LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಳಂದ ಶಿವಲಿಂಗ ಅಪವಿತ್ರಗೊಳಿಸಿದ ಗಲಭೆಕೋರರು: ಕೇಸ್ ವಾಪಸ್ ಆದೇಶ ತಕ್ಷಣ ರದ್ದುಗೊಳಿಸಲು ಆಗ್ರಹ

ಬೆಂಗಳೂರು : ಕರ್ನಾಟಕ ರಾಜ್ಯ ಸಚಿವ ಸಂಪುಟವು ಇತ್ತೀಚೆಗೆ 56 ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನಿಸಿದೆ. ಆದೇಶವನ್ನು ತಕ್ಷಣವೇ ರದ್ದುಗೊಳಿಸಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ ಮಾಡಿದೆ.

ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ, ಕರ್ನಾಟಕ ಮೋಹನ್ ಗೌಡ ಅವರು ಪತ್ರಿಕಾ ಹೇಳಿಕೆ ನೀಡಿ, ಇದರಲ್ಲಿ ಮುಖ್ಯವಾಗಿ, 2022ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಗಚೈತನ್ಯ ಮಹಾಪ್ರಭುಗಳ ಸಮಾಧಿ ಸ್ಥಳದಲ್ಲಿದ್ದ ಶಿವಲಿಂಗಕ್ಕೆ ಮಲಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಹಿಂದೂ ನಾಯಕರು ಸ್ಥಳವನ್ನು ಶುದ್ಧೀಕರಿಸುವಾಗ, ಅಲ್ಲಿನ ಮುಸ್ಲಿಂ ಸಮುದಾಯದವರು ದಂಗೆ ಎದ್ದು ಪೊಲೀಸ್ ಸಿಬ್ಬಂದಿ, ಹಿಂದೂ ನಾಯಕರು ಹಾಗೂ ಕೇಂದ್ರ ಸಚಿವರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಪ್ರಕರಣದಲ್ಲಿ ಮುಸ್ಲಿಮರ ಮೇಲಿನ ಕೇಸ್‌ಗಳನ್ನು ವಾಪಸ್ ಪಡೆಯುವಂತೆ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪತ್ರ ಬರೆದಿದ್ದರು. ಡಿಜಿಪಿ ಹಾಗೂ ಪ್ರಾಸಿಕ್ಯೂಷನ್ ಇಲಾಖೆಯಂತಹ ಕಾನೂನು ಸಂಸ್ಥೆಗಳು ಈ ಪ್ರಕರಣವನ್ನು ವಾಪಸ್ ಪಡೆಯಲು ತೀವ್ರ ವಿರೋಧ ವ್ಯಕ್ತಪಡಿಸಿದ ನಂತರವೂ, ರಾಜ್ಯ ಸರ್ಕಾರವು ಮುಸ್ಲಿಮರ ಮೇಲಿನ ಈ ಪ್ರಕರಣವನ್ನು ವಾಪಸ್ ಪಡೆದಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಈ ಹಿಂದೆ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ ಮತ್ತು ಪೊಲೀಸರ ಮೇಲೆ ಆಕ್ರಮಣ ಮಾಡಿದ ಗಂಭೀರ ಪ್ರಕರಣವನ್ನು ಸರ್ಕಾರ ವಾಪಸ್ ಪಡೆದಾಗ, ಉಚ್ಚ ನ್ಯಾಯಾಲಯವು ಸರ್ಕಾರದ ಆ ಆದೇಶವನ್ನು ರದ್ದುಗೊಳಿಸಿತ್ತು. ಅದಕ್ಕೂ ಮುನ್ನ ಕಾಂಗ್ರೆಸ್ ಸರ್ಕಾರವು 176 ಪಿಎಫ್‌ಐ (PFI) ಮತ್ತು ಎಸ್‌ಡಿಪಿಐ (SDPI) ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿತ್ತು. ಪ್ರಸ್ತುತ ರಾಜ್ಯ ಸರ್ಕಾರವು ಸಂಪೂರ್ಣವಾಗಿ ಓಲೈಕೆ ರಾಜಕಾರಣದಲ್ಲಿ ತೊಡಗಿದೆ. ಗಲಭೆ, ದಂಗೆ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿರುವುದು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿರುವ ಅತ್ಯಂತ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯಬಾರದು.

ರಾಜ್ಯ ಸರ್ಕಾರವು ಡಿಜಿಪಿ, ಐಜಿಪಿ ಮತ್ತು ಪ್ರಾಸಿಕ್ಯೂಷನ್ ಇಲಾಖೆಗಳು ನೀಡಿರುವ ಕಾನೂನಾತ್ಮಕ ಸಲಹೆಗಳನ್ನು ಗೌರವಿಸಬೇಕು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ರಾಜಕೀಯ ಪ್ರಭಾವದಿಂದ ಮುಕ್ತಗೊಳಿಸಬೇಕು. ಇಂತಹ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯುವುದರಿಂದ ಅಪರಾಧಿಗಳಿಗೆ ಮತ್ತೊಮ್ಮೆ ಕ್ರಿಮಿನಲ್ ಚಟುವಟಿಕೆಗಳನ್ನು ಮಾಡಲು ಸರ್ಕಾರವೇ ಕುಮ್ಮಕ್ಕು ನೀಡಿದಂತಾಗುತ್ತದೆ. ಆದ್ದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ತಕ್ಷಣವೇ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಒತ್ತಾಯಿಸುತ್ತಿದೆ ಎಂದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
    ‘TCS’ ಮತ್ತು ‘SBI’ ನಂತರ ‘ವಿಪ್ರೋ’ದಲ್ಲೂ ‘ಕಾರ್ಪೊರೇಟ್ ಜಿಹಾದ್ ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ : HJSಆಳಂದ ಶಿವಲಿಂಗ ಅಪವಿತ್ರಗೊಳಿಸಿದ ಗಲಭೆಕೋರರು: ಕೇಸ್ ವಾಪಸ್ ಆದೇಶ ತಕ್ಷಣ ರದ್ದುಗೊಳಿಸಲು ಆಗ್ರಹನಾಯಿಕಡಿತ ಪ್ರಕರಣಗಳನ್ನು ಶೂನ್ಯವಾಗಿಸಿ ಮಾದರಿ ವಾರ್ಡ್ ನಿರ್ಮಾಣ ಮಾಡಿ: ಡಾ. ರಾಜೇಂದ್ರ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಿ:  ಕವಿತಾ ರಾಜಾರಾಂಕೆ.ಆರ್. ಮಾರುಕಟ್ಟೆ  ಹಾಗೂ ಸುತ್ತಲಿನ ಪ್ರದೇಶ ಸ್ವಚ್ಛತೆ ಕೈಗೊಳ್ಳಿ: ವೆಂಕಟಾಚಲಪತಿರಾಜ್ಯಸಭೆ ಸ್ಥಾನದ ಬಗ್ಗೆ ನನಗೆ ವ್ಯಾಮೋಹವಿಲ್ಲ, ಅದರ ಬಗ್ಗೆ ನಾನು ಬೇಡಿಕೆ ಇಟ್ಟಿರಲಿಲ್ಲಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ ಕನಸು ಸಾಕಾರಕ್ಕೆ ಬದ್ಧತೆಯಿಂದ ದುಡಿಯುತ್ತೇವೆ: HDKನೂರು ದಿನಗಳಲ್ಲಿ ಕೆಐಎಡಿಬಿ ಸಂಪೂರ್ಣ ಡಿಜಿಟಲೀಕರಣ: ಎಂ ಬಿ ಪಾಟೀಲ ಕಟ್ಟುನಿಟ್ಟಿನ ಗಡುವುಪ್ರಜಾಪ್ರಭುತ್ವ ಹಾಳು ಗೆಡುವ ಮೂಲಕ ಪ್ರಧಾನಿಯಾಗಿ ಮೋದಿ ಮುಂದೆ ಮುರಿಯುತ್ತಿದ್ದಾರೆ