LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಚಿತ್ರರಂಗದ ಹೆಸರಾಂತ ನಟ ನಾನಾ ಪಾಟೇಕರ್ ಅವರ ನಿಧನ, ನೋವುಂಟು ಮಾಡಿದೆ,ಸಿದ್ದರಾಮಯ್ಯ

ಬೆಂಗಳೂರು: ಹಿಂದಿ ಮತ್ತು ಮರಾಠಿ ಚಿತ್ರಗಳ ಜೊತೆ ಕನ್ನಡ, ತೆಲುಗು, ತಮಿಳು ಹೀಗೆ ಅನೇಕ ಭಾಷೆಯ ಸಿನಿಮಾಗಳಲ್ಲಿ ಅಭಿನಯಿಸಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ನಾನಾ ಪಾಟೇಕರ್ ಮೂಲತ: ಮರಾಠಿ ರಂಗಭೂಮಿಯ ಕೊಡುಗೆ ಅಪಾರವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

ತಮ್ಮ ವಿಶಿಷ್ಟ ಬಗೆಯ ಅಭಿನಯ ಮತ್ತು ಮಾತಿನ ಶೈಲಿಯಿಂದ ಜನಮನ ಸೆಳೆದಿದ್ದ ನಾನಾ ಪಾಟೇಕರ್ ಒಬ್ಬ ಅಭಿಜಾತ ಕಲಾವಿದ. ಅವರು ಬಿಟ್ಟುಹೋದ ಸ್ಥಾನವನ್ನು ಮತ್ತೊಬ್ಬ ಕಲಾವಿದ ತುಂಬುವುದು ಕಷ್ಟ. 

ತಮ್ಮ ದುಡಿಮೆಯ ಒಂದಷ್ಟು ಪಾಲನ್ನು ಅಬಲರ ಸೇವೆಗಾಗಿಯೇ ಬಳಸುತ್ತಿದ್ದ ಸಮಾಜಮುಖಿ ಜೀವವನ್ನು ನಾವಿಂದು ಕಳೆದುಕೊಂಡಿದ್ದೇವೆ. 

ಪದ್ಮಶ್ರೀ, ಫಿಲ್ಮ್‌ಫೇರ್ ‌ನಂತಹ ಅನೇಕ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದ ನಾನಾ ಪಾಟೇಕರ್ ಪ್ರಶಸ್ತಿಗಳನ್ನು ಮೀರಿದ ಪ್ರೀತಿ-ಅಭಿಮಾನದ ಸ್ಥಾನವನ್ನು ಚಲನಚಿತ್ರ ಪ್ರಿಯರ ಹೃದಯದಲ್ಲಿ ಪಡೆದವರು.

ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ಮತ್ತು ಅಭಿಮಾನಿ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೃಹತ್ ‘ಸೇವಾ ಜ್ಯೋತಿ ಯಾತ್ರೆ’- ಬೈಕ್ ರಾಲಿಗೆ ಚಾಲನೆ – ‘ವಿಕಸಿತ ಭಾರತ – ಸಂಕಲ್ಪ ಸಭೆ’ ಯಶಸ್ವಿಸಾರ್ವಜನಿಕ ಸಾರಿಗೆಯಲ್ಲಿ ನಾವೀನ್ಯತೆ: ಬಿಎಂಟಿಸಿಗೆ ‘ಚೇಂಜ್ ಮೇಕರ್ ಅವಾರ್ಡ್ಹೊಂಡಾ ಕಾರ್ಸ್ ಇಂಡಿಯಾದಿಂದ ಹೊಸ ಹೊಂಡಾ ಎಲಿವೇಟ್ ಬಿಡುಗಡೆಸ್ಟಿಂಗ್ ಬಗ್ಗೆ ಯಾರಿಗೆ ಜ್ಞಾನ ಜಾಸ್ತಿ ಅನ್ನೋದು ಜಗತ್ತಿಗೆ ಗೊತ್ತಿದೆ - ನಿಖಿಲ್ ಕುಮಾರಸ್ವಾಮಿ ಟಾಂಗ್50 ವರ್ಷಗಳಿಂದ ದಲಿತರ ಸಮಸ್ಯೆ ಈಡೇರಿಲ್ಲ ನೀವಾದರೂ ಈಡೇರಿಸ್ತೀರಾ? ನವದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆಯಲ್ಲಿ ದೆಹಲಿ ಪೊಲೀಸರಿಂದ ಗುಂಡಗಿರಿ?ಬ್ಲಾಕ್‌, ಮಂಡಲ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು; ‘ಮತ ಉಳಿಸಿ–ದೇಶ ಉಳಿಸಿ’ ಹೋರಾಟ ತೀವ್ರಗೊಳಿಸಲು ನಿರ್ಧಾರಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನ ಬಳಸಿ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಸ್ಥಿತಿಗತಿ ಸಮೀಕ್ಷೆಎಸ್.ಬಿಂಗೀಪುರದಲ್ಲಿ ಪಾಲಿಕೆಯ ಪ್ರಾಣಿ ಚಿತಾಗಾರ ಸ್ಥಾಪನೆಗೆ ಯೋಜನೆ: ಆಯುಕ್ತ ಕೆ.ಎನ್. ರಮೇಶ್ಟಿ.ಡಿ.ಆರ್. ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಹಿತಿ/ತಾಂತ್ರಿಕ ಕಾರ್ಯಾಗಾರ