LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸ್ಪಂದನಶೀಲತೆ ಮುಖ್ಯ: ಎಂ ಬಿ ಪಾಟೀಲ

ಬೆಂಗಳೂರು: ಹೂಡಿಕೆದಾರರ ನಿರೀಕ್ಷೆಗೆ ತಕ್ಕಂತೆ ಕ್ಷಿಪ್ರವಾಗಿ ಸ್ಪಂದಿಸುವ ಮೂಲಕ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಕೆಐಎಡಿಬಿ ಅಧಿಕಾರಿಗಳು ಕರ್ನಾಟಕವನ್ನು ಕೈಗಾರಿಕಾ ಪ್ರಪಂಚದಲ್ಲಿ ಮತ್ತಷ್ಟು ಸುಭದ್ರವಾಗಿ ಮತ್ತು ಪುರೋಗಾಮಿಯಾಗಿ ಬೆಳೆಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸಲಹೆ ನೀಡಿದ್ದಾರೆ.

ಎರಡೂ‌ ಇಲಾಖೆಗಳ ಕಿರಿಯ ಶ್ರೇಣಿ ಮತ್ತು ಉನ್ನತಾಧಿಕಾರಿಗಳಿಗೆ ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾವೀಗ ಏಕಕಾಲದಲ್ಲಿ ಜಾಗತೀಕರಣ ಮತ್ತು ನೆರೆಹೊರೆಯ ರಾಜ್ಯಗಳ ಸ್ಪರ್ಧೆ ಎರಡನ್ನೂ ಎದುರಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ನಾವು ಹೂಡಿಕೆದಾರರು ನಮ್ಮ ರಾಜ್ಯವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಈ ಹೊಣೆಗಾರಿಕೆಯನ್ನು ನಿರ್ವಹಿಸುವ ಮೂಲಕ ರಾಜ್ಯದ ಉದ್ಯಮ ವಲಯದಲ್ಲಿ ಸುಗಮ ವಹಿವಾಟು ಸಂಸ್ಕೃತಿಯನ್ನು ರೂಪಿಸಬೇಕಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ.

ರಾಜ್ಯದ ಅರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ. ಹೀಗಾಗಿ ಹೂಡಿಕೆದಾರರಿಗೆ ಬೇರೆಬೇರೆ ಇಲಾಖೆಗಳಿಂದ ತ್ವರಿತವಾಗಿ ಅನುಮೋದನೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಹೂಡಿಕೆದಾರರು ವಿಳಂಬ ಗತಿಯನ್ನು ಸಹಿಸುವುದಿಲ್ಲ. ಸರಕಾರದ ನೀತಿಗಳು ಕೈಗಾರಿಕಾಸ್ನೇಹಿಯಾಗಿಯೇ ಇವೆ. ಅಧಿಕಾರಿಗಳು ಇವುಗಳ ಪ್ರಯೋಜನವನ್ನು ಉದ್ದಿಮೆದಾರರಿಗೆ ತಲುಪಿಸಬೇಕು. ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಈ ಮೂಲಕ ಕಾಣಿಕೆ ಕೊಡಬೇಕು ಎಂದು ಪಾಟೀಲ ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ