ಕಡ್ಡಾಯವಾಗಿ ವಿಭಾಗ ಮಟ್ಟದಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
*ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ:*
ವಾಣಿಜ್ಯ ಕಟ್ಟಡಗಳು, ವಸತಿ ಸಮುಚ್ಚಯಗಳು, ಗ್ರೂಪ್ ಹೌಸ್ ಮತ್ತು ಖಾಸಗಿ ಬಡಾವಣೆಗಳಲ್ಲಿರುವ ಎಸ್‌ಟಿಪಿ ಮತ್ತು ಮ್ಯಾನ್‌ಹೋಲ್‌ಗಳ ನಿರ್ವಹಣೆಯನ್ನು ಕಡ್ಡಾಯವಾಗಿ ಜಲಮಂಡಳಿಯಲ್ಲಿ ನೋಂದಾಯಿತವಾಗಿರುವ ಏಜೆನ್ಸಿಗಳ ಮುಖಾಂತರವೇ ಮಾಡಿಸಬೇಕು ಎಂದು ಸೂಚಿಸಲಾಗಿದೆ.
*ಅನಾಹುತಗಳಿಗೆ ಮಾಲೀಕರೇ ಹೊಣೆ:* ನೋಂದಾಯಿಸಲ್ಪಡದ ಅಥವಾ ಅನಧಿಕೃತ ವ್ಯಕ್ತಿಗಳ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡಾಗ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ, ಆಯಾ ವಾಣಿಜ್ಯ ಕಟ್ಟಡ / ವಸತಿ ಸಮುಚ್ಚಯ / ಖಾಸಗಿ ಬಡಾವಣೆಗಳ ಮಾಲೀಕರು ಅಥವಾ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ (RWA) ರವರೇ ನೇರ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಲಾಗಿದೆ.
ಈ ನಿಯಮಾವಳಿಗಳ ಕುರಿತು ಎಲ್ಲ ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಚಯಗಳ ಮಾಲೀಕರು ಹಾಗೂ ಅಸೋಸಿಯೇಷನ್‌ಗಳಿಗೆ ಕೂಡಲೇ ಸೂಚನಾ ಪತ್ರವನ್ನು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.